Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ

Yash | Rocking Star Yash Birthday: ಅಭಿಮಾನಿಗಳ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಯಶ್​ ಹೇಳಿದ್ದಾರೆ. ಈ ಕುರಿತು ಅವರು ಮಾಡಿರುವ ಪೋಸ್ಟ್​ ಸಖತ್​ ವೈರಲ್​ ಆಗುತ್ತಿದೆ.

Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 06, 2023 | 6:48 AM

ನಟ ಯಶ್​ ಅವರ ಹುಟ್ಟುಹಬ್ಬವನ್ನು (Yash Birthday) ಅದ್ದೂರಿಯಾಗಿ ಆಚರಿಸಬೇಕು ಎಂದು ಅವರ ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಬಾರಿ ಫ್ಯಾನ್ಸ್​ ಜೊತೆ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಯಶ್​ ಹೇಳಿದ್ದಾರೆ. ಪತ್ರದ ಮೂಲಕ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಜನವರಿ 8ರಂದು ಯಶ್​ ಅವರ ಜನ್ಮದಿನಕ್ಕೆ ಫ್ಯಾನ್ಸ್​ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಹಳ ಹುಮ್ಮಸ್ಸಿನಿಂದ ಕಾಮನ್​ ಡಿಪಿ (Yash Birthday CDP) ಹಂಚಿಕೊಳ್ಳಲಾಗುತ್ತಿದೆ. ಈ ನಡುವೆ ಯಶ್​ ಬರೆದ ಪತ್ರದಿಂದ ಕೊಂಚ ಬೇಸರ ಆಗಿದೆ. ತಾವು ಈ ಬಾರಿ ಹುಟ್ಟುಹಬ್ಬವನ್ನು ಫ್ಯಾನ್ಸ್​ (Yash Fans) ಜೊತೆ ಆಚರಿಸಿಕೊಳ್ಳದೇ ಇರುವುದಕ್ಕೆ ಕಾರಣ ಏನು ಎಂಬುದನ್ನು ಯಶ್​ ಅವರು ಈ ಪತ್ರದಲ್ಲಿ ತಿಳಿಸಿದ್ದಾರೆ.

‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದ್ದೇ ಇತ್ತೀಚಿನ ವರ್ಷಗಳಲ್ಲಿ. ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ’ ಎಂದು ಯಶ್​ ಅವರು ಪತ್ರ ಆರಂಭಿಸಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಇದನ್ನೂ ಓದಿ: Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

‘ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು, ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ’ ಎಂದು ಯಶ್​ ಬರೆದಿದ್ದಾರೆ.

‘ಕ್ಷಮಿಸಿ.. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್’ ಎಂದು ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: KGF Chapter 2: ವಿಶ್ವದ ಟಾಪ್​ 10 ಚಿತ್ರಗಳ ಪಟ್ಟಿಯಲ್ಲಿ ‘ಕೆಜಿಎಫ್​ 2’; ಹಾಲಿವುಡ್​ ಹೀರೋಗಳಿಗೆ ಯಶ್​ ಪೈಪೋಟಿ

ಯಶ್​ ಅವರ ಈ ಪೋಸ್ಟ್​ ಸಖತ್​ ವೈರಲ್​ ಆಗುತ್ತಿದೆ. ‘ರಾಕಿಂಗ್​ ಸ್ಟಾರ್’​ ತೆಗೆದುಕೊಂಡ ನಿರ್ಧಾರದಿಂದ ಒಂದು ವರ್ಗದ ಅಭಿಮಾನಿಗಳಿಗೆ ಬೇಸರ ಆಗಿರಬಹುದು. ಆದರೆ ಅವರು ಯಾವುದೋ ಮಹತ್ವಾಕಾಂಕ್ಷೆಯ ಕೆಲಸದಲ್ಲಿ ಬ್ಯುಸಿ ಇರುವುದರಿಂದಲೇ ಜನ್ಮದಿನದಂದು ಸಿಗುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಅರ್ಥ ಆಗಿದೆ.

‘ಕೆಜಿಎಫ್​ 2’ ಬಳಿಕ ಯಶ್​ ನಟಿಸಲಿರುವ ಹೊಸ ಸಿನಿಮಾ ಬಗ್ಗೆ ಇನ್ನೂ ಅನೌನ್ಸ್​ ಆಗಿಲ್ಲ. ಆದಷ್ಟು ಬೇಗ ಆ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿ​ದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಮುಂಚಿತವಾಗಿ ಯಶ್​ಗೆ ಶುಭಾಶಯ ತಿಳಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:35 pm, Thu, 5 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ