ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್

TV9 Digital Desk

| Edited By: ಮದನ್​ ಕುಮಾರ್​

Updated on: Oct 05, 2021 | 12:12 PM

ಎಷ್ಟೇ ಪ್ರಯತ್ನಿಸಿದರೂ ಯಾಮಿ ಗೌತಮ್ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ.

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್
ಗಣೇಶ್​, ಯಾಮಿ ಗೌತಮ್​
Follow us

ನಟಿ ಯಾಮಿ ಗೌತಮ್​ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಚಿತ್ರ ಯಶಸ್ವಿ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಇಷ್ಟೆಲ್ಲ ಫೇಮಸ್​ ಆಗಿರುವ ಅವರು ಮೊದಲು ಬಣ್ಣ ಹಚ್ಚಿದ್ದು ಕನ್ನಡದ ಸಿನಿಮಾದಲ್ಲಿ. ಗಣೇಶ್​ ನಟನೆಯ ‘ಉಲ್ಲಾಸ ಉತ್ಸಾಹ’ ಚಿತ್ರವೇ ಯಾಮಿ ಗೌತಮ್​ ನಟನೆಯ ಮೊದಲ ಸಿನಿಮಾ. ಕೆಲವೇ ದಿನಗಳ ಹಿಂದೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಯಾಮಿ ಗೌತಮ್​ ಅವರು ತಮ್ಮ ವೈಯಕ್ತಿಕ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ವಾಸಿ ಮಾಡಲು ಸಾಧ್ಯವಿಲ್ಲದಂತಹ ಚರ್ಮದ ಸಮಸ್ಯೆಯಿಂದ ತಾವು ಬಳಲುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅದಕ್ಕೆ ಫೋಟೋ ಸಾಕ್ಷಿಯನ್ನೂ ನೀಡಿದ್ದಾರೆ.

ಕೆರಟೋಸಿಸ್ ಪಿಲಾರಸ್​ (Keratosis-Pilaris) ಎಂಬ ಚರ್ಮದ ಸಮಸ್ಯೆ ಯಾಮಿ ಗೌತಮ್​ ಅವರನ್ನು ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್​ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಬಂದಿದ್ದ ಅವರು ಈಗ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.

ನಟಿಯರು ಚರ್ಮದ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಹಾಗಾಗಿ ಅವರು ಸ್ವಸ್ಥವಾದ ಚರ್ಮ ಹೊಂದಬೇಕಾಗಿರುವುದು ಅನಿವಾರ್ಯ. ಹಾಗಾಗಿ ಕೆರಟೋಸಿಸ್ ಪಿಲಾರಸ್​ ಸಮಸ್ಯೆಯಿಂದ ಮುಕ್ತಿ ಪಡೆಯಲು ಯಾಮಿ ಗೌತಮ್​ ಸಾಕಷ್ಟು ಪ್ರಯತ್ನಿಸಿದರು. ಆದರೂ ಸಾಧ್ಯವಾಗಿಲ್ಲ. ಆ ಬಗ್ಗೆ ಅವರೀಗ ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

‘ಇತ್ತೀಚೆಗೆ ಒಂದು ಫೋಟೋಶೂಟ್​ ಮಾಡಲಾಯಿತು. ಸಾಮಾನ್ಯವಾಗಿ ನಮ್ಮ ಚರ್ಮದ ಸಮಸ್ಯೆಯನ್ನು ಮರೆಮಾಚುವ ಸಲುವಾಗಿ ಆ ಫೋಟೋಗಳನ್ನು ಪೋಸ್ಟ್​ ಪ್ರೊಡಕ್ಷನ್​ಗೆ ಕಳಿಸುತ್ತೇವೆ. ಆದರೆ ಈ ಬಾರಿ ಬೇರೆ ಆಲೋಚನೆ ಬಂತು. ನಾನೇಕೆ ಈ ಸಮಸ್ಯೆಯನ್ನು ಒಪ್ಪಿಕೊಳ್ಳಬಾರದು ಎನಿಸಿತು’ ಎಂದು ಯಾಮಿ ಗೌತಮ್​ ಪೋಸ್ಟ್​​ ಮಾಡಿದ್ದಾರೆ.

‘ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ’ ಎಂದು ಯಾಮಿ ಗೌತಮ್​ ಹೇಳಿದ್ದಾರೆ.

ಇದನ್ನೂ ಓದಿ:

ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್​; ಸಮನ್ಸ್​ ನೀಡಿದ ಇಡಿ

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

ತಾಜಾ ಸುದ್ದಿ

Related Stories

Click on your DTH Provider to Add TV9 Kannada