ಯಶ್- ರಾಧಿಕಾ ಮನೆಯಲ್ಲಿ ಹಬ್ಬದ ಸಡಗರ ಜೋರು; ಪುಟಾಣಿ ಆಯ್ರಾ ಹಾಗೂ ಯಥರ್ವ್ ಸಂಭ್ರಮ ನೋಡಿ

ಸ್ಯಾಂಡಲ್​ವುಡ್​ನ ಸ್ಟಾರ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ಸಡಗರದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಪುಟಾಣಿ ಯಥರ್ವ್ ಹಾಗೂ ಆಯ್ರಾರನ್ನು ನೋಡಿ ಅಭಿಮಾನಿಗಳು ಮನಸೋತಿದ್ದಾರೆ.

ಯಶ್- ರಾಧಿಕಾ ಮನೆಯಲ್ಲಿ ಹಬ್ಬದ ಸಡಗರ ಜೋರು; ಪುಟಾಣಿ ಆಯ್ರಾ ಹಾಗೂ ಯಥರ್ವ್ ಸಂಭ್ರಮ ನೋಡಿ
ಹಬ್ಬದ ಸಂದರ್ಭದಲ್ಲಿ ಆಯ್ರಾ, ರಾಧಿಕಾ ಪಂಡಿತ್ ಹಾಗೂ ಯಥರ್ವ್ (ಕೃಪೆ: ರಾಧಿಕಾ ಪಂಡಿತ್/ ಇನ್ಸ್ಟಾಗ್ರಾಂ)
Follow us
TV9 Web
| Updated By: shivaprasad.hs

Updated on: Aug 21, 2021 | 11:34 AM

ಚಂದನವನದ ತಾರಾ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಹಬ್ಬದ ಸಡಗರದ ಚಿತ್ರವನ್ನು ಸಂಭ್ರಮದಿಂದ ಹಂಚಿಕೊಂಡಿರುವ ರಾಧಿಕಾ ಪಂಡಿತ್, ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಹಬ್ಬದ ಕುರಿತು ಸುಂದರ ಕ್ಯಾಪ್ಶನ್ ಕೂಡಾ ನೀಡಿರುವ ಅವರು, ಹಬ್ಬಗಳು ಎಲ್ಲರೂ ಒಟ್ಟಾಗಿ ಸೇರುವ, ಪ್ರಾರ್ಥಿಸುವ, ಸಡಗರದಿಂದ ಪಾಲ್ಗೊಳ್ಳುವ ಒಂದು ಕಾರ್ಯಕ್ರಮ. ಖುಷಿಯಿಂದ ದಿನ ಕಳೆಯುವ ಇಂತಹ ಸಂದರ್ಭವನ್ನು ನೀವೂ ಆಚರಿಸಿದ್ದೀರಿ ಎಂದು ಭಾವಿಸುತ್ತೇನೆ. ಎಂದು ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ಅವರು, ಸಡಗರದ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಹಂಚಿಕೊಂಡಿರುವ ಚಿತ್ರಗಳಲ್ಲಿ ಯಶ್, ರಾಧಿಕಾ ಹಾಗೂ ಅವರ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಸಂಭ್ರಮದಿಂದ ಹಬ್ಬ ಆಚರಿಸುತ್ತಿರುವ ಚಿತ್ರಗಳಿವೆ. ಆಯ್ರಾ ಹಾಗೂ ಯಥರ್ವ್ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿಕೊಂಡು ಮುದ್ದುಮುದ್ದಾಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ರಾಧಿಕಾ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ವರಮಹಾಲಕ್ಷ್ಮಿ ಹಬ್ಬದಂದು ಗುಡ್ ನ್ಯೂಸ್ ಕೊಟ್ಟಿದ್ದ ಹೊಂಬಾಳೆ ಫಿಲ್ಮ್ಸ್ ಹಾಗೂ ಯಶ್:

ಹಬ್ಬದ ದಿನದಂದು (ಆಗಸ್ಟ್ 20) ಹೊಂಬಾಳೆ ಫಿಲ್ಮ್ಸ್ ಭಭರ್ಜರಿ ನ್ಯೂಸ್ ಕೊಟ್ಟಿತ್ತು. ಕೆಜಿಎಫ್ 2 ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ಸಂಸ್ಥೆಗೆ ನೀಡಿದ ಚಿತ್ರವನ್ನು ಹಂಚಿಕೊಂಡಿದ್ದ ಸಂಸ್ಥೆ, ದಕ್ಷಿಣ ಭಾರತದ ಎಲ್ಲಾ ಭಾಷೆಗಳ ಸ್ಯಾಟಲೈಟ್ ಹಕ್ಕುಗಳು ಜೀ ಪಾಲಾಗಿವೆ ಎಂದು ತಿಳಿಸಿತ್ತು. ಇದನ್ನು ಯಶ್ ಸಂಭ್ರಮದಿಂದ ಹಂಚಿಕೊಂಡಿದ್ದರು. ಬಲ್ಲ ಮೂಲಗಳ ಪ್ರಕಾರ ಸ್ಯಾಟಲೈಟ್ ಹಕ್ಕನ್ನು ದಾಖಲೆಯ ಮೊತ್ತ ನೀಡಿ ಜೀ ಖರೀದಿಸಿದೆ ಎನ್ನಲಾಗಿದೆ.

ಚಿತ್ರದ ಸ್ಯಾಟಲೈಟ್ ಹಕ್ಕು ಬಿಡುಗಡೆಯ ಘೋಷಣೆಯಾದ ತಕ್ಷಣ ಅಭಿಮಾನಿಗಳಿಗೆ ಗೊಂದಲವಾಗಿದ್ದು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ ಎಂಬ ಪ್ರಶ್ನೆ ಎತ್ತಿದ್ದರು. ಆದರೆ ವಾಸ್ತವವಾಗಿ ಸ್ಯಾಟಲೈಟ್ ಹಕ್ಕು ಎನ್ನುವುದು ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪಡೆದುಕೊಳ್ಳುವ ಹಕ್ಕು. ಆ ಹಕ್ಕನ್ನು ಜೀ ಪಡೆದುಕೊಂಡಿದೆ. ಚಿತ್ರದ ಒಟಿಟಿ ಹಕ್ಕನ್ನು ನಿರ್ಮಾಣ ಸಂಸ್ಥೆ ಇನ್ನೂ ಯಾರಿಗೂ ನೀಡಿಲ್ಲ ಮತ್ತು ಈ ಕುರಿತು ಯಾವುದೇ ಘೋಷಣೆಯನ್ನೂ ಹೊರಡಿಸಿಲ್ಲ. ಬಲ್ಲ ಮೂಲಗಳ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ ‘ಕೆಜಿಎಫ್ 2 ’ ಚಿತ್ರಮಂದಿರಗಳಲ್ಲಿಯೇ ಬಿಡುಗಡೆಯಾಗಲಿದೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ರವೀನಾ ಟಂಡನ್ ಮೊದಲಾದವರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಮಾದರಿಯ ಈ ಚಿತ್ರಕ್ಕೆ ಈಗಾಗಲೇ ದೇಶದಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

(Yash family celebrates Vara Mahalakshmi festival and Radhika Pandit shared festive moments)

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ