AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪುತ್ರ ವಿನೀಶ್​ ಹುಟ್ಟುಹಬ್ಬ, ಶುಭ ಹಾರೈಸಿದ ವಿಜಯಲಕ್ಷ್ಮಿ ದರ್ಶನ್

ಪುತ್ರನ ಹುಟ್ಟುಹಬ್ಬಕ್ಕೆ ವಿಜಯಲಕ್ಷ್ಮಿ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಫೋಟೊ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ, ಮಗನಿಗಾಗಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಧನ್ವೀರ್ ಗೌಡ ಹಾಗೂ ವಿಜಯಲಕ್ಷ್ಮಿ ನಡುವಿನ ಜಟಾಪಟಿ ದೊಡ್ಡ ಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ಅದರ ನಡುವೆಯೂ ವಿಜಯಲಕ್ಷ್ಮಿ ಅವರು ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ದರ್ಶನ್ ಪುತ್ರ ವಿನೀಶ್​ ಹುಟ್ಟುಹಬ್ಬ, ಶುಭ ಹಾರೈಸಿದ ವಿಜಯಲಕ್ಷ್ಮಿ ದರ್ಶನ್
Vijayalakshmi Vineesh
ಮಂಜುನಾಥ ಸಿ.
|

Updated on:Oct 31, 2026 | 7:27 AM

Share

ಮುಖ್ಯಾಂಶಗಳು

  • ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬ ಇಂದು
  • ವಿನೀಶ್​​ಗೆ ಶುಭ ಹಾರೈಸಿದ ತಾಯಿ ವಿಜಯಲಕ್ಷ್ಮಿ
  • ವಿನೀಶ್ 18ನೇ ವರ್ಷದ ಹುಟ್ಟುಹಬ್ಬ

ದರ್ಶನ್ ಪುತ್ರ ವಿನೀಶ್​​ ಹುಟ್ಟುಹಬ್ಬ ಇಂದು (ಅಕ್ಟೋಬರ್ 31). ಇಂದು ದರ್ಶನ್ ಪುತ್ರ 18ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಪುತ್ರನ ಹುಟ್ಟುಹಬ್ಬಕ್ಕೆ ವಿಜಯಲಕ್ಷ್ಮಿ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಫೋಟೊ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ, ಮಗನಿಗಾಗಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಧನ್ವೀರ್ ಗೌಡ ಹಾಗೂ ವಿಜಯಲಕ್ಷ್ಮಿ ನಡುವಿನ ಜಟಾಪಟಿ ದೊಡ್ಡ ಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ಅದರ ನಡುವೆಯೂ ವಿಜಯಲಕ್ಷ್ಮಿ ಅವರು ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ದರ್ಶನ್, ತಾವೂ ಹಾಗೂ ಪುತ್ರ ಒಟ್ಟಿಗೆ ಇರುವ ಹಲವು ಫೋಟೊಗಳನ್ನು ಒಟ್ಟಿಗೆ ಹಂಚಿಕೊಂಡಿರುವ ವಿಜಯಲಕ್ಷ್ಮಿ, ಮಗನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುವ ಜೊತೆಗೆ ಕೆಲವು ಅಗತ್ಯ ಸಲಹೆಗಳನ್ನು ಸಹ ನೀಡಿದ್ದಾರೆ. ‘ನೀನು ಉತ್ತಮ ಚಾರಿತ್ರ್ಯ, ಧೈರ್ಯ ಮತ್ತು ದಯಾಗುಣವುಳ್ಳ ವ್ಯಕ್ತಿಯಾಗಿ ಬೆಳೆಯಲಿ. ಜೀವನವು ನಿನಗೆ ಅನೇಕ ಪಾಠಗಳನ್ನು ಕಲಿಸುತ್ತದೆ, ಆದ್ದರಿಂದ ಪ್ರತಿಯೊಂದು ಸವಾಲನ್ನೂ ಶಕ್ತಿಯಿಂದ ಎದುರಿಸು ಮತ್ತು ನಿನ್ನಲ್ಲಿರುವ ಒಳ್ಳೆಯತನವನ್ನು ಎಂದಿಗೂ ಕಳೆದುಕೊಳ್ಳಬೇಡ. ವಿನಿಶ್, ನಿನಗೆ 18ನೇ ಹುಟ್ಟುಹಬ್ಬದ ಶುಭಾಶಯಗಳು’ ಎಂದಿದ್ದಾರೆ. ಮಗನನ್ನು ‘ಬಂಗಾರ’ ಎಂದು ವಿಜಯಲಕ್ಷ್ಮಿ ಸಂಬೋಧಿಸಿದ್ದಾರೆ. ವಿನೀಶ್ ಸಹ ಹಾರ್ಟ್ ಇಮೋಜಿಗಳ ಮೂಲಕ ಅಮ್ಮನ ಶುಭಾಶಯವನ್ನು ಸ್ವೀಕರಿಸಿದ್ದಾರೆ.

ವಿನೀಶ್ ಹುಟ್ಟುಹಬ್ಬದಂದು ತಂದೆ ದರ್ಶನ್ ಜೈಲಿನಲ್ಲಿದ್ದಾರೆ. ಧನ್ವೀರ್ ಗೌಡ ಜೊತೆಗಿನ ಜಟಾಪಟಿಯ ಕಾರಣಕ್ಕೆ ವಿಜಯಲಕ್ಷ್ಮಿ ಅವರ ವಿರುದ್ಧವೂ ಎಫ್​​ಐಆರ್ ದಾಖಲಾಗಿದೆ. ಒಟ್ಟಾರೆ ಕುಟುಂಬದಲ್ಲಿ ಕಳೆದ ಎರಡು ವರ್ಷಗಳಿಂದಲೂ ತೀವ್ರ ಸಂಕಷ್ಟ ದುಃಖ ಮನೆ ಮಾಡಿದೆ. ಇದರ ನಡುವೆ ವಿನೀಶ್ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದೆ. ಜೈಲಿಗೆ ಹೋಗುವ ಮುಂಚೆ ಸಂದರ್ಶನವೊಂದರಲ್ಲಿ ದರ್ಶನ್ ಹೇಳಿದ್ದಂತೆ, ‘ಮಗನನ್ನು ಸಿನಿಮಾ ರಂಗಕ್ಕೆ ಕರೆದುಕೊಂಡು ಬರುವ ಆಸೆ ಇದೆ, ಆದರೆ ಮೊದಲು ಅವನು ಜೀವನದ ಕಷ್ಟಗಳನ್ನು ಕಂಡು, ಅವುಗಳಿಂದ ಪಾಠ ಕಲಿತ ಬಳಿಕವಷ್ಟೆ ಚಿತ್ರರಂಗಕ್ಕೆ ಬರಬೇಕು’ ಎಂದಿದ್ದರು.

ಇದನ್ನೂ ಓದಿ:ಹೆಸರು ದುರ್ಬಳಕೆ, ನಂಬಿಕೆ ದ್ರೋಹ: ಧನ್ವೀರ್ ಮೇಲೆ ಆರೋಪಿಸಿ ಕೇಸ್ ಜಡಿದ ದರ್ಶನ್

ವಿನೀಶ್​​ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಹೆಚ್ಚಾಗಿ ಪೋಸ್ಟ್​​ಗಳನ್ನು ಹಂಚಿಕೊಳ್ಳೂವುದಿಲ್ಲ. ಆಗೊಮ್ಮೆ ಈಗೊಮ್ಮೆ ಕೆಲ ಯೂಟ್ಯೂಬರ್​​ಗಳ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಬೈಕು-ಕಾರುಗಳ ಬಗ್ಗೆ ವಿಶೇಷ ವಿನೀಶ್ ಅವರಿಗೆ ವಿಶೇಷ ಪ್ರೀತಿ. ಹಿಂದೆ ತಂದೆಯೊಡನೆ ಆಫ್​ ರೋಡಿಂಗ್ ಎಲ್ಲ ಹೋಗಿದ್ದರು. ಇದೀಗ ಜೀವನದ ಮಹತ್ವದ ವಯಸ್ಸನ್ನು ವಿನೀಶ್ ತಲುಪಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 am, Sat, 31 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ