‘ಇದೊಂದು ಅದ್ಭುತ ಅನುಭವ’; ‘ಕಾಂತಾರ’ ನೋಡಿದ ಬಳಿಕ ವಿಶೇಷ ಮನವಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

ವಿವೇಕ್​ ಅಗ್ನಿಹೋತ್ರಿ ‘ಕಾಂತಾರ’ ಚಿತ್ರವನ್ನು ನೋಡಿ ಹೊಗಳಿದ್ದು, ರಿಷಬ್ ಶೆಟ್ಟಿಯ ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

‘ಇದೊಂದು ಅದ್ಭುತ ಅನುಭವ’; ‘ಕಾಂತಾರ’ ನೋಡಿದ ಬಳಿಕ ವಿಶೇಷ ಮನವಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ
ರಿಷಬ್-ವಿವೇಕ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 23, 2022 | 3:26 PM

ರಿಷಬ್ ಶೆಟ್ಟಿ(Rishab Shetty)  ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರವನ್ನು ನೋಡಿ ಬಾಲಿವುಡ್ ಮಂದಿ ಕೂಡ ಕೊಂಡಾಡುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಕ್ರೇಜ್ ಬಾಲಿವುಡ್ ಬೆಲ್ಟ್​ನಲ್ಲಿ ಹೆಚ್ಚುತ್ತಲೇ ಇದೆ. ಅನೇಕರು ಸಿನಿಮಾ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಹಲವರು ಈ ಚಿತ್ರದ ಬಗ್ಗೆ ಪಾಸಿಟಿವ್ ಮಾತುಗಳನ್ನು ಆಡಿದ್ದಾರೆ. ಕಂಗನಾ ರಣಾವತ್ ಸೇರಿ ಅನೇಕರು ಈ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಬಾರಿ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸರದಿ. ಅವರು ಈ ಚಿತ್ರವನ್ನು ನೋಡಿ ಥ್ರಿಲ್ ಆಗಿದ್ದಾರೆ. ಅವರು ತಮ್ಮ ವಿಮರ್ಶೆಯನ್ನು ತಿಳಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ‘ಕಾಂತಾರ’ ಚಿತ್ರವನ್ನು ನೋಡಿ ಹೊಗಳಿದ್ದು, ರಿಷಬ್ ಶೆಟ್ಟಿಯ ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ನಾನು ಕಾಂತಾರ ಸಿನಿಮಾ ನೋಡಿ ಬಂದೆ. ಇದೊಂದು ಅದ್ಭುತ ಅನುಭವ. ಈ ರೀತಿಯ ಚಿತ್ರವನ್ನು ನೀವು ನೋಡಿರುವುದಿಲ್ಲ. ನಾನಂತೂ ಈ ರೀತಿಯ ಸಿನಿಮಾವನ್ನು ನೋಡಿರಲಿಲ್ಲ. ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಆಫ್.  ರಿಷಬ್ ನೀವು ಅದ್ಭುತ ಕೆಲಸ ಮಾಡಿದ್ದೀರಿ. ನಾನು ನಿಮಗೆ ಕರೆ ಮಾಡಿ ಮಾತನಾಡುತ್ತೇನೆ. ನನ್ನ ಅನುಭವವನ್ನು ಹಂಚಿಕೊಳ್ಳದೇ ಇರಲು ಸಾಧ್ಯವಾಗಲಿಲ್ಲ. ಕಲೆ, ಜಾನಪದ ವಿಚಾರಗಳು ಸಿನಿಮಾದಲ್ಲಿ ಅಡಗಿದೆ. ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ನಿಮ್ಮ ಬಳಿ ಇರುವುದು ಅದೆಂಥಹ ಎನರ್ಜಿ. ನಾನು ಈ ವರೆಗೆ ನೋಡಿಲ್ಲ. ರಿಷಬ್ ಶೆಟ್ಟಿ ಮಾಡಿದ ಮಾಸ್ಟರ್​ಪೀಸ್. ಸಿನಿಮಾದಲ್ಲಿ ಎಲ್ಲವೂ ಚೆನ್ನಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ

ನಂತರ ಮತ್ತೊಂದು ಟ್ವೀಟ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್ ಹಾಗೂ ‘ಕಾಂತಾರ’ ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ ಟ್ವೀಟ್ ಮಾಡಿದ್ದಾರೆ. ಈ ಫೋಟೋಗೆ ‘ಭಾರತ ಚಿತ್ರರಂಗಕ್ಕೆ ಬಂಗಾರದ ಯುಗ. ಕ್ರಾಂತಿ ಆಗುತ್ತಿದೆ. ಹಳೆಯ ಎಸ್ಟಾಬ್ಲಿಶ್​ಮೆಂಟ್​ಗಳು ನಾಶವಾಗುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಬರುತ್ತಿವೆ. ಈ ಕ್ರಾಂತಿಯನ್ನು ಬೆಂಬಲಿಸಿ’ ಎಂದು ಅವರು ಕೋರಿದ್ದಾರೆ.

Published On - 2:17 pm, Sun, 23 October 22

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್