Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೈಟರ್​’ ಆಗಿ ಬರ್ತಿದ್ದಾರೆ ಮರಿ ಟೈಗರ್ ವಿನೋದ್ ಪ್ರಭಾಕರ್; ಟೀಸರ್​ ಹೇಗಿದೆ ನೋಡಿದ್ರಾ?

ಉಮೇಶ್ ಅವರು ‘ಫೈಟರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣ ಮಾಡಿದ್ದಾರೆ. ವಿನೋದ್​ ಪ್ರಭಾಕರ್​ ಅವರು ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರದಲ್ಲಿ ಲೇಖಾ ಚಂದ್ರ ಮತ್ತು ಪಾವನಾ ನಾಯಕಿಯರಾಗಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ವೇಳೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

‘ಫೈಟರ್​’ ಆಗಿ ಬರ್ತಿದ್ದಾರೆ ಮರಿ ಟೈಗರ್ ವಿನೋದ್ ಪ್ರಭಾಕರ್; ಟೀಸರ್​ ಹೇಗಿದೆ ನೋಡಿದ್ರಾ?
ಪಾವನಾ, ವಿನೋದ್​ ಪ್ರಭಾಕರ್​, ಲೇಖಾ ಚಂದ್ರ
Follow us
ಮದನ್​ ಕುಮಾರ್​
|

Updated on: Aug 28, 2023 | 8:11 PM

ಆ್ಯಕ್ಷನ್​ ಸಿನಿಮಾಗಳ ಮೂಲಕವೇ ನಟ ವಿನೋದ್​ ಪ್ರಭಾಕರ್​ (Vinod Prabhakar) ಅವರು ಫೇಮಸ್​ ಆಗಿದ್ದಾರೆ. ಹೊಡಿಬಡಿ ದೃಶ್ಯಗಳಲ್ಲಿ ಅವರನ್ನು ನೋಡಲು ಫ್ಯಾನ್ಸ್​ ಇಷ್ಟಪಡುತ್ತಾರೆ. ಅಂತಹ ಅಭಿಮಾನಿಗಳಿಗೆ ಹೇಳಿಮಾಡಿಸಿದಂತಿದೆ ‘ಫೈಟರ್​’ (Fighter Kannada Movie) ಸಿನಿಮಾದ ಟೀಸರ್​. ಇತ್ತೀಚೆಗಷ್ಟೇ ಈ ಟೀಸರ್​ ಬಿಡುಗಡೆ ಮಾಡಲಾಯಿತು. ಈ ಚಿತ್ರಕ್ಕೆ ನೂತನ್ ಉಮೇಶ್ ಅವರು ನಿರ್ದೇಶನ ಮಾಡಿದ್ದಾರೆ. ಸೋಮಶೇಖರ್ ಕಟ್ಟಿಗೇನಹಳ್ಳಿ ಅವರು ‘ಫೈಟರ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರ ತಂದೆ ಕೃಷ್ಣಪ್ಪ ಅವರು ಟೀಸರ್ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ವಿನೋದ್​ ಪ್ರಭಾಕರ್​ ಜೊತೆ ನಾಯಕಿಯರಾಗಿ ಪಾವನಾ ಮತ್ತು ಲೇಖಾ ಚಂದ್ರ (Lekha Chandra) ಅವರು ನಟಿಸಿದ್ದಾರೆ. ಸದ್ಯ ಯೂಟ್ಯೂಬ್​ನಲ್ಲಿ ಈ ಟೀಸರ್​ ಸದ್ದು ಮಾಡುತ್ತಿದೆ. ಕಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ತಿಳಿಸುತ್ತಿದ್ದಾರೆ.

‘ಫೈಟರ್​’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ವಿನೋಧ್​ ಪ್ರಭಾಕರ್​:

‘ಈ ಸಿನಿಮಾದಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಷ್ಟೇ ಇಲ್ಲ. ತಂದೆ-ತಾಯಿ ಮತ್ತು ಮಗನ ನಡುವಿನ ಬಾಂಧವ್ಯದ ಸನ್ನಿವೇಶಗಳು ಪ್ರೇಕ್ಷಕರ ಮನ ಮುಟ್ಟುವಂತಿವೆ. ಥ್ರಿಲ್ಲರ್ ಅಂಶಗಳು ಈ ಸಿನಿಮಾದಲ್ಲಿ ಇದೆ. ಕೌಟುಂಬಿಕ ಪ್ರೇಕ್ಷಕರಿಗೆ ತುಂಬ ಮನರಂಜನೆ ಸಿಗಲಿದೆ. ನಿರ್ದೇಶಕರು ನನ್ನನ್ನು ಈ ಹಿಂದಿನ ಸಿನಿಮಾಗಳಿಗಿಂತಲೂ ಬಹಳ ಸ್ಟೈಲಿಷ್ ರೀತಿಯಲ್ಲಿ ತೋರಿಸಿದ್ದಾರೆ. ಚಿತ್ರಕ್ಕೆ ಯಾವುದೇ ಕೊರತೆ ಆಗದ ರೀತಿಯಲ್ಲಿ ನಮ್ಮ ನಿರ್ಮಾಪಕರು ಬಂಡವಾಳ ಹೂಡಿದ್ದಾರೆ. ಅವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್​ ಆಗಿ ನಾನು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತೇನೆ’ ಎಂದು ವಿನೋದ್​ ಪ್ರಭಾಕರ್​ ಹೇಳಿದ್ದಾರೆ.

‘ಫೈಟರ್​’ ಚಿತ್ರದ ಟೀಸರ್:

ಸದ್ಯದಲ್ಲೇ ಬರಲಿದೆ ಹಾಡು-ಟ್ರೇಲರ್​:

‘ಫೈಟರ್​’ ಚಿತ್ರದ ಟೀಸರ್ ಬಿಡುಗಡೆ ವೇಳೆ ನಿರ್ದೇಶಕ ನೂತನ್ ಉಮೇಶ್ ಮಾತನಾಡಿದರು. ‘ಈ ಸಿನಿಮಾ ಟೈಟಲ್​ ಅನ್ನು ವಿನೋದ್ ಪ್ರಭಾಕರ್ ಅವರ ಫ್ಯಾನ್ಸ್​ ಬಿಡುಗಡೆ ಮಾಡಿದ್ದರು. ಶೀಘ್ರದಲ್ಲೇ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ತಯಾರಿ ನಡೆಯುತ್ತಿದೆ. ಫೈಟರ್ ಅಂದ್ರೆ ಹೊಡೆದಾಡುವವನು ಅಂತ ಎಲ್ಲರೂ ಊಹಿಸುತ್ತಾರೆ. ಆದರೆ ನಮ್ಮ ಸಿನಿಮಾದ ಫೈಟರ್ ತನ್ನ ಫ್ಯಾಮಿಲಿಗಾಗಿ ಮತ್ತು ಅನ್ಯಾಯದ ವಿರುದ್ಧ ಹೋರಾಡುತ್ತಾನೆ.‌ ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ಹೊಸ ಲುಕ್ ಇದೆ’ ಎಂದಿದ್ದಾರೆ ನಿರ್ದೇಶಕರು.

ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರು ‘ಫೈಟರ್​’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ‌. ಹಾಡುಗಳು ಭಿನ್ನವಾಗಿವೆ ಎಂದು ಅವರು ತಿಳಿಸಿದ್ದಾರೆ. ಥ್ರಿಲ್ಲರ್​ ಮಂಜು ಅವರ ಸಾಹಸ ಸಂಯೋಜನೆಯಲ್ಲಿ ಫೈಟಿಂಗ್​ ದೃಶ್ಯಗಳು ಮೂಡಿಬಂದಿವೆ.

Fighter Movie Team

ಫೈಟರ್​ ಸಿನಿಮಾ ತಂಡ

ಪಾವನಾ ಮತ್ತು ಲೇಖಾ ಚಂದ್ರ ಅವರು ಪ್ರಮುಖವಾದಂತಹ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳ ಬಳಿಕ ನಟಿ ನಿರೋಷಾ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಬಗ್ಗೆ ಅವರಿಗೆ ಖುಷಿ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ