ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರಿಗೆ ಇಂದು (ಜ.8) ಹುಟ್ಟುಹಬ್ಬದ (Yash birthday) ಸಂಭ್ರಮ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಅವರು ದುಬೈಗೆ ತೆರಳಿದ್ದಾರೆ. ಇಂದು ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಲಭ್ಯವಾಗಿದೆ. ‘ರಾಕಿಂಗ್ ಸ್ಟಾರ್’ ಯಶ್ ನಟಿಸಲಿರುವ 19ನೇ ಚಿತ್ರಕ್ಕೆ ಪ್ರತಿಷ್ಠಿತ ‘ಕೆವಿಎನ್’ ಸಂಸ್ಥೆ (KVN Productions) ಬಂಡವಾಳ ಹೂಡಲಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಅವರು ಯಾವ ನಿರ್ಮಾಪಕರ ಜೊತೆ ಕೈ ಜೋಡಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ‘ಕೆವಿಎನ್’ ಸಂಸ್ಥೆಯ ವೆಂಕಟ್ ಕೊನಂಕಿ ಅವರು ‘ಯಶ್ 19’ ಚಿತ್ರವನ್ನು (Yash 19) ನಿರ್ಮಾಣ ಮಾಡಲಿದ್ದಾರೆ. ಯಶ್ ಅವರು ದುಬೈನಿಂದ ವಾಪಸ್ ಬಂದ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆ ಇದೆ.
‘ಆರ್ಆರ್ಆರ್’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದ್ದ ‘ಕೆವಿಎನ್’ ಸಂಸ್ಥೆ ಕೆಲವು ಚಿತ್ರಗಳನ್ನು ನಿರ್ಮಾಣ ಮಾಡಿದೆ. ಈ ನಿರ್ಮಾಣ ಸಂಸ್ಥೆಯಿಂದ ಯಶ್ ಅವರ ಮುಂದಿನ ಸಿನಿಮಾ ತಯಾರಾಗಲಿದೆ. ಬರೋಬ್ಬರಿ 400 ಕೋಟಿ ರೂಪಾಯಿ ಬಜೆಟ್ನಲ್ಲಿ ಈ ಚಿತ್ರ ಮೂಡಿಬರಲಿದೆ ಎಂಬುದು ವಿಶೇಷ. ‘ಕೆಜಿಎಫ್: ಚಾಪ್ಟರ್ 2’ ಯಶಸ್ಸಿನ ಬಳಿಕ ಯಶ್ ಕೈಗೆತ್ತಿಕೊಳ್ಳುತ್ತಿರುವ ಪ್ರಾಜೆಕ್ಟ್ ಆದ್ದರಿಂದ ಬಾನೆತ್ತರದಷ್ಟು ನಿರೀಕ್ಷೆ ಮನೆ ಮಾಡಿದೆ.
ಇದನ್ನೂ ಓದಿ: Yash Birthday: ಯಶ್ಗೆ ಬರ್ತ್ಡೇ ಸಂಭ್ರಮ; ದುಬೈನಲ್ಲಿ ರಾಕಿಂಗ್ ಸ್ಟಾರ್ ಫ್ಯಾಮಿಲಿ
ದೇಶಾದ್ಯಂತ ಅಭಿಮಾನಿಗಳು ಯಶ್ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ‘ರಾಕಿಂಗ್ ಸ್ಟಾರ್’ ನಟನೆಯ ‘ಮಿಸ್ಟರ್ ಆ್ಯಂಡ್ ಮಿಸಸ್ ರಾಮಾಚಾರಿ’ ಸಿನಿಮಾ ರೀ-ರಿಲೀಸ್ ಆಗಿದೆ. ಆಂಧ್ರ ಪ್ರದೇಶದಲ್ಲಿ ‘ಕೆಜಿಎಫ್’ ಚಿತ್ರ ಮರುಬಿಡುಗಡೆ ಆಗಿದೆ. ಈ ಸಿನಿಮಾಗಳನ್ನು ಮತ್ತೆ ದೊಡ್ಡ ಪರದೆಯಲ್ಲಿ ನೋಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಇದನ್ನೂ ಓದಿ: Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್
ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿ ಅನೇಕ ಕಡೆಗಳಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಹಾಕಲಾಗಿದೆ. ವಿವಿಧ ಬಗೆಯ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಕಾರಣಾಂತರಗಳಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯಶ್ ಅವರಿಗೆ ಸಾಧ್ಯವಾಗಿಲ್ಲ. ಮುಂದಿನ ಸಿನಿಮಾದ ತಯಾರಿಯಲ್ಲಿ ಇರುವ ಅವರು ಇನ್ನೊಂದಷ್ಟು ಸಮಯ ಬೇಕು ಎಂದು ಕೇಳಿರುವ ಪೋಸ್ಟ್ ವೈರಲ್ ಆಗಿದೆ.
ಇದನ್ನೂ ಓದಿ: Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್ ಪತ್ರ
‘ಕೆಜಿಎಫ್: ಚಾಪ್ಟರ್ 3’ ಸಿನಿಮಾ ಸೆಟ್ಟೇರಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಚಿತ್ರದ ಕೆಲಸಗಳು ಶುರುವಾಗಲು ಇನ್ನೂ ಸಮಯ ಹಿಡಿಯಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ಮಾಡಲಿರುವ ಸಿನಿಮಾ ಯಾವ ಪ್ರಕಾರದಲ್ಲಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.