AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಜನ್ಮದಿನಾಚರಣೆಗೆ ಅವಕಾಶ ಇಲ್ಲ: ಹೈಕೋರ್ಟ್

ವಿಷ್ಣುವರ್ಧನ್ ಸಮಾಧಿ ಸ್ಥಳ ಇರುವ ‘ಅಭಿಮಾನ್ ಸ್ಟುಡಿಯೋ’ ಜಾಗದ ಕಾನೂನಿನ ಕಗ್ಗಂಟು ಜಾಸ್ತಿ ಆಗಿದೆ. ವಿಷ್ಣು ಹುಟ್ಟುಹಬ್ಬವನ್ನು ಅಭಿಮಾನ್ ಸ್ಟುಡಿಯೋದಲ್ಲಿ ಆಚರಿಸಲು ಅವರ ಅಭಿಮಾನಿಗಳಿಗೆ ಅವಕಾಶ ಸಿಗುತ್ತಿಲ್ಲ. ಈ ಬಗ್ಗೆ ಹೈಕೋರ್ಟ್ ಅಭಿಪ್ರಾಯ ತಿಳಿಸಿದೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..

ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಜನ್ಮದಿನಾಚರಣೆಗೆ ಅವಕಾಶ ಇಲ್ಲ: ಹೈಕೋರ್ಟ್
Vishnuvardhan Samadhi
Ramesha M
| Updated By: ಮದನ್​ ಕುಮಾರ್​|

Updated on: Sep 16, 2025 | 6:50 PM

Share

ಸೆಪ್ಟೆಂಬರ್ 18ರಂದು ‘ಸಾಹಸ ಸಿಂಹ’ ವಿಷ್ಣುವರ್ಧನ್ (Vishnuvardhan) ಅವರು ಜನ್ಮದಿನ. ಅಂದು ಹಲವು ರೀತಿಯಲ್ಲಿ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ಈ ಬಾರಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಬಂದಿದೆ. ಆ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ. ಆದರೆ ಅದರ ನಡುವೆ ಒಂದು ಬೇಸರದ ಸುದ್ದಿ ಇದೆ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವಾದ ಅಭಿಮಾನ್ ಸ್ಟುಡಿಯೋದಲ್ಲಿ ಜನ್ಮದಿನ (Vishnuvardhan Birthday) ಆಚರಣೆ ಮಾಡಲು ಹೈಕೋರ್ಟ್ ಅವಕಾಶ ನೀಡಿಲ್ಲ.

ಇತ್ತೀಚಿನ ದಿನಗಳಲ್ಲಿ ಅಭಿಮಾನ್ ಸ್ಡುಡಿಯೋಗೆ ಸಂಬಂಧಿಸಿದಂತೆ ಒಂದಷ್ಟು ಬೆಳವಣಿಗೆಗಳು ನಡೆದಿವೆ. ಅಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಯಿತು. ಆ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದರು. ಅಲ್ಲದೇ, ಆ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಈ ಬಾರಿ ಅಭಿಮಾನ್ ಸ್ಡುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಅವರ ಪುಣ್ಯಭೂಮಿಯಲ್ಲಿ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾಯುತ್ತಿದ್ದರು. ಅದಕ್ಕೆ ಅವಕಾಶ ನೀಡುವಂತೆ ಕೋರಿ ಹೈಕೋರ್ಟ್​​ಗೆ ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ರಿಟ್ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯನ್ನು ನ.4ಕ್ಕೆ ಮುಂದೂಡಲಾಗಿದೆ.

‘ಅಭಿಮಾನ್ ಸ್ಟೂಡಿಯೋ ಮಾಲಿಕತ್ವದ ಬಗ್ಗೆ ಹೈಕೋರ್ಟ್ ಆದೇಶವಿದೆ. 2025ರ ಜ.13ರ ಆದೇಶವಿರುವಾಗ ವಿಭಿನ್ನ ರೀತಿಯ ಆದೇಶ ಸಾಧ್ಯವಿಲ್ಲ’ ಎಂದು ನ್ಯಾ. ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ, ಕಾರ್ಯದರ್ಶಿ, ಅಭಿಮಾನ್ ಸ್ಟುಡಿಯೋದ ಬಿ.ಎಸ್. ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ: ರಮೇಶ್ ಅರವಿಂದ್ ಸಂತಸ

ಅಭಿಮಾನ್ ಸ್ಟುಡಿಯೋ ಜಾಗದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಅಭಿಮಾನಿಗಳು ಮಾಡುತ್ತಿದ್ದಾರೆ. ಒಂದುವೇಳೆ ಆ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡರೆ ಅದರಲ್ಲಿ ಮತ್ತೆ ವಿಷ್ಣುವರ್ಧನ್ ಅವರ ಸಮಾಧಿ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಅಭಿಮಾನಿಗಳದ್ದು. ಆದರೆ ಸದ್ಯಕ್ಕಂತೂ ಅಲ್ಲಿ ಹುಟ್ಟುಹಬ್ಬ ಆಚರಿಸಲು ಅವಕಾಶ ಸಿಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ