AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್

Vineesh Car Accident: ಸ್ಯಾಂಡಲ್‌ವುಡ್ ನಟ ದರ್ಶನ್ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಟಚ್ ಆದ ಬಗ್ಗೆ ವರದಿಯಾಗಿದೆ. ಆದರೆ, ವಿನೀಶ್ ಕಾರು ಚಲಾಯಿಸುತ್ತಿರಲಿಲ್ಲ ಎಂದು ಅವರ ತಾಯಿ ವಿಜಯಲಕ್ಷ್ಮೀ ಸ್ಪಷ್ಟಪಡಿಸಿದ್ದಾರೆ. ಇದು ಸಾಮಾನ್ಯ ರಸ್ತೆ ಘಟನೆ ಮಾತ್ರ, ಯಾವುದೇ ದೊಡ್ಡ ಅಪಘಾತವಲ್ಲ. ವಿನೀಶ್ ಸುರಕ್ಷಿತವಾಗಿದ್ದು, ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ. ಸುಳ್ಳು ವರದಿಗಳನ್ನು ನಂಬದಂತೆ ಮನವಿ ಮಾಡಿದ್ದಾರೆ.

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್
ದರ್ಶನ್ ಕುಟುಂಬ
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 26, 2026 | 8:32 AM

Share

ಮುಖ್ಯಾಂಶಗಳು

  • ವಿನೀಶ್ ಕಾರು ಅಪಘಾತದ ಬಗ್ಗೆ ಹುಟ್ಟಿದೆ ವದಂತಿ
  • ವಿನೀಶ್ ಕಾರು ಚಲಾಯಿಸುತ್ತಿರಲಿಲ್ಲ
  • ಸ್ಪಷ್ಟನೆ ನೀಡಿದ ವಿಜಯಲಕ್ಷ್ಮೀ ದರ್ಶನ್

ಬೆಂಗಳೂರು, ಜೂನ್ 26: ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಟಚ್ ಆಗಿದ್ದು, ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ (ಜೂನ್ 25) ಈ ಅಪಘಾತ ಸಂಭವಿಸಿದೆ. ವಿನೀಶ್ ಕಾರು ಓಡಿಸುತ್ತಿದ್ದರು ಎಂಬ ಬಗ್ಗೆ ವರದಿ ಆಗಿತ್ತು. ಆದರೆ, ಅದು ನಿಜವಲ್ಲ ಎಂಬ ವಿಷಯವೂ ರಿವೀಲ್ ಆಗಿದೆ.

ವಿನೀಶ್ ಕಾರು ಓಡಿಸುತ್ತಿರಲಿಲ್ಲ

ವಿನೀಶ್ ಅವರು KA01 MU9969 ಸಂಖ್ಯೆಯ ಫೋರ್ಡ್ ಕಾರಿನಲ್ಲಿ ತೆರಳುತ್ತಿದ್ದರು. ಅಪಘಾತದ ಸಮಯದಲ್ಲಿ ವಿನೀಶ್ ಕಾರನ್ನು ಓಡಿಸುತ್ತಿರಲಿಲ್ಲ. ಅವರು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದರು ಎಂಬುದು ಸ್ಪಷ್ಟವಾಗಿದೆ. ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಕಾರಣ ಸ್ಥಳದಲ್ಲಿ ಕೆಲಕಾಲ ಗಲಾಟೆ ಮತ್ತು ವಾಗ್ವಾದ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.

ವಿಜಯಲಕ್ಷ್ಮೀ ಸ್ಪಷ್ಟನೆ

ಈ ಘಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳ ಕುರಿತು ವಿನೀಶ್ ತಾಯಿ ವಿಜಯಲಕ್ಷ್ಮೀ ದರ್ಶನ್ ಅವರು ಪತ್ರದ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

‘ವಿನೀಶ್‌ಗೆ ದೊಡ್ಡ ಅಪಘಾತವಾಗಿದೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು. ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆರಾಮಾಗಿದ್ದಾನೆ. ಎಂದಿನಂತೆ ನಮ್ಮ ಚಾಲಕನೇ ಕಾರನ್ನು ಚಲಾಯಿಸುತ್ತಿದ್ದನು. ವಿನೀಶ್ ವಾಹನ ಚಲಾಯಿಸುತ್ತಿರಲಿಲ್ಲ. ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಾಮಾನ್ಯ ಎನ್ನುವಂತಹ ಒಂದು ಸಣ್ಣ ರಸ್ತೆ ಅಪಘಾತ ಸಂಭವಿಸಿದೆ ಅಷ್ಟೆ. ಎದುರಿಗಿದ್ದ ಬೈಕ್ ಸವಾರರು ಕೂಡ ತಮ್ಮದೇ ತಪ್ಪು ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ’ ಎಂದು ವಿಜಯಲಕ್ಷ್ಮೀ ಪತ್ರದಲ್ಲಿ ತಿಳಿಸಿದ್ದಾರೆ.

‘ಬೈಕ್‌ನಲ್ಲಿದ್ದವರು ಸುರಕ್ಷಿತವಾಗಿದ್ದಾರೆಯೇ ಎಂದು ನೋಡಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದನು. ಆದರೆ ಆ ಕೆಲವು ಕ್ಷಣಗಳ ದೃಶ್ಯಗಳನ್ನು ಸಂದರ್ಭಕ್ಕೆ ತಕ್ಕುದಲ್ಲದ ರೀತಿಯಲ್ಲಿ ಮತ್ತು ತಪ್ಪು ದಾರಿಗೆಳೆಯುವಂತೆ ಬಿಂಬಿಸಲಾಗಿದೆ. ಯಾರು ಕೂಡ ಇಂತಹ ಸುಳ್ಳು ವರದಿಗಳನ್ನು ನಂಬಬೇಡಿ ಮತ್ತು ಶೇರ್ ಮಾಡಬೇಡಿ’ ಎಂದು ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

Follow Us
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ