‘ರುಕ್ಮಿಣಿ ವಸಂತ್​ಗೆ ನ್ಯಾಯ ಕೊಡಿಸಿ’; ‘ಬಘೀರ’ ಚಿತ್ರದ ಆ ಒಂದು ದೃಶ್ಯಕ್ಕೆ ಟೀಕೆ

ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ.

‘ರುಕ್ಮಿಣಿ ವಸಂತ್​ಗೆ ನ್ಯಾಯ ಕೊಡಿಸಿ’; ‘ಬಘೀರ’ ಚಿತ್ರದ ಆ ಒಂದು ದೃಶ್ಯಕ್ಕೆ ಟೀಕೆ
ರುಕ್ಮಿಣಿ ವಸಂತ್
Follow us
ರಾಜೇಶ್ ದುಗ್ಗುಮನೆ
|

Updated on: Oct 22, 2024 | 11:55 AM

ನಟಿ ರುಕ್ಮಿಣಿ ವಸಂತ್ ಅವರು ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ. ಈ ಚಿತ್ರದಲ್ಲಿ ಪ್ರಿಯಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈಗ ರುಕ್ಮಿಣಿ ವಸಂತ್ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ‘ಬಘೀರ’ ಚಿತ್ರ ಕೂಡ ಒಂದು. ಈ ಚಿತ್ರದ ಒಂದು ದೃಶ್ಯದ ಬಗ್ಗೆ ಅವರ ಅಭಿಮಾನಿಗಳಲ್ಲಿ ಅಪಸ್ವರ ಎದ್ದಿದೆ.

‘ಬಘೀರ’ ಚಿತ್ರದ ಟ್ರೇಲರ್ ಅಕ್ಟೋಬರ್ 21ರಂದು ರಿಲೀಸ್ ಆಗಿದೆ. ಈ ಟ್ರೇಲರ್​ನಲ್ಲಿ ಶ್ರೀಮುರಳಿ ಅವರು ರುಕ್ಮಿಣಿ ವಸಂತ್ ಕೆನ್ನೆಗೆ ಹೊಡೆಯೋ ದೃಶ್ಯ ಇದೆ. ಇದು ತಪ್ಪು ಎಂದು ಅನೇಕರು ಖಂಡಿಸಿದ್ದಾರೆ. ಈ ರೀತಿಯ ದೃಶ್ಯ ಇರಬಾರದಿತ್ತು ಎಂದು ಅವರ ಫ್ಯಾನ್ಸ್ ಮಾತನಾಡಿಕೊಳ್ಳುತ್ತಿದ್ದಾರೆ.

ಟ್ವಿಟರ್​ನಲ್ಲಿ ಈ ವಿಚಾರವಾಗಿ ವಿಡಿಯೋ ಹಾಗೂ ಪೋಸ್ಟ್​ಗಳು ಹರಿದಾಡುತ್ತಿವೆ. ಟೌನ್ ಹಾಲ್ ಎದುರು ನಿಂತು ಪ್ರತಿಭಟನೆ ಮಾಡುತ್ತಿರುವ ಫೋಟೋನ ಎಡಿಟ್ ಮಾಡಲಾಗಿದೆ. ಇದರಲ್ಲಿ ‘ರುಕ್ಮಣಿ ವಸಂತ್​ಗೆ ನ್ಯಾಯ ಬೇಕು’ ಎಂದು ಬರೆಯಲಾಗಿದೆ. ‘ಆಫೀಸರ್ ಬಘೀರ ರುಕ್ಮಿಣಿ ವಸಂತ್ ಮೇಲೆ ಕೈ ಮಾಡಿದ್ದಾರೆ. ಟೌನ್ ಹಾಲ್ ಎದುರು ಪ್ರತಿಭಟನೆ ಮಾಡಲಾಗಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ. ಇನ್ನೂ ಕೆಲವರು ಶ್ರೀಮುರಳಿಯನ್ನು ಪ್ರಶ್ನೆ ಮಾಡಿದ್ದಾರೆ.

ರುಕ್ಮಿಣಿ ವಸಂತ್ ಅವರು ಮೊದಲು ನಟಿಸಿದ್ದು ‘ಬೀರ್ಬಲ್’ ಸಿನಿಮಾದಲ್ಲಿ. ಈ ಚಿತ್ರದಲ್ಲಿ ಅವರಿಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿರಲಿಲ್ಲ. ಆದರೆ, ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರ ಅವರ ಬದುಕನ್ನೇ ಬದಲಿಸಿತು. ಕಳೆದ ವರ್ಷ ರಿಲೀಸ್ ಆದ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಈ ಚಿತ್ರದಲ್ಲಿ ರುಕ್ಮಿಣಿ ನಟಿಸಿದ್ದರು. ಅವರ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: ರುಕ್ಮಿಣಿ ವಸಂತ್​ಗೆ ಭರ್ಜರಿ ಆಫರ್, ಪ್ಯಾನ್ ಇಂಡಿಯಾ ಸ್ಟಾರ್​ಗೆ ನಾಯಕಿ

ಸದ್ಯ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಚಿತ್ರಕ್ಕೂ ರುಕ್ಮಿಣಿ ನಾಯಕಿ. ನವೆಂಬರ್​ನಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಇದಲ್ಲದೆ, ತಮಿಳು ಭಾಷೆಯಿಂದಲೂ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ