‘ಕನ್ನಡದ ಕೋಟ್ಯಾಧಿಪತಿ’ಯಲ್ಲಿದ್ದಾಗ ರಾಧಿಕಾ ಪಂಡಿತ್​ಗೆ ಕರೆ ಮಾಡಿ ಕಷ್ಟಸುಖ ವಿಚಾರಿಸಿದ್ದ ಯಶ್; ಹಳೆಯ ವಿಡಿಯೋ ವೈರಲ್

ಯಶ್ ಅವರಲ್ಲಿ ಸಾಕಷ್ಟು ಹಾಸ್ಯ ಪ್ರವೃತ್ತಿ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ತೋರಿಸಿದ್ದಾರೆ. ಈಗ ವೈರಲ್ ಆದ ವಿಡಿಯೋ ಇದಕ್ಕೆ ಸಾಕ್ಷಿ.

‘ಕನ್ನಡದ ಕೋಟ್ಯಾಧಿಪತಿ’ಯಲ್ಲಿದ್ದಾಗ ರಾಧಿಕಾ ಪಂಡಿತ್​ಗೆ ಕರೆ ಮಾಡಿ ಕಷ್ಟಸುಖ ವಿಚಾರಿಸಿದ್ದ ಯಶ್; ಹಳೆಯ ವಿಡಿಯೋ ವೈರಲ್
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 03, 2023 | 3:02 PM

‘ಕೆಜಿಎಫ್’ (KGF) ಸರಣಿಯಿಂದ ನಟ ಯಶ್ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದ್ದಾರೆ. ಅವರು ಈಗ ಪ್ಯಾನ್ ಇಂಡಿಯಾ ಮಟ್ಟದ ಸ್ಟಾರ್ ಆಗಿದ್ದಾರೆ. ಜನವರಿ 8ರಂದು ಯಶ್ ಬರ್ತ್​ಡೇ ಆಚರಿಸಿಕೊಳ್ಳಲ್ಲಿದ್ದಾರೆ. ಅಂದು ಅವರ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಯಶ್ ಬರ್ತ್​ಡೇಗೆ (Yash Birthday) ಅಭಿಮಾನಿಗಳು ಕೌಂಟ್​ಡೌನ್ ಶುರು ಹಚ್ಚಿಕೊಂಡಿದ್ದಾರೆ. ಈ ಮಧ್ಯೆ ಯಶ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ‘ಕನ್ನಡದ ಕೋಟ್ಯಧಿಪತಿ’ ಶೋಗೆ ತೆರಳಿದ್ದ ಯಶ್ ಪತ್ನಿಗೆ ಕರೆ ಮಾಡಿ ಕಷ್ಟಸುಖ ವಿಚಾರಿಸಿದ್ದರು.

ಯಶ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಸಮಯ ಸಿಕ್ಕಾಗ ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಪ್ರವಾಸಕ್ಕೆ ತೆರಳುತ್ತಾರೆ. ಯಶ್ ಅವರಲ್ಲಿ ಸಾಕಷ್ಟು ಹಾಸ್ಯ ಪ್ರವೃತ್ತಿ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ತೋರಿಸಿದ್ದಾರೆ. ಈಗ ವೈರಲ್ ಆದ ವಿಡಿಯೋ ಇದಕ್ಕೆ ಸಾಕ್ಷಿ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಯಶ್ 2018ರಲ್ಲಿ ‘ಕನ್ನಡದ ಕೋಟ್ಯಾಧಿಪತಿ’ ಶೋಗೆ ಸ್ಪರ್ಧಿಯಾಗಿ ಆಗಮಿಸಿದ್ದರು. ರಮೇಶ್ ಅರವಿಂದ್ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರಶ್ನೆಯೊಂದಕ್ಕೆ ಫೋನ್ ಆಫ್ ಫ್ರೆಂಡ್ ಆಯ್ಕೆ ಮಾಡಿಕೊಂಡಿದ್ದರು ಯಶ್. ಈ ಆಯ್ಕೆಯಲ್ಲಿ ಅವರು ಪತ್ನಿ ರಾಧಿಕಾ ಪಂಡಿತ್​​ಗೆ ಕರೆ ಮಾಡಿದ್ದರು. ‘ನಿನಗೆ ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲ ಅನ್ನೋದು ಗೊತ್ತು. ಫೋನ್ ಮಾಡದೇ ತುಂಬಾ ಸಮಯ ಆಗಿತ್ತಲ್ಲ. ಅದಕ್ಕೆ ಕರೆ ಮಾಡಿದೆ. ಊಟ ಮಾಡಿದ್ಯಾ? ಇಲ್ಲಿ ಶೂಟಿಂಗ್ ಮುಗಿಸಿ ಬೇಗ ಬರ್ತೀನಿ’ ಎಂದಿದ್ದರು ಯಶ್.

View this post on Instagram

A post shared by Yash fc (@nimma_yashfc)

ಯಶ್ ಮಾತು ಕೇಳಿ ಈ ಶೋ ನಡೆಸಿಕೊಡುತ್ತಿದ್ದುದ ರಮೇಶ್ ಅರವಿಂದ್ ಹೊಟ್ಟೆಹುಣ್ಣಾಗುವಂತೆ ನಕ್ಕಿದ್ದರು. ಈ ಶೋಗೆ ಬಂದಿದ್ದ ಯಶ್ ಅವರು 25 ಲಕ್ಷ ರೂಪಾಯಿ ಗೆದ್ದಿದ್ದರು. ಈ ಹಣವನ್ನು ಅವರು ತಾವು ನಡೆಸುತ್ತಿರುವ ಯಶೋಮಾರ್ಗ ಫೌಂಡೇಷನ್​​​ಗೆ ನೀಡಿದ್ದರು.

ಇದನ್ನೂ ಓದಿ: Rocking Star Yash: ‘ಎಲ್ಲರನ್ನೂ ಗೌರವಿಸೋಣ’; ನೇರವಾಗಿ ಪ್ರತಿಕ್ರಿಯಿಸಿದ ರಾಕಿಂಗ್ ಸ್ಟಾರ್ ಯಶ್

ನರ್ತನ್ ಜತೆ ಯಶ್ ಸಿನಿಮಾ?

ನರ್ತನ್ ಜತೆ ಯಶ್ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇದೆ. ಆದರೆ, ಇನ್ನೂ ಈ ವಿಚಾರ ಖಚಿತವಾಗಿಲ್ಲ. ಈ ಚಿತ್ರಕ್ಕೆ ಕೆವಿಎನ್​ ಪ್ರೊಡಕ್ಷನ್ ಬಂಡವಾಳ ಹೂಡಲಿದೆ ಎನ್ನಲಾಗಿದೆ. ಇತ್ತೀಚೆಗೆ ಕೆವಿಎನ್ ಪ್ರೊಡಕ್ಷನ್​ ಅವರು ನರ್ತನ್​ ಬರ್ತ್​ಡೇಗೆ ವಿಶ್ ಮಾಡಿದ್ದರು. ಈ ವೇಳೆ ಅವರು ‘ನಮ್ಮ ನಿರ್ದೇಶಕ’ ಎಂಬ ಶಬ್ದ ಬಳಕೆ ಮಾಡಲಾಗಿತ್ತು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ