ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್
ವಿಷ್ಣು-ರಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 12, 2023 | 12:06 PM

ರಜನಿಕಾಂತ್ ಹಾಗೂ ವಿಷ್ಣುವರ್ಧನ್ (Vishnuvardhan) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ವಿಷ್ಣುವರ್ಧನ್ ಅವರನ್ನು ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈಗ ರಜನಿಕಾಂತ್ ಅವರ ಜೊತೆಗಿನ ಗೆಳೆತನ ವಿವರಿಸುವ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ತಮಿಳಿನ ‘ವಿಡುದಲೈ’ ಸಿನಿಮಾದ (Viduthalai Movie) ದೃಶ್ಯ. ಈ ವಿಡಿಯೋನ ಅಭಿಮಾನಿಗಳು ರೀ-ಶೇರ್ ಮಾಡಿಕೊಳ್ಳುತ್ತಿದ್ದಾರೆ. ವಿಷ್ಣು ದಾದಾ ಅವರ ನೆನಪು ಅಭಿಮಾನಿಗಳಿಗೆ ಅತಿಯಾಗಿ ಕಾಡುತ್ತಿದೆ.

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು. ಕೆ. ವಿಜಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಒಂದು ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.

ವಿಷ್ಣವರ್ಧನ್​ ಮೇಲೆ ರೌಡಿಗಳು ದಾಳಿ ಮಾಡಿರುತ್ತಾರೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿರುತ್ತಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ವಿಷ್ಣುನ ನೋಡಿಕೊಳ್ಳೋದು ರಜನಿಕಾಂತ್. ವಿಷ್ಣುವರ್ಧನ್ ಸಂಪೂರ್ಣವಾಗಿ ಚೇತರಿಕೆಕಂಡ ನಂತರದಲ್ಲಿ ರಜನಿ ಸಿಗರೇಟ್ ಹಚ್ಚುತ್ತಾರೆ. ಒಂದು ಬಾರಿ ಅದನ್ನು ಸೇದಿ ವಿಷ್ಣು ಬಾಯಿಗೆ ಇಡುತ್ತಾರೆ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲ್​’, ‘ಗಲಾಟೆ ಸಂಸಾರ’, ‘ಕಿಲಾಡಿ ಕಿಟ್ಟು’ (1978) ಚಿತ್ರಗಳಲ್ಲೂ ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಈ ಕಾರಣಕ್ಕೆ ವಿಷ್ಣುವರ್ಧನ್ ಹಾಗೂ ರಜನಿ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು.

ವಿಷ್ಣುವರ್ಧನ್ ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಅವರು ಹಿಂದಿ, ತಮಿಳು, ತೆಲುಗು ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ‘ಅಲೈಗಳ್​’, ‘ಶ್ರೀ ರಾಘವೇಂದ್ರ’ ಮೊದಲಾದ ತಮಿಳು ಸಿನಿಮಾಗಳಲ್ಲೂ ಅವರು ನಟಿಸಿದ್ದರು.

(ವಿಶೇಷ ಸೂಚನೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಟಿವಿ9 ಕನ್ನಡ ಧೂಮಪಾನ ಮಾಡುವುದನ್ನು ಪ್ರಚೋದಿಸುವುದಿಲ್ಲ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 12 May 23

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ