Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್​ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್​ ಜೋರು ಜೋರಾಗಿ ವಾದ ಮಾಡಿದ್ದಾರೆ. ಹಾಗಾದರೆ, ಅವರಿಬ್ಬರ ತಕರಾರು ಏನು ಎಂಬ ಪ್ರಶ್ನೆ ಮೂಡುವುದು ಸಹಜ. ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ಇದು ಅವರಿಬ್ಬರೂ ಜೊತೆಯಾಗಿ ನಟಿಸಿರುವ ಜಾಹೀರಾತಿನ ದೃಶ್ಯ.

ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್
ರಾಧಿಕಾ ಪಂಡಿತ್, ಯಶ್
Follow us
ಮದನ್​ ಕುಮಾರ್​
|

Updated on: Nov 05, 2024 | 6:21 PM

ನಟ ಯಶ್ ಅವರು ಸಿನಿಮಾದಲ್ಲಿ ಮಾತ್ರವಲ್ಲದೇ ಜಾಹೀರಾತುಗಳಿಂದಲೂ ಸಾಕಷ್ಟು ಸಂಭಾವನೆ ಪಡೆಯುತ್ತಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅಡುಗೆ ಎಣ್ಣೆಯ ಕಂಪನಿಯೊಂದಕ್ಕೆ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಜೋಡಿಯಾಗಿ ಬ್ರ್ಯಾಂಡ್ ಅಂಬಾಸಡರ್​ ಆಗಿದ್ದಾರೆ. ಆ ಕಾರಣದಿಂದ ಅವರು ಒಟ್ಟಿಗೆ ಜಾಹೀರಾತಿನಲ್ಲಿ ನಟಿಸಿದ್ದಾರೆ. ಕೋರ್ಟ್ ಥೀಮ್​ನಲ್ಲಿ ಈ ಹೊಸ ಜಾಹೀರಾತು ಮೂಡಿಬಂದಿದೆ. ಇದನ್ನು ನೋಡಿ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್​ ಬಿರುಸಿನಿಂದ ವಾದ ಮಾಡಿದ್ದಾರೆ. ಈ ರೀತಿಯ ದೃಶ್ಯ ಜಾಹೀರಾತಿನಲ್ಲಿ ಇದೆ.

View this post on Instagram

A post shared by Yash (@thenameisyash)

ರಾಧಿಕಾ ಪಂಡಿತ್ ಅವರು ಕನ್ನಡ ಚಿತ್ರರಂಗದ ಸ್ಟಾರ್​ ನಟಿ. ಆದರೆ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದು ಕಡಿಮೆ ಆಯಿತು. ಇತ್ತೀಚಿನ ವರ್ಷಗಳಲ್ಲಿ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರ ನಟನೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾದಿಂದ ದೂರ ಉಳಿದಿದ್ದರೂ ಕೂಡ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ.

ಇದನ್ನೂ ಓದಿ: ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ; ಇಲ್ಲಿದೆ ವಿಶೇಷ ವಿಡಿಯೋ

ಸದ್ಯಕ್ಕೆ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಅಲ್ಲದೇ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಉತ್ಪನ್ನಗಳಿಗೂ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇಂಥ ಜಾಹೀರಾತುಗಳ ಮೂಲಕವೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್