AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’-‘ರಾಮಾಯಣ’ ಶೂಟ್ ಮುಗಿಸಿ ಕುಟುಂಬ ಸಮೇತ ಅಮೆರಿಕಕ್ಕೆ ಹಾರಿದ ಯಶ್

ಯಶ್ ಅವರು ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಚಿತ್ರಗಳ ಚಿತ್ರೀಕರಣ ಮುಗಿಸಿ ಕುಟುಂಬದೊಂದಿಗೆ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕೆಲವು ವಾರಗಳಿಂದ ಮುಂಬೈನಲ್ಲಿದ್ದ ಯಶ್, ಈಗ ವಿಶ್ರಾಂತಿ ಪಡೆಯಲು ತಮ್ಮ ಪತ್ನಿ ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಅಮೆರಿಕಕ್ಕೆ ತೆರಳಿದ್ದಾರೆ. ಜುಲೈ 3 ರಂದು ‘ರಾಮಾಯಣ’ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆಯಾಗಲಿದೆ.

‘ಟಾಕ್ಸಿಕ್’-‘ರಾಮಾಯಣ’ ಶೂಟ್ ಮುಗಿಸಿ ಕುಟುಂಬ ಸಮೇತ ಅಮೆರಿಕಕ್ಕೆ ಹಾರಿದ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 8:50 AM

Share

ನಟ ಯಶ್ ಅವರು ಇತ್ತೀಚೆಗೆ ಸಿನಿಮಾ ಕೆಲಸಗಳಲ್ಲಿ ಸಖತ್ ಬ್ಯುಸಿ ಆಗಿದ್ದರು. ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಕೆಲಸಗಳಲ್ಲಿ ತೊಡಗಿಕೊಂಡಿದ್ದರಿಂದ ವೆಕೇಶನ್ ತೆರಳಲು ಅವರ ಬಳಿ ಸಮಯ ಇರಲಿಲ್ಲ. ಈಗ ಅವರು ಒಂದು ಹಂತದ ಜವಾಬ್ದಾರಿ ಮುಗಿಸಿ ಅಮೆರಿಕಕ್ಕೆ ಹಾರಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳು ಯಶ್​ಗೆ ಸಾಥ್ ನೀಡಿದ್ದಾರೆ ಎನ್ನಲಾಗಿದೆ. ಒಂದಷ್ಟು ಸಮಯವನ್ನು ಕುಟುಂಬದ ಜೊತೆ ಕಳೆದು ಯಶ್ (Yash) ಬರಲಿದ್ದಾರೆ.

ಯಶ್ ಅವರು ಫ್ಯಾಮಿಲಿ ಮ್ಯಾನ್. ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಅವರು ಬಯಸುತ್ತಾರೆ. ‘ಕೆಜಿಎಫ್ 2’ ಬಳಿಕ ಯಶ್ ಅವರು ದೊಡ್ಡ ಬ್ರೇಕ್ ತೆಗೆದುಕೊಂಡಿದ್ದರು. ಆ ಬಳಿಕ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆದರು. ಇದಕ್ಕಾಗಿ ಬೆಂಗಳೂರು, ಮುಂಬೈ ಹಾಗೂ ಗೋವಾ ಕಡೆಗಳಲ್ಲಿ ಸುತ್ತಾಡಿದರು. ಇದು ಪೂರ್ಣಗೊಳ್ಳುತ್ತಿದ್ದಂತೆ ಯಶ್ ಅವರು ‘ರಾಮಾಯಣ’ ಸಿನಿಮಾದಲ್ಲಿ ತೊಡಗಿಕೊಂಡರು.

ಕಳೆದ ಕೆಲವು ವಾರಗಳಿಂದ ಯಶ್ ಅವರು ಮುಂಬೈನಲ್ಲಿ ನೆಲೆಸಿದ್ದರು. ತಮ್ಮನ್ನು ತಾವು ‘ರಾಮಾಯಣ’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದರು. ಈ ಚಿತ್ರದಲ್ಲಿ ರಾವಣನ ಪಾತ್ರ ಆಗಿರುವುದರಿಂದ ಅವರು ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಇದು ಭಾವನಾತ್ಮಕವಾಗಿಯೂ ಹೆಚ್ಚು ಚಾಲೆಂಜಿಂಗ್. ಈ ಕಾರಣದಿಂದಲೇ ಯಶ್​ಗೆ ಒಂದು ಬ್ರೇಕ್ ಬೇಕಿತ್ತು. ಅದನ್ನು ಅವರು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಯಶ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರೋ ಫೋಟೋಗಳು ವೈರಲ್ ಆಗಿವೆ. ಅವರು ಅಮೆರಿಕಕ್ಕೆ ತೆರಳಿದ್ದಾಗಿ ಅವರದಿ ಆಗಿದೆ. ಜುಲೈ 3ರಂದು ರಾಮಾಯಣ ಚಿತ್ರದ ಮೊದಲ ಗ್ಲಿಂಪ್ಸ್​ ಬರಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ಜುಲೈ 3ರಂದು ಬಿಡುಗಡೆ ಆಗಲಿದೆ ಯಶ್ ನಟನೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್

ಯಶ್ ಅವರು ‘ಕೆಜಿಎಫ್ 2’ ಚಿತ್ರದ ಬಳಿಕ ದೊಡ್ಡ ಯಶಸ್ಸು ಕಂಡರು. ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ವಿಶೇಷ ಎಂದರೆ, ‘ರಾಮಾಯಣ’ ಹಾಗೂ ‘ಟಾಕ್ಸಿಕ್’ ಎರಡೂ ಚಿತ್ರಕ್ಕೆ ಅವರು ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಸಂಭಾವನೆ ಹಣವನ್ನು ಅವರು ಸಿನಿಮಾದಲ್ಲಿ ಹೂಡಿಕೆ ಮಾಡುವಂತೆ ಕೋರಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಅವರ ಕಡೆಯಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ