‘ಸುದೀಪ್ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ, ಸಂಧಾನಕ್ಕೆ ಸಿದ್ಧ’; ನಿರ್ಮಾಪಕ ಎಂಎನ್​ ಕುಮಾರ್ ಹೇಳಿಕೆ

‘ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ‌ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ‌ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ’ ಎಂದು ಎಂಎನ್​ ಕುಮಾರ್ ಹೇಳಿದ್ದಾರೆ.

‘ಸುದೀಪ್ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ, ಸಂಧಾನಕ್ಕೆ ಸಿದ್ಧ’; ನಿರ್ಮಾಪಕ ಎಂಎನ್​ ಕುಮಾರ್ ಹೇಳಿಕೆ
ಸುದೀಪ್-ಎಂಎನ್ ಕುಮಾರ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on:Jul 17, 2023 | 1:19 PM

ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಕುಮಾರ್ ಅವರು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಅವರಿಗೆ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಸಾಥ್ ನೀಡಿದ್ದಾರೆ.

‘ನನಗೆ ಆಗಿರುವ ಸಮಸ್ಯೆ ಎಲ್ಲರಿಗೂ ಗೊತ್ತು. ಚಿತ್ರರಂಗಕ್ಕೆ ಫಿಲ್ಮ್ ಚೇಂಬರ್ ಒಂದು‌ಮನೆ ಇದ್ದಹಾಗೆ. ಹೀಗಾಗಿ‌ ನನ್ನ ಸಮಸ್ಯೆಯನ್ನು ಇಲ್ಲಿಯೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ‌ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ‌ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಮಾಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.

‘ನಾನು ಯಾರ ಸಹಾಯವನ್ನೂ ಕೇಳಿಲ್ಲ. ನನ್ನದು ಏನಿದೆ ಅದನ್ನು ಕ್ಲಿಯರ್ ಮಾಡಿದರೆ ಸಾಕು. ನಾವು ನಿರ್ಮಾಪಕರು, ಸಾಕಷ್ಟು‌ ಜನರನ್ನು ಬೆಳೆಸಿದ್ದೀವಿ. ಎಲ್ಲರ ಗೌರವವೂ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು? ಮಾಧ್ಯಮದವರ ಮುಂದೆಯೇ ಕೇಳಬೇಕು. ನಾನು ಹಾಗೆಯೇ ಮಾಡಿದ್ದೇನೆ. ಅವರು ಸಭೆಗೆ ಬರಲಿ. ಆಗ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದಿದ್ದಾರೆ ಕುಮಾರ್.

ಇದನ್ನೂ ಓದಿ: ಸುದೀಪ್ ವಿರುದ್ಧ ದೂರು ನೀಡಿಲ್ಲ: ಉಲ್ಟಾ ಹೊಡೆದ ನಿರ್ಮಾಪಕ ಕುಮಾರ್

‘ರಾಜಿ ಸಂಧಾನಕ್ಕೆ ನಾವು ರೆಡಿ. ಅವರು ಕರೆಯಬೇಕಿತ್ತು, ಆದರೆ ನಾವೇ ಕರೆಯುತ್ತೀದ್ದೇವೆ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಅಧ್ಯಕ್ಷರು ಬಂದ ಮೇಲೆ ಶಿವಣ್ಣ ಭೇಟಿಯ ಬಗ್ಗೆ ನಿರ್ಧಾರ ಮಾಡುತ್ತೇವೆ. ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Mon, 17 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್