AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಯಾವಾಗ? ಸದ್ಯಕ್ಕಂತೂ ಸಿಗಲ್ಲ ಉತ್ತರ..

‘ಚಲೋ’ ಸಿನಿಮಾ ಬಳಿಕ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ಬಂದರು. ಅವರು ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ‘ಅನಿಮಲ್​’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ರಶ್ಮಿಕಾ ಮಂದಣ್ಣ ಮರಳಿ ಕನ್ನಡ ಚಿತ್ರರಂಗಕ್ಕೆ ಬರೋದು ಯಾವಾಗ ಎನ್ನೋದು ಅನೇಕರ ಪ್ರಶ್ನೆ.

ರಶ್ಮಿಕಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಯಾವಾಗ? ಸದ್ಯಕ್ಕಂತೂ ಸಿಗಲ್ಲ ಉತ್ತರ..
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Jan 28, 2024 | 6:27 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು 2018ರಲ್ಲಿ ‘ಚಲೋ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡದಲ್ಲಿ ಫೇಮಸ್ ಆದ ಬಳಿಕ ಅವರಿಗೆ ಪರಭಾಷೆಯಿಂದ ಆಫರ್​ಗಳು ಹೆಚ್ಚಾದವು. ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಮಾತ್ರವಲ್ಲದೆ ಬಾಲಿವುಡ್​ನಲ್ಲೂ ಬ್ಯುಸಿ ಆಗಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡೋದು ಸದ್ಯಕ್ಕಂತೂ ಸಾಧ್ಯವಿಲ್ಲ ಎಂಬುದು ಅನೇಕರ ಅಭಿಪ್ರಾಯ. ಅವರ ಸಂಭಾವನೆ ಹೆಚ್ಚಿದೆ. ಇನ್ನು, ಪರಭಾಷೆಯಲ್ಲೂ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಈ ಎಲ್ಲಾ ಕಾರಣದಿಂದ ಅವರು ಕನ್ನಡಕ್ಕೆ ಸದ್ಯಕ್ಕಂತೂ ಬರುವುದಿಲ್ಲ.

‘ಚಲೋ’ ಸಿನಿಮಾ ಬಳಿಕ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ಬಂದರು. ಅವರು ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ‘ಅನಿಮಲ್​’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ರಶ್ಮಿಕಾ ಮಂದಣ್ಣ ಮರಳಿ ಕನ್ನಡ ಚಿತ್ರರಂಗಕ್ಕೆ ಬರೋದು ಯಾವಾಗ ಎನ್ನೋದು ಅನೇಕರ ಪ್ರಶ್ನೆ. ಆದರೆ, ಅದು ಸದ್ಯಕ್ಕಂತೂ ಸಾಧ್ಯವಿಲ್ಲ ಅನ್ನೋದು ಕೆಲವರ ಅಭಿಪ್ರಾಯ.

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ನಟಿಸಿದರು. ಈ ಮೂಲಕ ನ್ಯಾಷನಲ್ ಕ್ರಶ್ ಆದರು. ಈಗ ಅವರ ಕೈಯಲ್ಲಿ ‘ಪುಷ್ಪ 2’ ಚಿತ್ರ ಇದೆ. ಅಲ್ಲು ಅರ್ಜುನ್​ ಅವರು ಈ ಚಿತ್ರದಲ್ಲಿ ನಾಯಕನ ಪಾತ್ರ ಮಾಡಿದ್ದಾರೆ. ಶೇಖರ್ ಕಮ್ಮುಲ ಅವರು ಧನುಷ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ. ‘ಬೇಬಿ’ ನಿರ್ಮಾಪಕನ ‘ಗರ್ಲ್​ಫ್ರೆಂಡ್​’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ‘ರೇನ್​ಬೋ’ ಹೆಸರಿನ ಸಿನಿಮಾ ಕೂಡ ಮಾಡುತ್ತಿದ್ದಾರೆ.

ಈ ರೀತಿಯ ವಿಶೇಷ ಲೈನ್​ಅಪ್ ಯಾವ ನಟಿಯರ ಬಳಿಯೂ ಇಲ್ಲ. ಶ್ರೀಲೀಲಾ ಸೇರಿ ಯಾವ ನಾಯಕಿಯರ ಬಳಿಯೂ ಇಷ್ಟೊಂದು ದೊಡ್ಡ ಪ್ರಾಜೆಕ್ಟ್​ಗಳಿಲ್ಲ. ರಶ್ಮಿಕಾ ಅವರು ಈ ಸಿನಿಮಾಗಳನ್ನು ಪೂರ್ಣಗೊಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದರ ಜೊತೆ ಅವರು ಹೊಸ ಸಿನಿಮಾ ಕಥೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ‘ಅವರು ಏನು ಸೇವಿಸ್ತಾರೋ ಗೊತ್ತಿಲ್ಲ’; ಅನಿಮಲ್ ನಿರ್ದೇಶಕನ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

ರಶ್ಮಿಕಾ ಮಂದಣ್ಣ ಅವರಿಗೆ ಟಾಲಿವುಡ್​ನಲ್ಲಿ ಇನ್ನೂ ಬೇಡಿಕೆ ಇದೆ. ಅವರು ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕನ್ನಡದಲ್ಲಿ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಕೊಟ್ಟು ಅವರನ್ನು ಸ್ವಾಗತಿಸಲು ಯಾವ ನಿರ್ಮಾಪಕರೂ ಮುಂದೆ ಬರುವುದಿಲ್ಲ. ಹೀಗಾಗಿ, ಸದ್ಯಕ್ಕಂತೂ ಅವರು ಕನ್ನಡದ ಕಡೆ  ಮುಖ ಮಾಡುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:16 pm, Sun, 28 January 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?