Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ

Lankasura Movie | Modern Mahalakshmi Song: ‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ.

Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ
‘ಲಂಕಾಸುರ’ ಸುದ್ದಿಗೋಷ್ಠಿ
Follow us
|

Updated on: Feb 13, 2023 | 7:16 AM

ನಟ ವಿನೋದ್ ಪ್ರಭಾಕರ್ (Vinod Prabhakar) ಅವರ ‘ಲಂಕಾಸುರ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಹೀರೋ ಆಗಿ ನಟಿಸುವುದರ ಜೊತೆಗೆ ತಮ್ಮದೇ ‘ಟೈಗರ್​ ಟಾಕೀಸ್​’ ಸಂಸ್ಥೆ ಮೂಲಕ ಬಂಡವಾಳ ಕೂಡ ಹೂಡಿ​ದ್ದಾರೆ. ಟೀಸರ್​ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಗಮನ ಸೆಳೆಯುತ್ತಿದೆ. ‘ಲಂಕಾಸುರ’ (Lankasura Movie) ಚಿತ್ರದ ‘ಮಾಡರ್ನ್​ ಮಹಾಲಕ್ಷ್ಮಿ..’ ಹಾಡನ್ನು ಇತ್ತೀಚೆಗೆ ರಿಲೀಸ್​ ಮಾಡಲಾಯಿತು. ಹಿರಿಯ ನಟಿ ಮಾಲಾಶ್ರೀ (Malashree) ಅವರಿಂದ ಈ ಸಾಂಗ್​ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ಶ್ರುತಿ, ಶ್ರೀನಗರ ಕಿಟ್ಟಿ, ಹಿರಿಯ ನಿರ್ಮಾಪಕ ಎಂ.ಜಿ. ರಾಮಮೂರ್ತಿ, ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ‘2ಎ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಪ್ರಮೋದ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ.

‘ಬಹದ್ದೂರ್​’ ಚೇತನ್​ ಕುಮಾರ್​ ಅವರು ‘ಮಾಡರ್ನ್​ ಮಹಾಲಕ್ಷ್ಮಿ’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ವಿಜೇತ್​ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾಂಗ್​ ಬಿಡುಗಡೆ ಮಾಡಿದ ಮಾಲಾಶ್ರೀ ಅವರು ಇಡೀ ತಂಡಕ್ಕೆ ಶುಭ ಹಾರೈಕೆ ತಿಳಿಸಿದ್ದಾರೆ. ‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ಸಖತ್​ ಇಷ್ಟ. ಟೈಗರ್ ಟಾಕೀಸ್ ಮೂಲಕ ಲಂಕಾಸುರ ಚಿತ್ರವನ್ನು ನಿರ್ಮಾಣ ಮಾಡಿರುವ ವಿನೋದ್ ಪ್ರಭಾಕರ್ ಹಾಗೂ ಅವರ ಪತ್ನಿ ನಿಶಾ ಅವರಿಗೆ ಒಳ್ಳೆಯದಾಗಲಿ. ಈ ಸಿನಿಮಾಗೆ ದೊಡ್ಡ ಯಶಸ್ಸು ಸಿಗಲಿ’ ಎಂದು ಮಾಲಾಶ್ರೀ ಶುಭ ಕೋರಿದ್ದಾರೆ.

ಇದನ್ನೂ ಓದಿ: ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

ಇದನ್ನೂ ಓದಿ

‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕೊರೊನಾ ಲಾಕ್​ಡೌನ್​ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ, ‘ಲಂಕಾಸುರ’ ಚಿತ್ರ ಶುರು ಮಾಡಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ನನ್ನ ಇಡೀ ಚಿತ್ರತಂಡದ ಸಹಕಾರವನ್ನು ನಾನು  ಮರೆಯಲ್ಲ. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹಿಸಿ’ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ