AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಇನಿಲ್ಲ

ಮುಂಬೈ: ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ಇಂದು ಬೆಳಗಿನ ಜಾವ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಮ್ಮ ಸಹೋದರ ಸಾಜಿದ್ ಜೊತೆ ಸೇರಿ ಅನೇಕ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಸಾಜಿದ್-ವಾಜಿದ್ ಹೆಸರಿನಿಂದ ಈ ಸಹೋದರರು ಖ್ಯಾತರಾಗಿದ್ದರು. ವಾಜಿದ್ ಖಾನ್ ಅವರಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು. ಕೆಲ ದಿನಗಳಿಂದ ವೆಂಟಿಲೇಟರ್​​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇವರ ಆರೋಗ್ಯ ಗಂಭೀರವಾಗಿತ್ತು. ಕೆಲವು ತಿಂಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್​ಗೆ ಬಳಗಾಗಿದ್ದರು. ಅಲ್ಲದೆ ಇವರಿಗೆ ಕೊರೊನಾ ಸೊಂಕು ತಗುಲಿದೆ […]

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಇನಿಲ್ಲ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 01, 2020 | 2:52 PM

Share

ಮುಂಬೈ: ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ಇಂದು ಬೆಳಗಿನ ಜಾವ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಮ್ಮ ಸಹೋದರ ಸಾಜಿದ್ ಜೊತೆ ಸೇರಿ ಅನೇಕ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಸಾಜಿದ್-ವಾಜಿದ್ ಹೆಸರಿನಿಂದ ಈ ಸಹೋದರರು ಖ್ಯಾತರಾಗಿದ್ದರು.

ವಾಜಿದ್ ಖಾನ್ ಅವರಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು. ಕೆಲ ದಿನಗಳಿಂದ ವೆಂಟಿಲೇಟರ್​​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇವರ ಆರೋಗ್ಯ ಗಂಭೀರವಾಗಿತ್ತು. ಕೆಲವು ತಿಂಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್​ಗೆ ಬಳಗಾಗಿದ್ದರು. ಅಲ್ಲದೆ ಇವರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಮುಂಬೈನ ಖಾಸಗಿ ಆಸ್ಪತ್ರೆ ಶಂಕೆ ವ್ಯಕ್ತಪಡಿಸಿತ್ತು. ಸಾಜಿದ್ ನಿಧನಕ್ಕೆ ಗಾಯಕ ಸೋನು ಸೂದ್, ಪ್ರಿಯಾಂಕ ಚೋಪ್ರಾ, ಪ್ರೀತಿ ಜಿಂಟಾ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

1998 ರಲ್ಲಿ ಬಿಡುಗಡೆಗೊಂಡ ಸಲ್ಮಾನ್ ಖಾನ್ ಅಭಿನಯದ ಪ್ಯಾರ್ ಕಿಯಾ ತೋ ಡರ್ನಾ ಕ್ಯಾ ಸಿನಿಮಾದ ಮೂಲಕ ವಾಜಿದ್ ಖಾನ್ ಬಾಲಿವುಡ್ ಪ್ರವೇಶಿಸಿದರು. ಚೋರಿ ಚೋರಿ , ಹಲೋ ಬ್ರದರ್, ಮುಜ್ಸೆ ಶಾದಿ ಕರೋಗಿ, ಪಾರ್ಟ್ನರ್, ವಾಂಟೆಡ್, ದಬಾಂಗ್ ಸಲ್ಮಾನ್ ಖಾನ್ ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದರು. ಸಾಜಿದ್-ವಾಜಿದ್ ಬ್ರದರ್ಸ್ ಕಾಂಬಿನೇಷನ್ ನಿಂದ ಬಾಲಿವುಡ್ ಗೆ ಹಲವು ಸೂಪರ್ ಹಿಟ್ ಹಾಡುಗಳು ಲಭಿಸಿವೆ.

Published On - 10:05 am, Mon, 1 June 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​