ಸದ್ದಿಲ್ಲದೆ ತೆಲುಗಿನಲ್ಲಿ ರಿಲೀಸ್ ಆಗೋಕೆ ರೆಡಿ ಆಯ್ತು ರಿಷಬ್ ಶೆಟ್ಟಿ ಸಿನಿಮಾ

'ಕಾಂತಾರ' ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರ 'ಹರಿಕಥೆ ಅಲ್ಲ ಗಿರಿಕಥೆ' ಸಿನಿಮಾ ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗುತ್ತಿದೆ. 'ಎ ಫಿಲ್ಮ್ ಬೈ ಗಿರಿ' ಹೆಸರಿನಲ್ಲಿ ಮೇ 8ರಂದು ಆಂಧ್ರ, ತೆಲಂಗಾಣದಲ್ಲಿ ತೆರೆಗೆ ಬರಲಿದೆ. 'ಕಾಂತಾರ'ಕ್ಕೂ ಮುನ್ನ ತೆರೆಕಂಡಿದ್ದ ಈ ಚಿತ್ರವನ್ನು ಈಗ ಬಿಡುಗಡೆ ಮಾಡಲು ರಿಷಬ್ ಅವರ ಜನಪ್ರಿಯತೆಯೇ ಕಾರಣ ಎನ್ನಲಾಗುತ್ತಿದೆ. ಈ ನಿರ್ಧಾರ ಹಲವರಲ್ಲಿ ಕುತೂಹಲ ಮೂಡಿಸಿದೆ.

ಸದ್ದಿಲ್ಲದೆ ತೆಲುಗಿನಲ್ಲಿ ರಿಲೀಸ್ ಆಗೋಕೆ ರೆಡಿ ಆಯ್ತು ರಿಷಬ್ ಶೆಟ್ಟಿ ಸಿನಿಮಾ
ರಿಷಬ್

Updated on: Apr 28, 2026 | 10:30 AM

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ರಿಲೀಸ್ ಬಳಿಕ ಸೂಪರ್ ಸ್ಟಾರ್ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಜನಪ್ರಿಯತೆ ಹಬ್ಬಿದೆ. ಅವರ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ಜನರು ತುಂಬಾನೇ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಾರೆ. ಅದು ದೊಡ್ಡ ಮಟ್ಟದಲ್ಲಿ ಸುದ್ದಿ ಕೂಡ ಆಗುತ್ತಿದೆ. ಆದರೆ, ಈಗ ಅವರ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರೋಕೆ ರೆಡಿ ಆಗಿದೆ. ಅದುವೇ ‘ಎ ಫಿಲ್ಮ್ ಬೈ ಗಿರಿ’.

‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ 2022ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​ ಅಲ್ಲಿ ವೀಕ್ಷಣೆಗೆ ಲಭ್ಯವಿದೆ. ಇದು ‘ಕಾಂತಾರ’ ರಿಲೀಸ್​​ಗೂ ಮೊದಲೇ ತೆರೆಗೆ ಬಂದ ಚಿತ್ರ. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಈಗ ಚಿತ್ರ ತೆಲುಗಿಗೆ ಡಬ್ ಆಗಿದೆ! ಮೇ 8ರಂದು ಸಿನಿಮಾ ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತೆರೆಗೆ ಬರಲಿದೆ. ಈ ನಿರ್ಧಾರವನ್ನು ಏಕೆ ತೆಗೆದುಕೊಳ್ಳಲಾಯಿತು ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಸದ್ಯ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.

ರಿಷಬ್ ಶೆಟ್ಟಿ ಅವರು ಈಗ ಕೇವಲ ಕನ್ನಡದ ಹೀರೋ ಮಾತ್ರ ಅಲ್ಲ. ತೆಲುಗು ರಾಜ್ಯಗಳಲ್ಲಿ ಅವರ ಪರಿಚಯ ಅನೇಕರಿಗೆ ಇದೆ. ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಕಾರಣದಿಂದ ‘ಎ ಫಿಲ್ಮ್ ಬೈ ಗಿರಿ’ ಈಗ ರಿಲೀಸ್ ಮಾಡಿದರೆ ಜನ ನೋಡಬಹುದು ಎಂಬ ನಂಬಿಕೆ ಇರಬಹುದು.

ಇದನ್ನೂ ಓದಿ: ಐಎನ್​​ಸಿಎ ಅವಾರ್ಡ್ ಫಂಕ್ಷನ್​ನಲ್ಲಿ ಮಿಂಚಿದ ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ: ವಿಡಿಯೋ

ಕರಣ್ ಆನಂದ್ ಹಾಗೂ ಅನಿರುದ್ಧ ಮಹೇಶ್ ಅವರು ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಗಿರಿ ಕೃಷ್ಣ ಕಥೆ ಬರೆದಿದ್ದು, ರಿಷಬ್ ಶೆಟ್ಟಿ, ತಪಸ್ವಿನಿ ಪೂಣಚ್ಚ, ರಚನಾ ಇಂದರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಹಾಗೂ ರಿಷಬ್ ಶೆಟ್ಟಿ ಫಿಲ್ಮ್ಸ್ ಇದನ್ನು ನಿರ್ಮಾಣ ಮಾಡಿತ್ತು. ಎಂಜಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಅಚ್ಚಿಬಾಬು ಎಂಬುವವರು ಚಿತ್ರವನ್ನು ಡಬ್ ಮಾಡಿ ತೆಲುಗು ರಾಜ್ಯಗಳಲ್ಲಿ ರಿಲೀಸ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us