ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ

Yash 19 Update: ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ
ಯಶ್-ಗೀತು
Follow us
ರಾಜೇಶ್ ದುಗ್ಗುಮನೆ
|

Updated on:Apr 15, 2023 | 12:52 PM

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್​ಗೆ ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ಬೇಡಿಕೆ ಇಡುತ್ತಲೇ ಇದ್ದಾರೆ. ಆದರೆ ಯಶ್ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಿರುವಾಗಲೇ ಯಶ್ (Yash) ಹೊಸ ಸಿನಿಮಾ ಬಗ್ಗೆ ಅಪ್​​​ಡೇಟ್ ಒಂದು ಸಿಕ್ಕಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ (Geetu Mohandas) ಜೊತೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದಲ್ಲಿ ಯಶ್ ಅಭಿಮಾನಿಗಳು ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ.

ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಮೊದಲು ನರ್ತನ್ ಜೊತೆ ಅವರು ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಯಿತು. ‘ಬ್ರಹ್ಮಾಸ್ತ್ರ 2’ ಚಿತ್ರದಲ್ಲಿ ನಟಿಸಲು ಯಶ್​​ಗೆ ಆಫರ್ ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಆ ಬಗ್ಗೆ ಯಾವುದೇ ಬೆಳವಣಿಗೆ ಆಗಿಲ್ಲ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಯಶ್ ಹಾಗೂ ಗೀತು ಮಧ್ಯೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಗೀತು ಹೇಳಿದ ಕಥೆಗೆ ಯಶ್ ಫಿದಾ ಆಗಿದ್ದಾರೆ ಎಂದು ತಿಳಿದು ಬಂದಿದೆ. ಯಶ್ ದೊಡ್ಡ ನಿರ್ದೇಶಕರ ಜೊತೆ ಕೆಲಸ ಜೋಡಿಸಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಯಶ್ ಪ್ರಮುಖವಾಗಿ ಸ್ಕ್ರಿಪ್ಟ್​ ಕಡೆ ಗಮನ ಹರಿಸುತ್ತಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಪಡೆದ ಯಶ್, 19ನೇ ಸಿನಿಮಾಕ್ಕೆ ಭಾರಿ ಯೋಜನೆ

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಈ ಕಾರಣಕ್ಕೆ ಯಶ್ ಮೇಲೆ ನಿರೀಕ್ಷೆ ಹೆಚ್ಚಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶ್ ಖ್ಯಾತಿ ಹಬ್ಬಿದೆ. ಹೀಗಿರುವಾಗ ಅವರು ಗೀತು ಜೊತೆ ಕೈ ಜೋಡಿಸುತ್ತಾರೆ ಎನ್ನುವ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಮುಂದಿನ 30 ದಿನಗಳಲ್ಲಿ ಅವರ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೇಗಿತ್ತು ರಾಕಿ-ರಾಧಿಕಾ ಪಂಡಿತ್ ಭೇಟಿ; ಹಳೆಯ ವಿಡಿಯೋ ಹಂಚಿಕೊಂಡ ಯಶ್ ಪತ್ನಿ

2014ರಲ್ಲಿ ಬಂದ ‘ಲೈಯರ್ಸ್​ ಡೈಸ್’ ಸಿನಿಮಾ ಮೂಲಕ ಗೀತಾ ಮೋಹನ್​ದಾಸ್ ಫೇಮಸ್ ಆದರು. ಈ ಸಿನಿಮಾಗೆ ಎರಡು ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಇದರ ಜೊತೆಗೆ ಇನ್ನೂ ಕೆಲ ಅವಾರ್ಡ್​ ಸಿನಿಮಾಗೆ ಲಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 15 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ