AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ. ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. […]

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 15, 2020 | 3:55 PM

Share

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ.

ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. ಮುಂಬೈನ ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಟ ವಿವೇಕ್​ ಒಬೆರಾಯ್​ ನಿವಾಸವಿದೆ.

‘ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ’ ನಿವಾಸದಲ್ಲಿ ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿದ ದಂಪತಿ ನಮ್ಮ ಮನೆಗೆ ಯಾಕೆ ಬಂದಿದ್ದೀರಾ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರಂತೆ. ಆದಿತ್ಯ ಆಳ್ವಾ ಬಗ್ಗೆ ನಾವೇನು ಹೇಳುವುದಿಲ್ಲ. ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ ಎಂದು ದಂಪತಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದಲ್ಲದೆ, ಒಬೆರಾಯ್ ದಂಪತಿಯ ಮೊಬೈಲ್ ಪಡೆದು ಪರಿಶೀಲನೆ ನಡೆಸಲು ಮುಂದಾಗಿದ್ದ ಅಧಿಕಾರಿಗಳಿಗೆ ದಂಪತಿ ತಮ್ಮ ಮೊಬೈಲ್ ಫೋನ್ ಸಹ ನೀಡುತ್ತಿಲ್ಲವಂತೆ. ಜೊತೆಗೆ, ಸಂಪೂರ್ಣವಾಗಿ ತಮ್ಮ ಮನೆಯನ್ನು ಸರ್ಚ್ ಮಾಡಲು ಸಹ ಬಿಡದೆ ಪೊಲೀಸರ ತನಿಖೆಗೆ ಅಸಹಕಾರ ನೀಡುತ್ತಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

Published On - 3:29 pm, Thu, 15 October 20

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ