Vishnuvardhan Memorial Inauguration: ‘ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ’; ಶಿವರಾಜ್​ಕುಮಾರ್​

Vishnuvardhan Memorial | Shivarajkumar: ವಿಷ್ಣುವರ್ಧನ್​ ಅವರ ಸ್ಮಾರಕ ಲೋಕಾರ್ಪಣೆ ಆಗಿರುವುದು ವಿಷ್ಣು ಅಭಿಮಾನಿಗಳಿಗೆ ಮಾತ್ರವಲ್ಲದೇ ಇಡೀ ಚಂದನವನಕ್ಕೆ ಖುಷಿ ನೀಡಿದೆ. ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​ ಮುಂತಾದವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

Vishnuvardhan Memorial Inauguration: ‘ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ’; ಶಿವರಾಜ್​ಕುಮಾರ್​
ವಿಷ್ಣುವರ್ಧನ್, ಶಿವರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on:Jan 29, 2023 | 3:23 PM

ನಟ ವಿಷ್ಣುವರ್ಧನ್​ ಅವರ ಭವ್ಯ ಸ್ಮಾರಕ (Vishnuvardhan Memorial) ನಿರ್ಮಾಣ ಆಗಬೇಕು ಎಂಬುದು ಅಭಿಮಾನಿಗಳ ಹಲವು ವರ್ಷಗಳ ಕನಸಾಗಿತ್ತು. ಅಂತೂ ಈಗ ಆ ಕ್ಷಣ ಬಂದಿದೆ. ಮೈಸೂರಿನಲ್ಲಿ ನಿರ್ಮಾಣ ಆಗಿರುವ ವಿಷ್ಣುವರ್ಧನ್​ (Vishnuvardhan) ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ವಿಷ್ಣು ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಅಭಿಮಾನಿಗಳಿಗೆ ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಸಂತಸ ಮೂಡಿಸಿದೆ. ಚಂದನವನದ ಅನೇಕ ತಾರೆಯರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ನಟ ಶಿವರಾಜ್​ಕುಮಾರ್​ (Shivarajkumar) ಅವರು ತಮ್ಮ ಮಾತುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘13 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮೈಸೂರಿನಲ್ಲಿ ನಮ್ಮ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ! ಸ್ಮಾರಕ ನಿರ್ಮಾಣಕ್ಕೆ ಕಾರಣರಾದ ವಿಷ್ಣು ಕುಟುಂಬಕ್ಕೆ, ಸರ್ಕಾರಕ್ಕೆ ಹಾಗೂ ಅಭಿಮಾನಿಗಳಿಗೆ ನನ್ನ ಧನ್ಯವಾದಗಳು’ ಎಂದು ಶಿವರಾಜ್​ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Jaggesh: ಬೇರೆಯವರ ಜಾಗದಲ್ಲಿ ಮನೆ ಕಟ್ಟಿದ್ದ ವಿಷ್ಣುಗೆ ಬಳಿಕ ಸಿಕ್ತು ಡಬಲ್​ ಸೈಟ್​: ಜಗ್ಗೇಶ್​ ತೆರೆದಿಟ್ಟ ವಿಷಯ ಇದು
Image
Dr Vishnuvardhan House: ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ
Image
Basavaraj Bommai: ವಿಷ್ಣುವರ್ಧನ್​ ಹೊಸ ಮನೆ ‘ವಲ್ಮೀಕ’ ಗೃಹ ಪ್ರವೇಶಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ

ಇದನ್ನೂ ಓದಿ: Vishnuvardhan Memorial: ಬೆಂಗಳೂರಿನಲ್ಲಿ ವಿಷ್ಣುವರ್ಧನ್​ ಅಂತ್ಯ ಸಂಸ್ಕಾರ ಆದರೂ ಮೈಸೂರಿನಲ್ಲಿ ಸ್ಮಾರಕ ಆಗಿದ್ದೇಕೆ? ಇಲ್ಲಿದೆ ವಿವರ

‘ವಿಷ್ಣುವರ್ಧನ್ ಹಾಗೂ ನಮ್ಮ ಕುಟುಂಬದ ಬಾಂಧವ್ಯ ಮತ್ತು ಒಡನಾಟ ಬಹಳಷ್ಟಿವೆ. ವಿಷ್ಣುವರ್ಧನ್ ನಮ್ಮ ತಂದೆ ಡಾ. ರಾಜ್ ಅವರನ್ನು ಬಹಳಷ್ಟು ಪ್ರೀತಿ, ಗೌರವ, ಅಭಿಮಾನದಿಂದ ಕಾಣುತ್ತಿದ್ದರು. ಅಪ್ಪಾಜಿ ಹಾಗೂ ನಮ್ಮ ಕುಟುಂಬ ಕೂಡ ವಿಷ್ಣು ಅವರನ್ನು ತುಂಬು ಪ್ರೀತಿಯಿಂದ ಕಂಡಿದ್ದೇವೆ. ವಿಷ್ಣುವರ್ಧನ್ ಅವರ ಅಭಿಮಾನಿಗಳ ಕೋರಿಕೆ ಕೊನೆಗೂ ಸ್ಮಾರಕ ರೂಪದಲ್ಲಿ ಈಡೇರುತ್ತಿರುವ ವಿಷಯ ನನಗೆ ಹಾಗೂ ನಮ್ಮ ಚಿತ್ರರಂಗಕ್ಕೆ ಬಹಳ ಹೆಮ್ಮೆಯ ವಿಷಯ’ ಎಂದು ಶಿವಣ್ಣ ಪೋಸ್ಟ್​ ಮಾಡಿದ್ದಾರೆ.

ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣ ಆಗಿದ್ದಕ್ಕೆ ಕಿಚ್ಚ ಸುದೀಪ್​ ಅವರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ‘ಕಾಯುತ್ತಿದ್ದರು ಕರುನಾಡ ಜನತೆ ಇಂತಹದ್ದೊಂದು ಅದ್ಭುತ ಕ್ಷಣಕ್ಕೆ. ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ. ಯಜಮಾನ್ರ ಸ್ಮಾರಕ ಲೋಕಾರ್ಪಣೆ ಸಮಾರಂಭಕ್ಕೆ ಶುಭಕೋರಿಕೆ’ ಎಂದು ಕಿಚ್ಚ ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:23 pm, Sun, 29 January 23

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್