AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ

ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನ ‘ಪುಷ್ಪ’ ಸಿನಿಮಾ ಶುಕ್ರವಾರ (ಡಿಸೆಂಬರ್​ 17)​ಸಾಕಷ್ಟು ಹೈಪ್​ನೊಂದಿಗೆ ರಿಲೀಸ್​​ ಆಗಿತ್ತು. ಎರಡು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಭಾಗ ಬಿಡುಗಡೆ ಆಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಸಿನಿಮಾ ಉತ್ತಮವಾಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ‘ಕೆಜಿಎಫ್​’ ಬಗ್ಗೆ ಹಗುರವಾಗಿ ಮಾತನಾಡಿದ್ದ ಆಂಧ್ರದ ನಿರ್ದೇಶಕರಿಗೆ ಈಗ ಕರ್ನಾಟಕದವರು ಪ್ರಶ್ನೆ […]

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ
ಪುಷ್ಪ-ಕೆಜಿಎಫ್​
TV9 Web
| Edited By: |

Updated on:Dec 18, 2021 | 8:01 AM

Share

ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನ ‘ಪುಷ್ಪ’ ಸಿನಿಮಾ ಶುಕ್ರವಾರ (ಡಿಸೆಂಬರ್​ 17)​ಸಾಕಷ್ಟು ಹೈಪ್​ನೊಂದಿಗೆ ರಿಲೀಸ್​​ ಆಗಿತ್ತು. ಎರಡು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಭಾಗ ಬಿಡುಗಡೆ ಆಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಸಿನಿಮಾ ಉತ್ತಮವಾಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ‘ಕೆಜಿಎಫ್​’ ಬಗ್ಗೆ ಹಗುರವಾಗಿ ಮಾತನಾಡಿದ್ದ ಆಂಧ್ರದ ನಿರ್ದೇಶಕರಿಗೆ ಈಗ ಕರ್ನಾಟಕದವರು ಪ್ರಶ್ನೆ ಮಾಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ. ಸಿನಿಮಾ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಈ ಕಾರಣಕ್ಕೆ ಅನೇಕರು ಈ ಸಿನಿಮಾ ಟ್ರೋಲ್​ ಮಾಡುತ್ತಿದ್ದಾರೆ.

ಈ ಮೊದಲು ‘ಪುಷ್ಪ’ ಬಗ್ಗೆ ಮಾತನಾಡಿದ್ದ ‘ಉಪ್ಪೇನಾ’ ನಿರ್ದೇಶಕ ಬುಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದರು. ಈಗ ಚಿತ್ರ ರಿಲೀಸ್​ ಆಗಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಕನ್ನಡಿಗರು ಹೇಳುತ್ತಿದ್ದಾರೆ.

ಈ ವಿಚಾರ ಚರ್ಚೆ ಆಗುತ್ತಿದೆ. ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ‘ಪುಷ್ಪ’ ಸಿನಿಮಾ ನಮ್ಮ ಚಿತ್ರದ ಅರ್ಧಕ್ಕೂ ನಿಲ್ಲೋಕೆ ಸಾಧ್ಯವಿಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಸದ್ಯ, ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Published On - 7:00 am, Sat, 18 December 21

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ