AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash 19: ಯಶ್​ 19ನೇ ಚಿತ್ರಕ್ಕೆ ‘ಕೆವಿಎನ್​’ ಬಂಡವಾಳ: ‘ರಾಕಿಂಗ್​ ಸ್ಟಾರ್​’ ಬರ್ತ್​ಡೇ ದಿನವೇ ಸಿಹಿ ಸುದ್ದಿ

Yash Next Movie | KVN Productions: ‘ಕೆವಿಎನ್​’ ಸಂಸ್ಥೆ ಮೂಲಕ ಯಶ್​ ಅವರ ಮುಂದಿನ ಸಿನಿಮಾ ನಿರ್ಮಾಣ ಆಗಲಿದೆ. ಬರೋಬ್ಬರಿ 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ ಎಂಬುದು ವಿಶೇಷ.

Yash 19: ಯಶ್​ 19ನೇ ಚಿತ್ರಕ್ಕೆ ‘ಕೆವಿಎನ್​’ ಬಂಡವಾಳ: ‘ರಾಕಿಂಗ್​ ಸ್ಟಾರ್​’ ಬರ್ತ್​ಡೇ ದಿನವೇ ಸಿಹಿ ಸುದ್ದಿ
ವೆಂಕಟ್ ಕೊನಂಕಿ-ಯಶ್
TV9 Web
| Edited By: |

Updated on: Jan 08, 2023 | 9:52 AM

Share

ಪ್ಯಾನ್​ ಇಂಡಿಯಾ ಸ್ಟಾರ್​​ ಯಶ್​ ಅವರಿಗೆ ಇಂದು (ಜ.8) ಹುಟ್ಟುಹಬ್ಬದ (Yash birthday) ಸಂಭ್ರಮ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಅವರು ದುಬೈಗೆ ತೆರಳಿದ್ದಾರೆ. ಇಂದು ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಲಭ್ಯವಾಗಿದೆ. ‘ರಾಕಿಂಗ್​ ಸ್ಟಾರ್​’ ಯಶ್​ ನಟಿಸಲಿರುವ 19ನೇ ಚಿತ್ರಕ್ಕೆ ಪ್ರತಿಷ್ಠಿತ ‘ಕೆವಿಎನ್’ ಸಂಸ್ಥೆ (KVN Productions) ಬಂಡವಾಳ ಹೂಡಲಿದೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಯಶ್​ ಅವರು ಯಾವ ನಿರ್ಮಾಪಕರ ಜೊತೆ ಕೈ ಜೋಡಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ‘ಕೆವಿಎನ್​’ ಸಂಸ್ಥೆಯ ​ವೆಂಕಟ್​ ಕೊನಂಕಿ ಅವರು ‘ಯಶ್​ 19’ ಚಿತ್ರವನ್ನು (Yash 19) ನಿರ್ಮಾಣ ಮಾಡಲಿದ್ದಾರೆ. ಯಶ್​ ಅವರು ದುಬೈನಿಂದ ವಾಪಸ್​ ಬಂದ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆ ಇದೆ.

‘ಆರ್​ಆರ್​ಆರ್​’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದ್ದ ‘ಕೆವಿಎನ್​’ ಸಂಸ್ಥೆ ಕೆಲವು ಚಿತ್ರಗಳನ್ನು ನಿರ್ಮಾಣ ಮಾಡಿದೆ. ಈ ನಿರ್ಮಾಣ ಸಂಸ್ಥೆಯಿಂದ ಯಶ್​ ಅವರ ಮುಂದಿನ ಸಿನಿಮಾ ತಯಾರಾಗಲಿದೆ. ಬರೋಬ್ಬರಿ 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ ಎಂಬುದು ವಿಶೇಷ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಯಶ್​ ಕೈಗೆತ್ತಿಕೊಳ್ಳುತ್ತಿರುವ ಪ್ರಾಜೆಕ್ಟ್​ ಆದ್ದರಿಂದ ಬಾನೆತ್ತರದಷ್ಟು ನಿರೀಕ್ಷೆ ಮನೆ ಮಾಡಿದೆ.

ಇದನ್ನೂ ಓದಿ: Yash Birthday: ಯಶ್​​ಗೆ ಬರ್ತ್​ಡೇ ಸಂಭ್ರಮ; ದುಬೈನಲ್ಲಿ ರಾಕಿಂಗ್ ಸ್ಟಾರ್ ಫ್ಯಾಮಿಲಿ

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ದೇಶಾದ್ಯಂತ ಅಭಿಮಾನಿಗಳು ಯಶ್​ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ‘ರಾಕಿಂಗ್ ಸ್ಟಾರ್​’ ನಟನೆಯ ‘ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಾಚಾರಿ’ ಸಿನಿಮಾ ರೀ-ರಿಲೀಸ್​ ಆಗಿದೆ. ಆಂಧ್ರ ಪ್ರದೇಶದಲ್ಲಿ ‘ಕೆಜಿಎಫ್​’ ಚಿತ್ರ ಮರುಬಿಡುಗಡೆ ಆಗಿದೆ. ಈ ಸಿನಿಮಾಗಳನ್ನು ಮತ್ತೆ ದೊಡ್ಡ ಪರದೆಯಲ್ಲಿ ನೋಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್​ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್​

ಯಶ್​ ಹುಟ್ಟುಹಬ್ಬಕ್ಕೆ ಶುಭಕೋರಿ ಅನೇಕ ಕಡೆಗಳಲ್ಲಿ ಬ್ಯಾನರ್​ ಮತ್ತು ಫ್ಲೆಕ್ಸ್​ಗಳನ್ನು ಹಾಕಲಾಗಿದೆ. ವಿವಿಧ ಬಗೆಯ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಕಾರಣಾಂತರಗಳಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯಶ್​ ಅವರಿಗೆ ಸಾಧ್ಯವಾಗಿಲ್ಲ. ಮುಂದಿನ ಸಿನಿಮಾದ ತಯಾರಿಯಲ್ಲಿ ಇರುವ ಅವರು ಇನ್ನೊಂದಷ್ಟು ಸಮಯ ಬೇಕು ಎಂದು ಕೇಳಿರುವ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ: Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ

‘ಕೆಜಿಎಫ್​: ಚಾಪ್ಟರ್​ 3’ ಸಿನಿಮಾ ಸೆಟ್ಟೇರಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಚಿತ್ರದ ಕೆಲಸಗಳು ಶುರುವಾಗಲು ಇನ್ನೂ ಸಮಯ ಹಿಡಿಯಲಿದೆ. ಕೆವಿಎನ್​ ಪ್ರೊಡಕ್ಷನ್ಸ್​ ಜೊತೆ ಸೇರಿ ಯಶ್​ ಮಾಡಲಿರುವ ಸಿನಿಮಾ ಯಾವ ಪ್ರಕಾರದಲ್ಲಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್