ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ

Darshan Thoogudeepa: ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನನನ್ನು ದರ್ಶನ್ ಪಡೆದುಕೊಂಡಿದ್ದಾರೆ. ಜಾಮೀನು ಪಡೆದು ಮೂರು ವಾರವಾಗಿದ್ದರೂ ದರ್ಶನ್​ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಏಕೆ? ಕಾರಣ ಇಲ್ಲಿದೆ.

ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ
Follow us
ಮಂಜುನಾಥ ಸಿ.
|

Updated on:Nov 22, 2024 | 12:16 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಐದು ತಿಂಗಳ ಕಾಲ ಜೈಲಿನಲ್ಲಿದ್ದರು. ಮೂರು ವಾರಗಳ ಹಿಂದೆ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟು ಆರು ವಾರಗಳ ಮಧ್ಯಂತರ ಜಾಮೀನನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಆರು ವಾರದಲ್ಲಿ ಮೂರು ವಾರ ಕಳೆದು ಹೋಗಿದೆ, ಆದರೆ ಈ ವರೆಗೆ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ. ಅಲ್ಲದೆ ನ್ಯಾಯಾಲಯಕ್ಕೆ ಇದರ ವರದಿಯನ್ನೂ ಸಲ್ಲಿಸಿರಲಿಲ್ಲ.

ನಿನ್ನೆ ಹೈಕೋರ್ಟ್​ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ನ್ಯಾಯಾಲಯದ ನಿರ್ದೇಶನದಂತೆ ದರ್ಶನ್​ರ ಚಿಕಿತ್ಸೆಯ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ ಎಂದರು. ಆಗ ಸಿವಿ ನಾಗೇಶ್ ಅವರು ಮಾಹಿತಿಯನ್ನು ಹೈಕೋರ್ಟ್​ಗೆ ಸಲ್ಲಿಕೆ ಮಾಡಿದರು. ಅದರಲ್ಲಿ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡುವುದು ತಡವಾಗಿರುತ್ತಿರುವುದಕ್ಕೆ ಕಾರಣ ವಿವರಿಸಲಾಗಿದೆ.

ದರ್ಶನ್ ಗೆ ಶಸ್ತ್ರ ಚಿಕಿತ್ಸೆ ಮಾಡೋದಕ್ಕೆ ತಯಾರಿ ಮಾಡಲಾಗ್ತಾ ಇದೆ. ಶಸ್ತ್ರಚಿಕಿತ್ಸೆಗಾಗಿ ದರ್ಶನ್ ಅನ್ನು ಅಣಿಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ದರ್ಶನ್​ಗೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ, ಆಪರೇಷನ್ ಮಾಡಬೇಕು ಎಂದರೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ವ್ಯಕ್ತಿಯ ರಕ್ತದೊತ್ತಡದ ಸಮತೋಲನದಲ್ಲಿರಬೇಕು, ಆದರೆ ದರ್ಶನ್​ರ ರಕ್ತದೊತ್ತಡ ಸಮತೋಲನದಲ್ಲಿ ಇಲ್ಲದೇ ಇರುವ ಕಾರಣ ಶಸ್ತ್ರಿಚಿಕಿತ್ಸೆ ತಡವಾಗುತ್ತಿದೆ. ಅಲ್ಲದೆ ದರ್ಶನ್ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ, ಕನ್ಸರ್ವೇಟಿವ್ ಟ್ರೀಟ್ಮೆಂಟ್ ಮುಂದುವರೆದಿದೆ, ಪಿಸಿಯೋಥೆರ ಮತ್ತು ಔಷಧಗಳಿಂದ ಸಮಸ್ಸೆ ನಿಯಂತ್ರಣದಲ್ಲಿ ಇಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ ಅವ್ಯವಸ್ಥೆ: ದರ್ಶನ್ ಅಭಿಮಾನಿಗಳ ಆಕ್ರೋಶ

ದರ್ಶನ್​ ಜೈಲಿನಲ್ಲಿದ್ದಾಗ ಬೆನ್ನು ನೋವಿನ ಸಮಸ್ಯೆ ಎದುರಿಸಿದ್ದರು. ದರ್ಶನ್​ರ ಬೆನ್ನು ಮೂಳೆಯ ಎಲ್​1 ಹಾಗೂ ಎಲ್​5 ಭಾಗದಲ್ಲಿ ಸಮಸ್ಯೆ ಎದುರಾಗಿತ್ತು. ದರ್ಶನ್​ಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಕಾರಣ ನೀಡಿ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ದರ್ಶನ್​ಗೆ 45 ದಿನಗಳ ಮಧ್ಯಂತರ ಜಾಮೀನನ್ನು ಅಕ್ಟೋಬರ್ 30ರಂದು ನೀಡಿತ್ತು. ನಟ ದರ್ಶನ್ ರಾಜ ರಾಜೇಶ್ವರಿ ನಗರದ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯವರ ಹೊರತಾಗಿ ಇನ್ಯಾರಿಗೂ ದರ್ಶನ್ ಭೇಟಿಯನ್ನು ನಿರಾಕರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 22 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ