‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕತೆ ಹುಟ್ಟಿದ್ದು ಹೇಗೆ?

Swathi Mutthina Male Haniye: ಗುಣಪಡಿಸಲಾಗದ ಖಾಯಿಲೆಯಿಂದ ಬಳಲುತ್ತಿರುವ ಶುಶ್ರೂಶ ಕೇಂದ್ರದಲ್ಲಿ ನಡೆಯುವ ಕತೆಯನ್ನು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಒಳಗೊಂಡಿದೆ. ಈ ಸಿನಿಮಾದ ಕತೆ ರಾಜ್ ಬಿ ಶೆಟ್ಟಿಗೆ ಮೂಡಿದ್ದು ಹೇಗೆ? ಅವರೇ ವಿವರಿಸಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕತೆ ಹುಟ್ಟಿದ್ದು ಹೇಗೆ?
ಸ್ವಾತಿ ಮುತ್ತಿನ ಮಳೆ ಹನಿಯೇ
Follow us
|

Updated on: Nov 18, 2023 | 8:45 PM

ರಾಜ್ ಬಿ ಶೆಟ್ಟಿ (Raj B Shetty) ಕತೆ, ಚಿತ್ರಕತೆ ಬರೆದು ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಇದೇ ನವೆಂಬರ್ 24ರಂದು ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ನಿನ್ನೆ (ನವೆಂಬರ್ 17) ಅದ್ಧೂರಿಯಾಗಿ ಬಿಡುಗಡೆ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವು ಸಾವು ಮತ್ತು ಪ್ರೀತಿಯ ಕತೆ ಹೊಂದಿದೆ. ಸಾವು ನಿಶ್ಚಯವಾದವ ಹಾಗೂ ಸಾವು ಹತ್ತಿರವಿದ್ದವರಿಗೆ ಧೈರ್ಯ ತುಂಬುವ ಕೌನ್ಸಲರ್ ನಡುವಿನ ಬಂಧದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಬಗ್ಗೆ ಹಾಗೂ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೌನ್ಸಲರ್ ಬಗೆಗಿನ ಈ ಕತೆ ರಾಜ್ ಬಿ ಶೆಟ್ಟಿಗೆ ಹೊಳೆದಿದ್ದು ಹೇಗೆ? ಸಿನಿಮಾದ ಕತೆ ನಡೆಯುವ ಆ ಪರಿಸರವನ್ನು ಶೆಟ್ಟರು ಸೃಷ್ಟಿಸಿದ್ದು ಹೇಗೆ? ಆ ಆಲೋಚನೆ ಅವರಿಗೆ ಹೊಳೆದಿದ್ದು ಹೇಗೆ? ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರೇ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್ ವಿದ್ಯಾರ್ಥಿ. ನಾನು ಜನರ ಕಷ್ಟಗಳನ್ನು ಹತ್ತಿರದಿಂದ ನೋಡಿದ್ದೇನೆ. ನಮ್ಮನ್ನು ಅಸೈನ್​ಮೆಂಟ್​ಗಳಿಗೆ ಕರೆದುಕೊಂಡು ಹೋಗುತ್ತಿದ್ದಿದ್ದೇ ಇಂಥಹಾ ಶುಶ್ರೂಶೆಯ ಕೇಂದ್ರಗಳಿಗೆ. ಸಾವಿನಂಚಿನಲ್ಲಿರುವ ರೋಗಿಗಳನ್ನು ಶುಶ್ರೂಷೆ ಮಾಡುವ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಪರಿಸ್ಥಿತಿ ನನ್ನ ಮನದಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿತ್ತು. ಬದುಕುತ್ತಿರುವವರು, ಸಾಯಲು ಹೊರಟಿರುವವರ ನಡುವಿನ ಸಂಬಂಧ ಹೇಗಿರಬಹುದು ಎನಿಸಿ ಈ ಕತೆ ಹುಟ್ಟಿತು” ಎಂದಿದ್ದಾರೆ.

ಇದನ್ನೂ ಓದಿ:ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ

ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದೇ ಏಕೆ ಹೆಸರಿಡಲಾಯ್ತು ಎಂಬ ಬಗ್ಗೆಯೂ ಉತ್ತರಿಸಿರುವ ರಾಜ್ ಬಿ ಶೆಟ್ಟಿ, ಸ್ವಾತಿ ಮಳೆಯ ನೀರು ಆರೋಗ್ಯಕರ ಎಂದು ಆಯುರ್ವೇದ ಹೇಳುತ್ತದೆ. ಈ ಮಳೆಯ ನೀರು ಕಪ್ಪೆಚಿಪ್ಪಿನ ಜೊತೆ ಸೇರಿ ಮುತ್ತಾಗುತ್ತದೆ. ಹಾಗಾಗಿ ನಮ್ಮ ಚಿತ್ರದ ಕಥೆಗೆ ಈ ಶೀರ್ಷಿಕೆ ಸರಿ ಹೊಂದುವುದರಿಂದ “ಸ್ವಾತಿ ಮುತ್ತಿನ ಮಳೆ ಹನಿಯೇ” ಎಂದು ಶೀರ್ಷಿಕೆ ಇಟ್ಟಿದ್ದೇವೆ. ಅನಿಕೇತ್ ನನ್ನ ಪಾತ್ರದ ಹೆಸರು. ಮಿಥುನ್ ಮುಕುಂದನ್ ಸುಮಧುರ ಸಂಗೀತದಲ್ಲಿ ಚಿತ್ರದ ಹಾಡುಗಳು ಇಂಪಾಗಿ ಮೂಡಿಬಂದಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಬಂದಿದೆ ಎಂದರು.

ನಾಯಕಿ ಸಿರಿ ಮಾತನಾಡಿ, ”ಸಿನಿಮಾದಲ್ಲಿ ನನ್ನ ಪಾತ್ರದ ಹೆಸರು ಪ್ರೇರಣಾ. ಹಾಸ್​ಪಿಸ್ ಕೌನ್ಸಿಲರ್ ಆಗಿ ಕಾರ್ಯ ನಿರ್ವಹಿಸುತ್ತಿರುತ್ತೇನೆ. ಸಾವಿನಂಚಿನಲ್ಲಿರುವವರಿಗೆ ಸಾವಿನ ಬಗ್ಗೆ ಧೈರ್ಯ ತುಂಬುವ ಪಾತ್ರ ಎನ್ನಬಹುದು. ಈ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಸ್​ಪಿಸ್ ಕರುಣಾಶ್ರಯ ಸಾಕಷ್ಟು ಸಹಾಯ ಮಾಡಿತು. ಅಲ್ಲಿನ ಕೌನ್ಸಲರ್​ಗಳು ನನಗೆ ಸಹಾಯ ಮಾಡಿದರು ಎಂದು ಮೆಚ್ಚಿಕೊಂಡರು.

ಮಿಥುನ್‍ ಮುಕುಂದನ್‍ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಪ್ರವೀಣ್‍ ಶ್ರೀಯಾನ್‍ ಛಾಯಾಗ್ರಹಣ ಮಾಡಿದ್ದಾರೆ. ಸಿನಿಮಾದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮಾ, ಗೋಪಾಲ್ ದೇಶಪಾಂಡೆ ಇನ್ನೂ ಕೆಲವರು ನಟಿಸಿದ್ದಾರೆ. ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ನಿರ್ಮಾಣದ ಮೊಟ್ಟ ಮೊದಲ ಸಿನಿಮಾ.

ತಾಜಾ ಸುದ್ದಿ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ