AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishnuvardhan Memorial: ಜ.29ಕ್ಕೆ ಮೈಸೂರಿನಲ್ಲಿ ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ; ಸಿಹಿ ಸುದ್ದಿ ​ನೀಡಿದ ಅನಿರುದ್ಧ್​

Anirudh Jatkar | Vishnuvardhan Smaraka: ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುವರ್ಧನ್​ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದಾರೆ.

Vishnuvardhan Memorial: ಜ.29ಕ್ಕೆ ಮೈಸೂರಿನಲ್ಲಿ ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ; ಸಿಹಿ ಸುದ್ದಿ ​ನೀಡಿದ ಅನಿರುದ್ಧ್​
ಅನಿರುದ್ಧ್, ವಿಷ್ಣುವರ್ಧನ್
TV9 Web
| Updated By: ಮದನ್​ ಕುಮಾರ್​|

Updated on:Jan 12, 2023 | 4:56 PM

Share

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ ಅವರ ಸ್ಮಾರಕದ (Vishnuvardhan Memorial) ಉದ್ಘಾಟನೆಗೆ ಸಮಯ ಕೂಡಿಬಂದಿದೆ. ಈ ಸಂಭ್ರಮದ ಕ್ಷಣಕ್ಕಾಗಿ ವಿಷ್ಣು ದಾದಾ ಅಭಿಮಾನಿಗಳು ಮತ್ತು ಅವರ ಕುಟುಂಬದವರು ಹಲವು ವರ್ಷಗಳಿಂದಲೂ ಕಾದಿದ್ದರು. ಈಗ ವಿಷ್ಣುವರ್ಧನ್​ ಅಳಿಯ ಅನಿರುದ್ಧ್​ ಅವರು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಜನವರಿ 29ರಂದು ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್​ (Dr Vishnuvardhan) ಅವರ ಸ್ಮಾರಕ ಉದ್ಘಾಟನೆ ಆಗಲಿದೆ ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ‘ಸಾಹಸ ಸಿಂಹ’ನ ಸ್ಮಾರಕದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಜರಿ ಹಾಕಲಿದ್ದಾರೆ. ಈ ವಿಷಯ ಕೇಳಿ ವಿಷ್ಣುವರ್ಧನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಅನಿರುದ್ಧ್ (Anirudh Jatkar) ಕೇಳಿಕೊಂಡಿದ್ದಾರೆ.

ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುವರ್ಧನ್​ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದಾರೆ. ಸಮಾರಂಭಕ್ಕೆ ಬರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಕೊಳ್ಳುತ್ತಿದ್ದಂತೆಯೇ ನಟ ಅನಿರುದ್ಧ್ ಅವರು ಈ ಗುಡ್​ ನ್ಯೂಸ್​ ನೀಡಿದ್ದಾರೆ.

ಇದನ್ನೂ ಓದಿ
Image
Jaggesh: ಬೇರೆಯವರ ಜಾಗದಲ್ಲಿ ಮನೆ ಕಟ್ಟಿದ್ದ ವಿಷ್ಣುಗೆ ಬಳಿಕ ಸಿಕ್ತು ಡಬಲ್​ ಸೈಟ್​: ಜಗ್ಗೇಶ್​ ತೆರೆದಿಟ್ಟ ವಿಷಯ ಇದು
Image
Dr Vishnuvardhan House: ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ
Image
Basavaraj Bommai: ವಿಷ್ಣುವರ್ಧನ್​ ಹೊಸ ಮನೆ ‘ವಲ್ಮೀಕ’ ಗೃಹ ಪ್ರವೇಶಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ

‘ಎಲ್ಲರಿಗೂ ನಮಸ್ಕಾರ.. ಮೈಸೂರಿನಲ್ಲಿ ಪೂರ್ಣಗೊಂಡಿರುವ ವಿಷ್ಣುವರ್ಧನ್​ ಅವರ ಸ್ಮಾರಕದ ಉದ್ಘಾಟನೆಗೆ ಬರಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ತಾವೆಲ್ಲರೂ ಇಷ್ಟು ವರ್ಷ ಕಾದಿದ್ದೀರಿ. ಇಂದು ಈ ಸಂತೋಷದ ಸುದ್ದಿಯನ್ನು ಎಲ್ಲರೂ ಕೇಳುತ್ತಿದ್ದೀರಿ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಷ್ಣುವರ್ಧನ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಂತ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಅನಿರುದ್ಧ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:56 pm, Thu, 12 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ