ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ.

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​
ಸಾಂತ್ವನ ಹೇಳಿದ ಯಶ್​
Follow us
TV9 Web
| Updated By: ಮದನ್​ ಕುಮಾರ್​

Updated on:Jan 08, 2024 | 7:08 PM

ನಟ ಯಶ್​ ಜನ್ಮದಿನದ (Yash Birthday) ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ಮೂವರು ಅಭಿಮಾನಿಗಳು ನಿಧನರಾದ (Yash Fans Death) ಘಟನೆ ತೀವ್ರ ನೋವುಂಟು ಮಾಡಿದೆ. ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಸ್ವತಃ ಯಶ್​ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ವಿದ್ಯುತ್​ ಶಾಕ್​ನಿಂದ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಯಶ್​ (Yash) ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂರಣಗಿಯಲ್ಲಿ ಭದ್ರತೆಗಾಗಿ ಲಕ್ಷ್ಮೇಶ್ವರ ಪಿಎಸ್ಐ ನೇತೃತ್ವದಲ್ಲಿ 2 ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ. ಅಭಿಮಾನಿಗಳ ನಿಧನದ ಬಳಿಕ ಯಶ್​ ಬರಲೇಬೇಕು ಎಂದು ಗ್ರಾಮದ ಜನರು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಯಶ್​ ಅವರು ಸೂರಣಗಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬ ದುರಂತ: ಮೃತ ಮೂವರು ದುರ್ದೈವಿಗಳ ಅಂತಿಮಸಂಸ್ಕಾರ ಒಟ್ಟಿಗೆ ನೆರವೇರಿಸಿದ ಸೂರಣಗಿ ಗ್ರಾಮಸ್ಥರು

ಸೂರಣಗಿ ಗ್ರಾಮಕ್ಕೆ ಜನಸಾಗರ ಹರಿದು ಬಂದಿದೆ. ಯಶ್​ ಅವರ ಆಗಮನದ ಹಿನ್ನೆಲೆಯಲ್ಲಿ‌ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಯಶ್ ಅವರನ್ನು ನೋಡಲು ಆಗಮಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

2019ರಲ್ಲೂ ನಡೆದಿತ್ತು ದುರಂತ:

ರಾಕಿಂಗ್​ ಸ್ಟಾರ್​ ಯಶ್ ಅವರು 2019ರಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೂ ಒಬ್ಬ ಅಭಿಮಾನಿ ಪ್ರಾಣ ಕಳೆದುಕೊಂಡಿದ್ದ. ಯಶ್​ ಅವರನ್ನು ನೋಡಲು ಬಿಡದ ಕಾರಣ ಪೆಟ್ರೋಲ್ ಸುರಿದುಕೊಂಡು ರವಿ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ. ಹೊಸಕೆರೆಹಳ್ಳಿಯ ಯಶ್​ ಅವರ ನಿವಾಸದ ಬಳಿ ಈ ಘಟನೆ ನಡೆದಿತ್ತು. ಆತನನ್ನ ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮರುದಿನ ಆತ ಮೃತಪಟ್ಟಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 pm, Mon, 8 January 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್