AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

Rakshit Shetty | 777 Charlie Movie: ರಾಷ್ಟ್ರಮಟ್ಟದಲ್ಲಿ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಟ್ರೇಲರ್​ ರಿಲೀಸ್​ ಆಗುತ್ತಿದ್ದಂತೆಯೇ ಇದು ಅನೇಕ ಸೆಲೆಬ್ರಿಟಿಗಳ ಗಮನ ಸೆಳೆಯುತ್ತಿದೆ.

ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?
ರಶ್ಮಿಕಾ ಮಂದಣ್ಣ, ರಕ್ಷಿತ್ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on: May 16, 2022 | 2:37 PM

Share

ನಟ ರಕ್ಷಿತ್​ ಶೆಟ್ಟಿ (Rakshit Shetty) ಅಭಿನಯದ ‘777 ಚಾರ್ಲಿ’ ಸಿನಿಮಾದ ಟ್ರೇಲರ್​ ಸಖತ್​ ಸದ್ದು ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಪರಭಾಷೆಯ ಸ್ಟಾರ್​ ಕಲಾವಿದರೆಲ್ಲ ಮಾತನಾಡುತ್ತಿದ್ದಾರೆ. ಈ ಚಿತ್ರದ ಮೂಲಕ ರಕ್ಷಿತ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು. ‘777 ಚಾರ್ಲಿ’ (777 Charlie Movie) ಟ್ರೇಲರ್​ ಬಿಡುಗಡೆ ಆಗಿದ್ದು, ಪ್ರೇಕ್ಷಕರನ್ನು ಸಖತ್​ ಎಮೋಷನಲ್​ ಆಗಿ ಆವರಿಸಿಕೊಂಡಿದೆ. ಜನರು ಇದರ ಬಗ್ಗೆ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಕಿರಣ್​ ರಾಜ್​ ನಿರ್ದೇಶನದ ಈ ಸಿನಿಮಾ ಖಂಡಿತವಾಗಿಯೂ ರಶ್ಮಿಕಾ ಮಂದಣ್ಣ ಅವರಿಗೆ ಇಷ್ಟ ಆಗಲಿದೆ ಎಂಬ ಅಭಿಪ್ರಾಯ ಕೂಡ ಕೆಲವರಿಂದ ಕೇಳಿಬರುತ್ತಿದೆ. ಅದಕ್ಕೆ ಕಾರಣ ಕೂಡ ಇದೆ. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಹೇಳಲಾಗುತ್ತಿದೆ. ರಶ್ಮಿಕಾ ಮಂದಣ್ಣ (Rashmika Mandanna) ಅವರು ಕೂಡ ಪ್ರಾಣಿಪ್ರಿಯೆ. ಔರಾ ಎಂಬ ನಾಯಿಯನ್ನು ಅವರು ಸಾಕಿದ್ದಾರೆ. ಶೂಟಿಂಗ್​ ಬಿಡುವಿನಲ್ಲಿ ಅವರು ಔರಾ ಜೊತೆ ಕಾಲ ಕಳೆಯುತ್ತಾರೆ. ಹಾಗಾಗಿ ಅವರಿಗೆ ‘777 ಚಾರ್ಲಿ’ ಸಿನಿಮಾ ಇಷ್ಟ ಆಗಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ.

ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಒಂದು ಕಾಲದಲ್ಲಿ ಸಖತ್​ ಆತ್ಮೀಯರಾಗಿದ್ದರು. ಅವರ ಎಂಗೇಜ್​ಮೆಂಟ್​ ಕೂಡ ಆಗಿತ್ತು. ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದುಬಿತ್ತು. ಹಾಗಂತ ಇಬ್ಬರ ನಡುವೆ ಯಾವುದೇ ವೈಮನಸ್ಸು ಮುಂದುವರಿದಿಲ್ಲ. ಈ ಹಿಂದೆ ರಶ್ಮಿಕಾ ಅವರ ಜನ್ಮದಿನಕ್ಕೆ ರಕ್ಷಿತ್​ ಶೆಟ್ಟಿ ಅವರು ವಿಶ್​ ಮಾಡಿದ್ದರು. ಹಾಗೆಯೇ ‘ಕಿರಿಕ್​ ಪಾರ್ಟಿ’ ಸಿನಿಮಾದ ನೆನಪುಗಳನ್ನು ರಶ್ಮಿಕಾ ಮಂದಣ್ಣ ಶೇರ್​ ಮಾಡಿಕೊಂಡಿದ್ದರು.

ರಾಷ್ಟ್ರಮಟ್ಟದಲ್ಲಿ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಅನೇಕ ಸೆಲೆಬ್ರಿಟಿಗಳ ಗಮನ ಸೆಳೆಯುತ್ತಿದೆ. ಹಾಗಾಗಿ ಪ್ರಾಣಿಪ್ರಿಯೆ ಆಗಿರುವ ರಶ್ಮಿಕಾ ಮಂದಣ್ಣ ಕೂಡ ಈ ಚಿತ್ರವನ್ನು ನೋಡಿದರೆ ಅಚ್ಚರಿ ಏನಿಲ್ಲ. ಒಂದು ವೇಳೆ ಅವರು ಸಿನಿಮಾ ನೋಡಿದರೆ ಹೇಗೆ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ. ಕಿರಣ್​ ರಾಜ್​ ನಿರ್ದೇಶನ ಮಾಡಿರುವ ‘777 ಚಾರ್ಲಿ’ ಸಿನಿಮಾ ಜೂ.10ರಂದು ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ ಹಾಗು ಹಿಂದಿ ಭಾಷೆಗೂ ಡಬ್​ ಆಗಿ ಈ ಚಿತ್ರ ತೆರೆಕಾಣುತ್ತಿದೆ. ರಕ್ಷಿತ್​ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಠ್​ ಮುಂತಾದವರು ‘777 ಚಾರ್ಲಿ’ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
777 Charlie Trailer: ‘777 ಚಾರ್ಲಿ’ ಸಿನಿಮಾ ಟ್ರೇಲರ್​ ರಿಲೀಸ್​: ಎಮೋಷನಲ್​ ಕಥೆಯ ಸುಳಿವು ನೀಡಿದ ರಕ್ಷಿತ್​ ಶೆಟ್ಟಿ
Image
‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
Image
ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ತು ದೊಡ್ಡ ಬೆಂಬಲ; ರಕ್ಷಿತ್ ಫ್ಯಾನ್ಸ್​ಗೆ ಗುಡ್​ ನ್ಯೂಸ್
Image
‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?

ಸಾಯಿ ಪಲ್ಲವಿ ಮೆಚ್ಚಿದ ‘777 ಚಾರ್ಲಿ’:

‘777 ಚಾರ್ಲಿ’ ಸಿನಿಮಾದ ಟ್ರೇಲರ್​ ನೋಡಿ ಸಾಯಿ ಪಲ್ಲವಿ ಮೆಚ್ಚಿಕೊಂಡಿದ್ದಾರೆ. ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ‘ಇದು ತುಂಬ ಹೃದಯಸ್ಪರ್ಶಿ ಆಗಿದೆ. ನಿರ್ದೇಶಕ ಕಿರಣ್​ ರಾಜ್​, ನಟ ರಕ್ಷಿತ್​ ಶೆಟ್ಟಿ ಮತ್ತು ನನ್ನ ಹೃದಯದ ತಂತಿ ಮೀಟುತ್ತಿರುವ ಚಾರ್ಲಿಗೆ ಶುಭ ಹಾರೈಕೆಗಳು. ಪ್ರಾಣಿ ಪ್ರಿಯೆರೇ, ನಿಮಗೆಲ್ಲ ಟಿಶ್ಯೂ ಅಗತ್ಯವಿದೆ’ ಎಂದು ಸಾಯಿ ಪಲ್ಲವಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ‘777 ಚಾರ್ಲಿ’ ಚಿತ್ರ ಸಖತ್​​ ಎಮೋಷನಲ್​ ಆಗಿರಲಿದೆ ಎಂದು ಅವರು ಕೂಡ ಒತ್ತಿ ಹೇಳಿದ್ದಾರೆ.

ರಾಣಾದಗ್ಗು ಬಾಟಿಗೂ ‘777 ಚಾರ್ಲಿ’ ಸಖತ್​ ಇಷ್ಟ:

ತೆಲುಗಿನಲ್ಲಿ ‘777 ಚಾರ್ಲಿ’ ವಿತರಣೆ ಮಾಡಲು ರಾಣಾ ದಗ್ಗುಬಾಟಿ ಮುಂದೆ ಬಂದಿದ್ದಾರೆ. ಸಿನಿಮಾ ಹೇಗಿದೆ ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘777 ಚಾರ್ಲಿ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ಎಂಥ ಅದ್ಭುತ ಟ್ರೀಟ್​ ಇದು. ಒಟ್ಟಾರೆ ಹೊಸತನದಿಂದ ಕೂಡಿದೆ. ಈ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ರಾಣಾ ದಗ್ಗುಬಾಟಿ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು