ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ

Yash 19: ಯಶ್ ಹೊಸ ಸಿನಿಮಾ ಬಗ್ಗೆ ತಿಳಿಯಲು ಅಭಿಮಾನಿಗಳು ಹಲವು ಸಮಯದಿಂದ ಕಾದಿದ್ದರು. ಅದಕ್ಕೆ ಮುಹೂರ್ತ ಕೂಡಿಬಂದಿದೆ. ಇಂದು ಟೈಟಲ್ ರಿವೀಲ್ ಆಗಿದೆ.

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ
Edited By:

Updated on: Dec 08, 2023 | 11:59 AM

ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘Yash 19’ಗಾಗಿ ಫ್ಯಾನ್ಸ್ ಕಾಯುತ್ತಲೇ ಇದ್ದರು. ಕೊನೆಗೂ ಈ ವಿಚಾರ ರಿವೀಲ್ ಆಗಿದೆ. ‘Yash 19’ ಚಿತ್ರಕ್ಕೆ ‘ಟಾಕ್ಸಿಕ್’ (Toxic) ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್ ನೊಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರೋ ಕಾರಣಕ್ಕೆ ಈ ಚಿತ್ರಕ್ಕೆ ಟೈಟಲ್ ಸೂಕ್ತ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಯಶ್ ಅವರ ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್​ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡವು. ನರ್ತನ್ ಅವರು ‘ಯಶ್ 19’ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಡೆಯಲಿಲ್ಲ. ಈಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ‘ಕೆಜಿಎಫ್ 2’ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಯಶ್ ಹೊಸ ಚಿತ್ರದ ಟೈಟಲ್ ಘೋಷಣೆ ಆಗಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. 10-4-2025ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಲಿದೆ.

ಟ್ವಿಟರ್​ನಲ್ಲಿ ಸದ್ಯ #Toxic ಹ್ಯಾಶ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಅಭಿಮಾನಿಗಳು ಹಬ್ಬ ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಅದಕ್ಕೆ ಸೂಕ್ತ ಆಗುವಂಥ ಟೈಟಲ್​ನ ಫೈನಲ್ ಮಾಡಲಾಗಿದೆ. ಗೀತು ಮೋಹನ್​ದಾಸ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:00 am, Fri, 8 December 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us