AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರು ಫ್ರೀ ಆಗಿ ನೋಡೋದಾಗಿದ್ರೆ ಮನಬಂದಂತೆ ಸಿನಿಮಾ ಮಾಡ್ತಿದ್ದೆ’; ‘Yash19’ ವಿಳಂಬಕ್ಕೆ ಕಾರಣ ಕೊಟ್ಟ ಯಶ್

ಯಶ್​ ದೇಶ-ವಿದೇಶ ಸುತ್ತುತ್ತಾ ಟೈಮ್ ಪಾಸ್ ಮಾಡುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳು ವ್ಯಕ್ತವಾಗಿದೆ. ಆದರೆ, ಇದಕ್ಕೆಲ್ಲ ಯಶ್ ತಲೆಕೆಡಿಸಿಕೊಂಡಿಲ್ಲ. ಈಗ ಸಿನಿಮಾ ವಿಳಂಬಕ್ಕೆ ಕಾರಣ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 21, 2023 | 2:27 PM

Share

‘Yash19’ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದನ್ನು ಯಾರು ನಿರ್ದೇಶನ ಮಾಡುತ್ತಿದ್ದಾರೆ? ಈ ಚಿತ್ರ ಎಷ್ಟು ಭಾಷೆಯಲ್ಲಿ ಮೂಡಿಬರಲಿದೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈಗ ಯಶ್ (Yash) ಅವರು ಈ ಕುರಿತು ಮಾತನಾಡಿದ್ದಾರೆ. ಇಂದು (ಜೂನ್ 21) ಯಶ್ ಅವರು ಕುಟುಂಬ (Yash Family) ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದರು. 19ನೇ ಸಿನಿಮಾ ಕುರಿತು ಅವರು ಮಾತನಾಡಿದ್ದಾರೆ.

‘ಕೆಜಿಎಫ್ 2’ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅವರು ದೇಶ-ವಿದೇಶ ಸುತ್ತುತ್ತಾ ಟೈಮ್ ಪಾಸ್ ಮಾಡುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳು ವ್ಯಕ್ತವಾಗಿದೆ. ಆದರೆ, ಇದಕ್ಕೆಲ್ಲ ಯಶ್ ತಲೆಕೆಡಿಸಿಕೊಂಡಿಲ್ಲ. ಏನೋ ದೊಡ್ಡದನ್ನು ಮಾಡೋಕೆ ಅವರು ರೆಡಿ ಆಗಿದ್ದಾರೆ. ಈ ಕುರಿತು ಅವರು ಒಂದು ಹಿಂಟ್ ನೀಡಿದ್ದಾರೆ.

‘ಯಶ್ 19 ಬಗ್ಗೆ ಹೇಳಿ’ ಎಂದು ಯಶ್ ಅವರನ್ನು ಕೇಳಲಾಯಿತು. ಇದಕ್ಕೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀಗೆಲ್ಲಾ ಅದನ್ನು ಅನೌನ್ಸ್ ಮಾಡೋಕೆ ಆಗುತ್ತಾ? ಜನ ನನಗೆ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಅವರು ಕೊಡೋ ದುಡ್ಡಿಗೆ ವ್ಯಾಲ್ಯೂ ಇರಬೇಕು. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಇಡೀ ದೇಶ ಜಗತ್ತು ನೋಡುತ್ತಾ ಇದೆ. ಆದಷ್ಟು ಬೇಗ ಹೇಳ್ತೀವಿ’ ಎಂದರು ಯಶ್​.

ಇದನ್ನೂ ಓದಿ: Yash: ನಂಜನಗೂಡಿಗೆ ‘ರಾಕಿಂಗ್ ಸ್ಟಾರ್’ ಎಂಟ್ರಿ; ಯಶ್ ನೋಡಲು ಜನಸಾಗರ

ಜನರು ದುಡ್ಡುಕೊಟ್ಟು ಸಿನಿಮಾ ನೋಡುತ್ತಾರೆ. ಅವರು ಕೊಡುವ ಹಣಕ್ಕೆ ಬೆಲೆ ಕೊಡಬೇಕು ಅನ್ನೋದು ಯಶ್ ಅಭಿಪ್ರಾಯ. ‘ಬಹಳ ದಿನಗಳಿಂದ ಕೆಲಸ ಮಾಡ್ತಾ ಇದೀವಿ. ಜನರು ಫ್ರೀ ನೋಡ್ತಾರೆ ಎಂದಾಗಿದ್ರೆ ಮನ ಬಂದಂತೆ ಕೆಲಸ ಮಾಡ್ತಾ ಇದ್ದೆ. ಆದರೆ, ಅವರು ಹಣ ಕೊಟ್ಟು ಸಿನಿಮಾ ನೋಡ್ತಾರೆ. ಅವರೇ ನನ್ನನ್ನು ಬೆಳೆಸಿದ್ದು. ನನ್ನ ಮೇಲೆ ಜವಾಬ್ದಾರಿ ಇದೆ. ನಾನು ಒಂದು ದಿನ, ಒಂದು ಕ್ಷಣಾನೂ ವೇಸ್ಟ್ ಮಾಡ್ತಾ ಇಲ್ಲ. ಆದಷ್ಟು ಬೇಗ ಬರ್ತೀವಿ’ ಎಂದರು ಯಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:11 pm, Wed, 21 June 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!