AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಗಳನ್ನು ರೆಕಾರ್ಡ್ ಮಾಡಬೇಡಿ’: ಟಾಕ್ಸಿಕ್ ಬಿಡುಗಡೆಗೂ ಮುನ್ನ ಜನರಿಗೆ ಯಶ್ ಮನವಿ

‘ರಾಕಿಂಗ್ ಸ್ಟಾರ್’ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೂ ಮುನ್ನ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬರುವ ಪ್ರೇಕ್ಷಕರು ಯಾವುದೇ ದೃಶ್ಯಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಬಾರದು ಎಂದು ಅವರು ವಿನಂತಿಸಿಕೊಂಡಿದ್ದಾರೆ. ಆಗಸ್ಟ್ 26ರಂದು ‘ಟಾಕ್ಸಿಕ್’ ಚಿತ್ರ ವಿಶ್ವಾದ್ಯಂತ ತೆರೆಕಾಣುತ್ತಿದೆ.

‘ದೃಶ್ಯಗಳನ್ನು ರೆಕಾರ್ಡ್ ಮಾಡಬೇಡಿ’: ಟಾಕ್ಸಿಕ್ ಬಿಡುಗಡೆಗೂ ಮುನ್ನ ಜನರಿಗೆ ಯಶ್ ಮನವಿ
Yash
ಮದನ್​ ಕುಮಾರ್​
|

Updated on: Aug 25, 2026 | 9:44 PM

Share

ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ (Toxic) ಸಿನಿಮಾ ಭರ್ಜರಿಯಾಗಿ ತೆರೆಕಾಣುತ್ತಿದೆ. ಈ ಸಿನಿಮಾದ ಮೇಲೆ ಜನರಿಗೆ ಇರುವ ಕ್ರೇಜ್ ಅಷ್ಟಿಷ್ಟಲ್ಲ. ಮೊದಲ ದಿನ ಮೊದಲ ಶೋ ನೋಡಿ ಎಂಜಾಯ್ ಮಾಡಲು ಲಕ್ಷಾಂತರ ಅಭಿಮಾನಿಗಳು ಸಜ್ಜಾಗಿದ್ದಾರೆ. ಸಿನಿಮಾದ ಬಿಡುಗಡೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಯಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಚಿತ್ರಮಂದಿರಗಳಲ್ಲಿ ಯಾವುದೇ ದೃಶ್ಯವನ್ನು ರೆಕಾರ್ಡ್ ಮಾಡಬಾರದು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬಾರದು ಎಂದು ಯಶ್ (Yash) ಹೇಳಿದ್ದಾರೆ. ಅವರು ಮಾಡಿರುವ ಪೋಸ್ಟ್ ಈ ರೀತಿ ಇದೆ..

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎನ್ನುವುದು ನಮಗೆ ಕೇವಲ ಒಂದು ಸಿನಿಮಾವಷ್ಟೇ ಅಲ್ಲ; ಇದು ನಾವು ಪ್ರತಿ ಫ್ರೇಮ್, ಪ್ರತಿ ದೃಶ್ಯ ಹಾಗೂ ಪ್ರತಿಯೊಂದು ಆಯ್ಕೆಯನ್ನು ಅತ್ಯಂತ ಜಾಗರೂಕತೆಯಿಂದ ಸೃಷ್ಟಿಸಿ, ವರ್ಷಗಳ ಕಾಲ ನಮ್ಮ ಹೃದಯವನ್ನು ಧಾರೆ ಎರೆದು ಕಟ್ಟಿದ ಒಂದು ಜಗತ್ತು. ಈ ಸಿನಿಮಾದ ನಿರ್ಮಾಣ ಮತ್ತು ಬಿಡುಗಡೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬ ತಂತ್ರಜ್ಞ, ಕಲಾವಿದ ಮತ್ತು ತಾಂತ್ರಿಕ ವರ್ಗದ ಸಿಬ್ಬಂದಿಯ ಆಶಯವೂ ಒಂದೇ – ನೀವೆಲ್ಲರೂ ಚಿತ್ರಮಂದಿರಗಳಲ್ಲಿ ದೊಡ್ಡ ಪರದೆಯ ಮೇಲೆ ಒಂದು ಸಮುದಾಯವಾಗಿ ಜೊತೆಯಾಗಿ ಕುಳಿತು ಈ ಅದ್ಭುತ ಅನುಭವವನ್ನು ಪಡೆದುಕೊಳ್ಳಬೇಕು ಎಂಬುದಾಗಿದೆ.’

‘ಈ ಸಿನಿಮಾಗೆ ನೀವು ಈಗಾಗಲೇ ತೋರಿಸುತ್ತಿರುವ ಅಪಾರ ಪ್ರೀತಿ, ತೋರುತ್ತಿರುವ ಉತ್ಸಾಹ ಮತ್ತು ಮುಂಗಡ ಬುಕಿಂಗ್ ಮೂಲಕ ನೀಡುತ್ತಿರುವ ಭರ್ಜರಿ ಬೆಂಬಲಕ್ಕೆ ಧನ್ಯವಾದ ಹೇಳಲು ನಮಗೆ ಪದಗಳು ಸಾಲುತ್ತಿಲ್ಲ. ನಮ್ಮ ಈ ಇಡೀ ಪ್ರಯಾಣಿಯುದ್ದಕ್ಕೂ ನೀವು ನೀಡಿದ ನಿರಂತರ ಬೆಂಬಲಕ್ಕೆ ನಾವು ಸದಾ ಕೃತಜ್ಞರು. ಈ ಕ್ಷಣದಲ್ಲಿ ನಾವು ನಿಮ್ಮಲ್ಲಿ ಅತ್ಯಂತ ವಿನಮ್ರವಾಗಿ ಒಂದು ಮನವಿ ಮಾಡಿಕೊಳ್ಳುತ್ತಿದ್ದೇವೆ.’

View this post on Instagram

A post shared by Yash (@thenameisyash)

‘ಈ ಸಿನಿಮಾ ಯಾವ ರೀತಿ ನಿಮಗಾಗಿ ರೂಪುಗೊಂಡಿದೆಯೋ, ಅದೇ ರೀತಿಯಲ್ಲಿ ಪ್ರೇಕ್ಷಕರ ಮುಂದೆ ಅನಾವರಣಗೊಳ್ಳಲು ಬಿಡಿ. ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸುವಾಗ ದೃಶ್ಯಗಳನ್ನು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಬೇಡಿ. ಸಿನಿಮಾದ ಪ್ರಮುಖ ಕಥಾಹಂದರ ಹಾಗೂ ಟ್ವಿಸ್ಟ್‌ಗಳನ್ನು ಬಿಟ್ಟುಕೊಟ್ಟು ಇತರರ ವೀಕ್ಷಣೆಯ ಅನುಭವವನ್ನು ಕೆಡಿಸಬೇಡಿ.’

ಇದನ್ನೂ ಓದಿ: ‘ಟಾಕ್ಸಿಕ್’ ಹಿಂದಿ ಆವೃತ್ತಿಗೆ ಸಿಬಿಎಫ್‌ಸಿ ಕತ್ತರಿ: ಕೆಲವು ಸಂಭಾಷಣೆ, ಡ್ರಗ್ಸ್ ದೃಶ್ಯಕ್ಕೆ ಆಕ್ಷೇಪ

‘ನೀವು ಹೇಗೆ ಯಾವುದೇ ಸುಳಿವು ಇಲ್ಲದೆ ಈ ಹೊಸ ಪ್ರಪಂಚಕ್ಕೆ ಕಾಲಿಟ್ಟಿರೋ, ಅದೇ ರೀತಿ ನಿಮಗಿಂತ ನಂತರ ಬರುವ ಪ್ರೇಕ್ಷಕರೂ ಸಹ ಅದೇ ಕುತೂಹಲದೊಂದಿಗೆ ‘ಟಾಕ್ಸಿಕ್’ ಪ್ರಪಂಚವನ್ನು ಅನುಭವಿಸಲು ಅವಕಾಶ ಮಾಡಿಕೊಡಿ’ ಎಂದು ಯಶ್ ಅವರು ಪೋಸ್ಟ್ ಮಾಡಿದ್ದಾರೆ. ‘ಟಾಕ್ಸಿಕ್’ ಚಿತ್ರತಂಡದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಇದೇ ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!