‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್​​ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆಲವು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್​​ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ
Yash

Updated on: Feb 20, 2026 | 6:59 PM

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic)  ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾರ್ಚ್ 19ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆಗೆ ಒಂದು ತಿಂಗಳು ಬಾಕಿ ಇದೆ ಎನ್ನುವಾಗ ಟೀಸರ್ ಅನಾವರಣ ಮಾಡಲಾಗಿದೆ. ಈ ಟೀಸರ್ ನೋಡಿ ಯಶ್ (Yash) ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಒಂದು ಕೊರತೆ ಕಾಣಿಸಿದೆ. ಇಡೀ ಟೀಸರ್​​ನಲ್ಲಿ ಯಾವುದೇ ನಟಿಯರ ಮುಖ ಕಾಣಿಸಿಲ್ಲ! ನಯನತಾರಾ, ರುಕ್ಮಿಣಿ ವಸಂತ್ ಮುಂತಾದ ಸ್ಟಾರ್ ನಟಿಯರು ‘ಟಾಕ್ಸಿಕ್’ ಚಿತ್ರದಲ್ಲಿ ಅಭಿನಯಿಸಿದ್ದರೂ ಕೂಡ ಟೀಸರ್​ನಲ್ಲಿ ಅವರು ದರ್ಶನ ನೀಡಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಒಟ್ಟಾರೆ ‘ಟಾಕ್ಸಿಕ್’ ಸಿನಿಮಾದ ಕಥೆ ಬಗ್ಗೆ ಜನರಿಗೆ ಭಾರಿ ಕುತೂಹಲ ಇದೆ. ಯಾಕೆಂದರೆ, ಇದು ಭರ್ಜರಿ ಮಾಸ್ ಸಿನಿಮಾ ಆಗಿದ್ದರೂ ಕೂಡ ಮಹಿಳೆಯರ ಪಾಲ್ಗೊಳ್ಳುವಿಕೆ ಜಾಸ್ತಿ ಇದೆ. ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುವುದು ನಿರ್ದೇಶಕಿ ಗೀತು ಮೋಹನ್​ದಾಸ್. ಪಾತ್ರವರ್ಗದಲ್ಲಿ ನಟಿಯರಾದ ರುಕ್ಮಿಣಿ ವಸಂತ್, ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಅವರಂತಹ ಸ್ಟಾರ್ ಕಲಾವಿದೆಯರು ನಟಿಸಿದ್ದಾರೆ.

ಪಾತ್ರವರ್ಗದಲ್ಲಿ ಮಹಿಳೆಯರ ಸಂಖ್ಯೆ ಜಾಸ್ತಿ ಇದ್ದರೂ ಕೂಡ ಟೀಸರ್​​ನಲ್ಲಿ ಯಾರನ್ನೂ ತೋರಿಸಿಲ್ಲ. ಆದ್ದರಿಂದ ಈ ನಟಿಯರ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಹಾಗಂತ ಜಾಸ್ತಿ ಬೇಸರ ಮಾಡಿಕೊಳ್ಳುವ ಅಗತ್ಯ ಇಲ್ಲ. ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಆಗಲಿದೆ. ಅದರಲ್ಲಾದರೂ ನಟಿಯರ ಪಾತ್ರದ ಬಗ್ಗೆ ಮಾಹಿತಿ ಬಿಟ್ಟುಕೊಡುವ ಸಾಧ್ಯತೆ ಇದೆ. ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೂ ನ್ಯಾಯ ಒದಗಿಸಲಾಗುತ್ತದೆ ಎಂಬ ನಂಬಿಕೆ ಪ್ರೇಕ್ಷಕರಿಗೆ ಇದೆ.

ಟಾಕ್ಸಿಕ್ ಟೀಸರ್​:

Toxic Official Kannada Teaser | Rocking Star Yash | Geetu Mohandas | KVN | Monster Mind Creations

ಬಹಳ ಅದ್ದೂರಿಯಾಗಿ ‘ಟಾಕ್ಸಿಕ್’ ಸಿನಿಮಾ ಮೂಡಿಬಂದಿದೆ ಎಂಬುದು ಟೀಸರ್ ನೋಡಿದರೆ ತಿಳಿಯುತ್ತದೆ. ಕನ್ನಡ, ಹಿಂದಿ, ಮಲಯಾಳಂ, ತೆಲುಗು ವರ್ಷನ್​​ಗಳಲ್ಲಿ ಟೀಸರ್ ಬಿಡುಗಡೆ ಆಗಿದೆ. ಟೀಸರ್​​ನಲ್ಲಿ ಸಿಕ್ಕಾಪಟ್ಟೆ ಕ್ರೌರ್ಯ ಕಾಣಿಸಿದೆ. ಸಿನಿಮಾದಲ್ಲಿ ಅದು ಡಬಲ್ ಆಗಿರುವ ಸಾಧ್ಯತೆ ಕೂಡ ಇದೆ.

ಇದನ್ನೂ ಓದಿ: Toxic Movie: ‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ

ನಟಿಯರನ್ನು ‘ಟಾಕ್ಸಿಕ್’ ಟೀಸರ್​​ನಲ್ಲಿ ಯಾಕೆ ತೋರಿಸಿಲ್ಲ ಎಂದು ಕೆಲವರು ಸೋಶಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ. ‘ಡೈರೆಕ್ಟರ್ ಮಹಿಳೆ ಆಗಿದ್ದರೂ ಕೂಡ ನಟಿಯರು ಪಾತ್ರವನ್ನು ಹೈಲೈಟ್ ಮಾಡುತ್ತಿಲ್ಲ’ ಎಂದು ನೆಟ್ಟಿಗರು ತಕರಾರು ತೆಗೆದಿದ್ದಾರೆ. ಈ ಎಲ್ಲ ಟೀಕೆಗಳಿಗೆ ಸಿನಿಮಾದಲ್ಲಿ ಖಂಡಿತಾ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us