AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್

ರಾಕಿಂಗ್ ಸ್ಟಾರ್ ಯಶ್ ಕ್ಯಾನ್ಸರ್ ಪೀಡಿತ ಅಭಿಮಾನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿ ಧೈರ್ಯ ತುಂಬಿದ್ದಾರೆ. 'ಟಾಕ್ಸಿಕ್' ಚಿತ್ರದ ಬಗ್ಗೆ ಮಾತನಾಡಿದಾಗ, ‘ನಿಮ್ಮ ಲೈಫ್ ನೋಡಿಕೊಳ್ಳಿ. ಸಿನಿಮಾ ಬರುತ್ತೆ, ಹೋಗುತ್ತೆ, ಆರೋಗ್ಯ ಮೊದಲು’ ಎಂದು ಯಶ್ ಹೇಳಿದ್ದಾರೆ. ಅಭಿಮಾನಿಗಳಿಗೆ ಯಶ್ ಅವರ ಈ ಮಾನವೀಯತೆ ಮತ್ತು ಪ್ರೀತಿಯ ಸಂದೇಶ ವ್ಯಾಪಕ ಮೆಚ್ಚುಗೆ ಗಳಿಸಿದ್ದು, ವಿಡಿಯೋ ವೈರಲ್ ಆಗಿದೆ.

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್
ಯಶ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Jun 03, 2026 | 7:04 AM

Share

ರಾಕಿಂಗ್ ಸ್ಟಾರ್ ಯಶ್ ಅವರು (ಯಶ್) ಕೇವಲ ಹೀರೋ ಆಗಿ ಮಾತ್ರವಲ್ಲ, ಮಾನವೀಯತೆ ತೋರುವ ವ್ಯಕ್ತಿಯಾಗಿಯೂ ಇಷ್ಟ ಆಗುತ್ತಾರೆ. ಅಭಿಮಾನಿಗಳು ಕೊಟ್ಟಷ್ಟೇ ಪ್ರೀತಿಯನ್ನು ಇವರು ಕೊಡುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಈಗಾಗಲೇ ಸಿಕ್ಕಿವೆ. ಇತ್ತೀಚೆಗೆ ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಯಶ್ ಅವರು ವಿಡಿಯೋ ಕಾಲ್​​ ಮೂಲಕ ಮಾತನಾಡಿದ್ದಾರೆ. ಅಭಿಮಾನಿಗೆ ಅವರು ಧೈರ್ಯ ತುಂಬಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಪ್ರಶಂಸೆಗೆ ಕಾರಣವಾಗಿದೆ.

ಯಶ್ ಅವರು ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟಕ್ಕೆ ತೆರಳಿದ್ದಾರೆ. ‘ಟಾಕ್ಸಿಕ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವದರ್ಜೆ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಯೋಜನೆ ಅವರಿಗೆ ಇದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾ ರಿಲೀಸ್ ಆದರೆ ಹಬ್ಬ ಮಾಡಬೇಕು ಎಂದು ಕಾದು ಕುಳಿತ ಅಭಿಮಾನಿಯೊಬ್ಬರ ಆರೋಗ್ಯ ಹದಗೆಟ್ಟಿದೆ. ಕ್ಯಾನ್ಸರ್ ಇರುವ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್

ಅಭಿಮಾನಿಗೆ ಕ್ಯಾನ್ಸರ್ ಇರುವ ವಿಷಯ ಗೊತ್ತಾಗುತ್ತಿದ್ದಂತೆ ರಾಕಿಂಗ್ ಸ್ಟಾರ್ ಯಶ್ ಅವರು ವಿಡಿಯೋ ಕಾಲ್ ಮೂಲಕ 10 ನಿಮಿಷಕ್ಕೂ ಹೆಚ್ಚು ಸಮಯ ಮಾತನಾಡಿದ್ದಾರೆ. ಮೊದಲು ಏನಾಯಿತು? ಕ್ಯಾನ್ಸರ್ ಇದೆ ಎಂಬುದು ಏಕೆ ಗೊತ್ತಾಗಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಆ ಬಳಿಕ ಯಶ್ ಅವರು ಒಂದು ಪ್ರಮುಖವಾದ ಕಿವಿಮಾತು ಹೇಳಿದ್ದಾರೆ.

ಅಭಿಮಾನಿ ಜೊತೆ ಮಾತನಾಡಿದ ಯಶ್

‘ನಿಮ್ಮ ಸಿನಿಮಾ ಟಾಕ್ಸಿಕ್​​ನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಬೇಕು ಎಂದು ಪ್ಲ್ಯಾನ್ ಮಾಡಿದ್ದೆವು’ ಎಂದು ಕ್ಯಾನ್ಸರ್ ಪೀಡಿತ ಅಭಿಮಾನಿ ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಯಶ್, ‘ನಿಮ್ಮ ಲೈಫ್ ನೋಡಿಕೊಳ್ಳಿ. ಸಿನಿಮಾ ಬರುತ್ತೆ, ಹೋಗುತ್ತೆ. ನಿಮ್ಮ ಆರೋಗ್ಯವನ್ನು ಮೊದಲು ನೋಡಿಕೊಳ್ಳಬೇಕು’ ಎಂದು ಯಶ್ ಕಿವಿಮಾತು ಹೇಳಿದ್ದಾರೆ. ‘ಏನ್ ಮಾತನಾಡಬೇಕು ಎಂದು ಗೊತ್ತಾಗುತ್ತಿಲ್ಲ ಚಿನ್ನ. ಮಿರಾಕಲ್​​ಗಳು ಆಗುತ್ತೆ. ಹೋಪ್ ಇರಲಿ’ ಎಂದು ಯಶ್ ಹೇಳಿದ್ದಾರೆ. ಕೊನೆಯಲ್ಲಿ ಅಭಿಮಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More