AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ಗೆ ಗೃಹ ಸಚಿವರ ಶುಭಾಶಯ

Balarama: ವಿನೋದ್ ಪ್ರಭಾಕರ್ ಅವರ 25ನೇ ಸಿನಿಮಾ ‘ಬಲರಾಮನ ದಿನಗಳು’ ಸಿನಿಮಾದ ಹೆಸರನ್ನು ಗೃಹ ಸಚಿವ ಪರಮೇಶ್ವರ್ ಅನಾವರಣಗೊಳಿಸಿದರು. ‘ಆ ದಿನಗಳು’ ಖ್ಯಾತಿಯ ಚೈತನ್ಯ ಇದನ್ನು ನಿರ್ದೇಶಿಸುತ್ತಿದ್ದಾರೆ.

ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ಗೆ ಗೃಹ ಸಚಿವರ ಶುಭಾಶಯ
ಮಂಜುನಾಥ ಸಿ.
|

Updated on: Feb 06, 2024 | 10:31 PM

Share

ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರದ ಶೀರ್ಷಿಕೆ ಅನಾವರಣ ಇತ್ತೀಚಿಗೆ ಅದ್ಧೂರಿಯಾಗಿ ನೆರವೇರಿತು. ಗೃಹ ಸಚಿವ ಜಿ.ಪರಮೇಶ್ವರ್ ಸಿನಿಮಾದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು. ‘ಬಲರಾಮನ ದಿನಗಳು’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದ್ದು, ‘ಆ ದಿನಗಳು’ ಖ್ಯಾತಿಯ ಕೆ.ಎಂ.ಚೈತನ್ಯ ಈ ಸಿನಿಮಾವನ್ನು ನಿರ್ದೇಸನ ಮಾಡುತ್ತಿದ್ದಾರೆ. ಇದೇ ಪದ್ಮಾವತಿ ಫಿಲಂಸ್ ಎಂಬ ನೂತನ ನಿರ್ಮಾಣ ಸಂಸ್ಥೆಯ ವತಿಯಿಂದ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನಿರ್ಮಾಪಕ ಶ್ರೇಯಸ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಸಿನಿಮಾದ ಶೀರ್ಷಿಕೆ ಅನಾವರಣ ಅದ್ದೂರಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ವಿನೋದ್ ಪ್ರಭಾಕರ್ ಅವರಿಗೆ “ಟೈಗರ್” ಎಂದು ಬಿರುದು ನೀಡಿ ಸನ್ಮಾನಿಸಲಾಯಿತು.

ಪ್ರತಿಯೊಬ್ಬರಿಗೂ ಜೀವನದಲ್ಲಿ ವೈದ್ಯ, ಪೊಲೀಸ್‍, ರಾಜಕಾರಣಿ, ವಿಜ್ಞಾನಿ ಹೀಗೆ ಏನೇನೋ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ, ನಮ್ಮ ಶ್ರೇಯಸ್‍ಗೆ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಆಸೆ ಇದ್ದು, ಈ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಹಿಂದೆ ಸಿನಿಮಾದಲ್ಲಿ ಸಂದೇಶ ಇರುತ್ತಿತ್ತು. ಮೌಲ್ಯಗಳ ಪಾಠ ಇರುತ್ತಿತ್ತು. ಈಗ ಕಮರ್ಷಿಯಲ್‍ ಚಿತ್ರಗಳ ಸಂಖ್ಯೆ ಜಾಸ್ತಿ ಆಗಿದೆ. ಹಣ ಮಾಡಬೇಕು ನಿಜ. ಆದರೆ, ಜೊತೆಗೆ ಚಿತ್ರ ನೋಡುವ ಪ್ರೇಕ್ಷಕರಿಗೆ ಒಂದು ಸಂದೇಶ ಸಹ ಹೋಗಬೇಕು. ಚಲನಚಿತ್ರ ಒಂದು ಪ್ರಬಲವಾದ ಮಾಧ್ಯಮ. ಈ ಮಾಧ್ಯಮದ ಮೂಲಕ ಜನರ ಮನಸ್ಸು ಬದಲಾವಣೆ ಮಾಡುವ ಅವಕಾಶವಿರುತ್ತದೆ. ಹಾಗಾಗಿ, ಯಾವ ಸಿನಿಮಾ ಮಾಡಿದರೂ ಅದರ ಮೂಲಕ ಪ್ರೇಕ್ಷಕರಿಗೆ ಒಂದು ಸಂದೇಶ ಕೊಡಿ. ನನಗೆ ಟೈಗರ್ ಪ್ರಭಾಕರ್ ಪರಿಚಿತರು. ಅವರ ಮಗ ಇಂದು ತಮ್ಮ 25ನೇ ಸಿನಿಮಾ ಮಾಡುತ್ತಿದ್ದಾರೆ. ಇದು ತಮಾಷೆ ವಿಷಯವಲ್ಲ. ಅವರು ಇನ್ನೂ 25 ಸಿನಿಮಾಗಳನ್ನು ಮಾಡಲಿ ಎಂಬುದು ನನ್ನ ಹಾರೈಕೆ ಎಂದರು ಗೃಹ ಸಚಿವ ಜಿ.ಪರಮೇಶ್ವರ್.

ಇದನ್ನೂ ಓದಿ:ಕಾವೇರಿ ವಿವಾದ: ಚಿತ್ರರಂಗ ಸುಮ್ಮನೆ ಕೂತಿಲ್ಲ ಎಂದ ವಿನೋದ್ ಪ್ರಭಾಕರ್

ಚಿತ್ರ ನಿರ್ಮಿಸಬೇಕು ಎಂಬುದು ನನ್ನ ಕನಸು ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‍ ಪ್ರಭಾಕರ್ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ ಫಿಲಂಸ್ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ ಎಂದರು.

ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ದವಾಗುತ್ತಿದೆ. ನನಗೆ ಈ ಸಂಸ್ಥೆಯವರು ‘ಟೈಗರ್’ ಎಂಬ ಬಿರುದು ಕೊಟ್ಟಿದ್ದಾರೆ. ಆ ಬಿರುದಿಗೆ ಆ ಚಿತ್ರಗಳು ಧಕ್ಕೆ ತರದಂತೆ ನೋಡಿಕೊಳ್ಳುತ್ತೇನೆ. ಚೈತನ್ಯ ಅವರ ‘ಆ ದಿನಗಳು’ ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರು ಸೃಷ್ಠಿಸಿರುವ ಬಲರಾಮನ ಪಾತ್ರವನ್ನು ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ ಎಂದರು ನಾಯಕ ವಿನೋದ್ ಪ್ರಭಾಕರ್.

ಹೆಚ್ಚಿನ ಸಿನಿಮಾಗಳಲ್ಲಿ ಮನರಂಜನೆ ಇರುತ್ತದೆ. ಸಂದೇಶಗಳು ಕಡಿಮೆಯಾಗುತ್ತಿವೆ ಎಂದು ಮಾತು ಅರಂಭಿಸಿದ ನಿರ್ದೇಶಕ ಕೆ.ಎಂ.ಚೈತನ್ಯ, ‘ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‍. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‍ ಪ್ರಭಾಕರ್ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಬಹಳ ಅತ್ಯುತ್ತಮ ಆಯ್ಕೆ. ಇದು ಭೂಗತಲೋಕದ ಸಿನಿಮಾ. ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ ಎಂದು ತಿಳಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ