ಕನ್ನಡ ಹಾಡು ಹಾಡಿ ಪ್ರಧಾನಿ ಮೋದಿಯ ಮೆಚ್ಚುಗೆಗೆ ಪಾತ್ರರಾದ ಶಿವಶ್ರೀ ಯಾರು?

ಶಿವಶ್ರೀ ಹಾಡಿರುವ ಸಾಂಗ್​ನ ವಿಡಿಯೋ ಲಿಂಕ್​ನ ಟ್ವಿಟರ್​ನಲ್ಲಿ ಪ್ರಧಾನಿ ಮೋದಿ ಶೇರ್ ಮಾಡಿಕೊಂಡಿದ್ದಾರೆ. ಶಿವಶ್ರೀ ಪ್ರಯತ್ನವನ್ನು ಅವರು ಮೆಚ್ಚಿದ್ದಾರೆ. ಈ ಟ್ವೀಟ್​ನ ರೀಟ್ವೀಟ್ ಮಾಡಿಕೊಂಡಿರುವ ಶಿವಶ್ರೀ ಅವರು ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.

ಕನ್ನಡ ಹಾಡು ಹಾಡಿ ಪ್ರಧಾನಿ ಮೋದಿಯ ಮೆಚ್ಚುಗೆಗೆ ಪಾತ್ರರಾದ ಶಿವಶ್ರೀ ಯಾರು?
ಶಿವಶ್ರೀ
Follow us
ರಾಜೇಶ್ ದುಗ್ಗುಮನೆ
|

Updated on:Jan 16, 2024 | 11:57 AM

ರಾಜ್​ಕುಮಾರ್ ಹಾಗೂ ಕಲ್ಪನಾ ನಟನೆಯ ‘ಎರಡು ಕನಸು’ (Eradu Kanasu Movie) ಸಿನಿಮಾದ ‘ಪೂಜಿಸಲೆಂದೆ ಹೂಗಳ ತಂದೆ..’ ಈಗಲೂ ಅನೇಕರ ಫೇವರಿಟ್ ಹಾಡುಗಳಲ್ಲಿ ಒಂದು. ಈ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ಹಾಡಿನ ಲಿಂಕ್​ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಶ್ರೀ (Sivasri Skandaprasad) ಯಾರು ಎನ್ನುವ ಹುಡುಕಾಟ ಆರಂಭ ಆಗಿದೆ.

ಶಿವಶ್ರೀ ಹಾಡಿರುವ ಸಾಂಗ್​ನ ವಿಡಿಯೋ ಲಿಂಕ್​ನ ಟ್ವಿಟರ್​ನಲ್ಲಿ ಮೋದಿ ಶೇರ್ ಮಾಡಿಕೊಂಡಿದ್ದಾರೆ. ಅವರು ಶಿವಶ್ರೀ ಪ್ರಯತ್ನವನ್ನು ಮೆಚ್ಚಿದ್ದಾರೆ. ಈ ಟ್ವೀಟ್​ನ ರೀಟ್ವೀಟ್ ಮಾಡಿಕೊಂಡಿರುವ ಶಿವಶ್ರೀ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. ಶಿವಶ್ರೀ ಅವರು ಅನೇಕ ಹಾಡುಗಳನ್ನು ಈವರೆಗೆ ಹಾಡಿದ್ದಾರೆ.

ಶಿವಶ್ರೀ ಅವರು ಕಲಾವಿದರ ಕುಟುಂಬದಿಂದಲೇ ಬಂದವರು. ಹೀಗಾಗಿ, ಅವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತದ ಬಗ್ಗೆ ಒಲವು ಇತ್ತು. ಶಾಸ್ತ್ರೀಯ ಸಂಗೀತ, ಭರತನಾಟ್ಯವನ್ನು ಅವರು ಕಲಿತಿದ್ದಾರೆ. ಶಿವಶ್ರೀ ಅವರ ತಾತ ಖ್ಯಾತ ಸಂಗೀತಕಾರರಾಗಿದ್ದರು. ಶಿವಶ್ರೀ ಅವರ ತಂದೆ ಖ್ಯಾತ ಮೃದಂಗ ವಾದಕ ವಿದ್ವಾನ್ ಸೀರ್ಕಾಜಿ ಜೆ. ಸ್ಕಂದಪ್ರಸಾದ್. ಶಿವಶ್ರೀ ಅವರು ಎ.ಎಸ್. ಮುರಳಿ ಮತ್ತು ಆಚಾರ್ಯ ಚೂಡಾಮಣಿ ಅವರಲ್ಲಿ ಸಂಗೀತ  ಕಲಿತಿದ್ದಾರೆ. ರೋಜಾ ಕಣ್ಣನ್ ಅವರಿಂದ ಭರತನಾಟ್ಯ ತರಬೇತಿ ಪಡೆದಿದ್ದಾರೆ.

ಶಿವಶ್ರೀ ಅವರ ಸಹಜ ಪ್ರತಿಭೆ, ಕುಟುಂಬದ ಪ್ರೋತ್ಸಾಹ, ಕಠಿಣ ಪರಿಶ್ರಮ ಮತ್ತು ಶಾಸ್ತ್ರೀಯ ಕಲೆಗಳಲ್ಲಿ ತೋರಿದ ಉತ್ಸಾಹದಿಂದ ವೃತ್ತಿಪರ ಕಲಾವಿದೆಯಾಗಿ ಬೆಳೆಯಲು ಸಹಕಾರಿ ಆಯಿತು. ಶಿವಶ್ರೀ ಅವರು ಬಯೋ-ಇಂಜಿನಿಯರಿಂಗ್ ಪದವೀಧರೆ ಆಗಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂಎ ಭರತನಾಟ್ಯ ಮತ್ತು ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಡಿಪ್ಲೊಮಾ ಪಡೆದಿದ್ದಾರೆ.

ಇದನ್ನೂ ಓದಿ: ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ: ಪೂಜಿಸಲೆಂದೇ ಹೂಗಳ ತಂದೆ ಹಾಡಿಗೆ ಮೆಚ್ಚುಗೆ

ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ‘ಹೇಳೆ ನೀನು..’ (ಕನ್ನಡ ವರ್ಷನ್) ಹಾಡನ್ನು ಶಿವಶ್ರೀ ಹಾಡಿದ್ದಾರೆ. ಇನ್ನೂ ಹಲವು ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಈಗ ಮೋದಿ ಟ್ವೀಟ್​ನಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 80 ಸಾವಿರ ಜನರು ಫಾಲೋ ಮಾಡುತ್ತಿದ್ದಾರೆ. ಯೂಟ್ಯೂಬ್​ನಲ್ಲಿ ಅವರಿಗೆ ಒಂದೂವರೆ ಲಕ್ಷ ಚಂದಾದಾರರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Tue, 16 January 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ