KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ

Yash | KGF 2 Advance Booking: ‘ಕೆಜಿಎಫ್ 2’ ರಿಲೀಸ್ ಬಗ್ಗೆ ಚಿತ್ರತಂಡ ಪ್ರತಿದಿನವೂ ಹೊಸ ಅಪ್ಡೇಟ್ ನೀಡುತ್ತಿದೆ. ಇದೀಗ ಅಡ್ವಾನ್ಸ್ ಬುಕ್ಕಿಂಗ್ ಬಗ್ಗೆ ಮಾಹಿತಿ ನೀಡಿದೆ ಚಿತ್ರತಂಡ. ಎಲ್ಲೆಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಪ್ರಾರಂಭವಾಗಲಿದೆ? ಎಂದಿನಿಂದ? ಇಲ್ಲಿದೆ ಮಾಹಿತಿ.

KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ
‘ಕೆಜಿಎಫ್ ಚಾಪ್ಟರ್ 2’ ಪೋಸ್ಟರ್
Follow us
TV9 Web
| Updated By: shivaprasad.hs

Updated on:Apr 06, 2022 | 4:36 PM

ಯಶ್ (Yash) ನಟನೆಯ ‘ಕೆಜಿಎಫ್ 2’ (KGF Chapter 2) ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗೊಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದೆ. ಈ ನಡುವೆ ಚಿತ್ರದ ರಿಲೀಸ್ ಬಗ್ಗೆ ಪ್ರತಿದಿನವೂ ಹೊಸ ಅಪ್ಡೇಟ್​ಗಳನ್ನು ಘೋಷಿಸಲಾಗುತ್ತಿದೆ. ಇದುವರೆಗೆ ವಿದೇಶಗಳಲ್ಲಿ ಚಿತ್ರ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳುತ್ತಿತ್ತು. ಬ್ರಿಟನ್​ನಲ್ಲಿ ದಾಖಲೆಯ ಮಟ್ಟದಲ್ಲಿ ಟಿಕೆಟ್ ಕೂಡ ಮಾರಾಟವಾಗಿತ್ತು. ಇದೀಗ ಭಾರತದ ಹಲವು ಭಾಗಗಳಲ್ಲಿ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್​ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ನಾಳೆಯಿಂದ ಅಂದರೆ ಏಪ್ರಿಲ್ 7ರಿಂದ ಅಡ್ವಾನ್ಸ್ ಬುಕ್ಕಿಂಗ್ ಆರಂಭಿಸಲಾಗುವುದು ಎಂದು ಘೋಷಿಸಿದೆ.

ಬುಕ್​ಮೈಶೋ ಹಾಗೂ ಪೇಟಿಎಂ ಮೂಲಕ ನಾಳೆಯಿಂದ (ಏ.7)  ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ಟಿಕೆಟ್​ಗಳು ಅಡ್ವಾನ್ಸ್​ ಬುಕ್ಕಿಂಗ್​ಗೆ ಲಭ್ಯವಿರುತ್ತವೆ’ ಎಂದು ಹೊಂಬಾಳೆ ಫಿಲ್ಮ್ಸ್ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಇಲ್ಲಿದೆ:

ಕರ್ನಾಟಕದಲ್ಲಿ ರಿಲೀಸ್ ಯಾವಾಗ? ಫ್ಯಾನ್ಸ್ ಪ್ರಶ್ನೆ:

‘ಕೆಜಿಎಫ್ 2’ ಚಿತ್ರತಂಡ ಇದುವರೆಗೆ ಬಹುತೇಕ ಎಲ್ಲೆಡೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವನ್ನು ಘೋಷಿಸಿದೆ. ಆದರೆ ಇನ್ನೂ ಕರ್ನಾಟಕದ ಬಗ್ಗೆ ಅಧಿಕೃತವಾಗಿ ತಿಳಿಸಿಲ್ಲ. ಅಭಿಮಾನಿಗಳು ಈ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ. ‘‘ದೀರ್ಘಕಾಲದಿಂದ ಕಾಯುತ್ತಿದ್ದೇವೆ, ಆದಷ್ಟು ಬೇಗ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಮಾಡಿ’’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋರಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಕರ್ನಾಟಕದಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭದ ಬಗ್ಗೆ ಚಿತ್ರತಂಡ ಸದ್ಯದಲ್ಲೇ ಮಾಹಿತಿ ನೀಡುವ ನಿರೀಕ್ಷೆಗಳಿವೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಏಪ್ರಿಲ್ 14ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಗ್ರೀಸ್​ನಲ್ಲಿ ತೆರೆಕಾಣಲಿರುವ ಮೊದಲ ದಕ್ಷಿಣ ಭಾರತೀಯ ಚಿತ್ರ ಕೆಜಿಎಫ್ 2; ರಿಲೀಸ್​ಗೂ ಮುನ್ನ ಹಲವು ದಾಖಲೆ ಬರೆದ ಯಶ್​ ಚಿತ್ರ

Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​

Published On - 4:27 pm, Wed, 6 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ