‘ರಾಬರ್ಟ್’ ಜೋಡಿ ಮತ್ತೆ ತೆರೆಗೆ, ಮತ್ತೊಂದು ಸಿನಿಮಾ ಮುಗಿಸಿದ ವಿನೋದ್ ಪ್ರಭಾಕರ್

Vinod Prabhakar: ನಟ ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಸಿನಿಮಾ ಕೆಲವೇ ದಿನಗಳಲ್ಲಿ ಆಗಲಿದೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. 'ರಾಬರ್ಟ್' ಜೋಡಿ ಈ ಸಿನಿಮಾ ಮೂಲಕ ಮತ್ತೆ ಒಂದಾಗುತ್ತಿರುವುದು ವಿಶೇಷ.

'ರಾಬರ್ಟ್' ಜೋಡಿ ಮತ್ತೆ ತೆರೆಗೆ, ಮತ್ತೊಂದು ಸಿನಿಮಾ ಮುಗಿಸಿದ ವಿನೋದ್ ಪ್ರಭಾಕರ್
ಮಾದೇವ
Follow us
ಮಂಜುನಾಥ ಸಿ.
|

Updated on:Sep 17, 2023 | 8:52 PM

‘ಮರಿ ಟೈಗರ್’ ಎಂದೇ ಖ್ಯಾತರಾಗಿರುವ ವಿನೋದ್ ಪ್ರಭಾಕರ್ (Vinod Prabhakar) ನಟನೆಯ ‘ಫೈಟರ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿವೆ. ‘ಫೈಟರ್’ ಸಿನಿಮಾ ಬಿಡುಗಡೆ ಆಗುವ ಮುನ್ನವೇ ವಿನೋದ್ ಪ್ರಭಾಕರ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ.

‘ಮಾದೇವ’ ಹೆಸರಿನ ಆಕ್ಷನ್ ಕತೆಯುಳ್ಳ ಸಿನಿಮಾದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ನಟಿಸಿದ್ದು, ‘ಖಾಕಿ’ ಚಿತ್ರದ ಮೂಲಕ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ‘ಮಾದೇವ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರೀಕರಣ ಪೂರ್ಣವಾಗಿದೆ. ಈ ಸಿನಿಮಾದ ಪೋಸ್ಟರ್​ಗಳು ಈಗಾಗಲೇ ಬಿಡುಗಡೆ ಆಗಿದ್ದು ಕುತೂಹಲ ಮೂಡಿಸಿವೆ.

ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯುತ್ತದೆ. ಹಿಂದೆಂದೂ ಕಂಡಿರದಂತಹ ವಿಭಿನ್ನವಾದ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಗರಕಿಟ್ಟಿ ಖಳನಾಯಕನಾಗಿ ನಟಿಸುತ್ತಿರುವುದು ವಿಶೇಷ. ನಟಿ ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ದರ್ಶನ್​-ವಿನೋದ್ ಪ್ರಭಾಕರ್ ಕಾಂಬಿನೇಷನ್​ನಲ್ಲಿ ಮೂಡಿ ಬರ್ತಿದೆ ಮತ್ತೊಂದು ಸಿನಿಮಾ

‘ರಾಬರ್ಟ್‌’ ಸಿನಿಮಾದಲ್ಲಿ ರಾಘವ್‌ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್‌ ಪ್ರಭಾಕರ್‌ ಮತ್ತು ಸೋನಲ್‌ ಮೊಂಥೆರೋ ಅವರುಗಳೇ ‘ಮಾದೇವ’ ಸಿನಿಮಾದಲ್ಲಿಯೂ ಜೋಡಿಯಾಗಿ ನಟಿಸಿದ್ದಾರೆ. ‘ಬಾಹುಬಲಿ’, ‘ಆರ್‌ಆರ್‌ಆರ್’ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್‌ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಸಿನಿಮಾಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ರಾಧಾಕೃಷ್ಣ ಬ್ಯಾನರ್ ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಸಿನಿಮಾ ಬಿಡುಗಡೆ ಸಜ್ಜಾಗಿದೆ. ಸಿನಿಮಾದಲ್ಲಿ ಲೇಖ ಚಂದ್ರ ಹಾಗೂ ಪಾವನ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾವನ್ನು ನೂತನ್ ಉಮೇಶ್ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಸೋಮಶೇಖರ್ ಕಟ್ಟಿಗೇನಹಳ್ಳಿ. ಸಿನಿಮಾಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಸಿನಿಮಾದ ಆಡಿಯೋ ಲಾಂಚ್ ಕೆಲವು ದಿನಗಳ ಹಿಂದಷ್ಟೆ ಆಗಿದೆ. ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿದ್ದು ಗಮನ ಸೆಳೆದಿದೆ. ಶೀಘ್ರವೇ ಈ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Sun, 17 September 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್