‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಆದರೆ ಇಂಗ್ಲಿಷ್ ವರ್ಷನ್ ರಿಲೀಸ್ ಬಗ್ಗೆ ಅನುಮಾನ ಮೂಡಿದೆ. ಇಂಗ್ಲಿಷ್ ಟೀಸರ್ ರಿಲೀಸ್ ಆಗಿಲ್ಲ. ಪೋಸ್ಟರ್​ಗಳಲ್ಲಿ ಇಂಗ್ಲಿಷ್ ವರ್ಷನ್ ಬಿಡುಗಡೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ.

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ
Yash

Updated on: Feb 24, 2026 | 8:01 PM

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ ಈ ಆ್ಯಕ್ಷನ್ ಅಬ್ಬರದ ಸಿನಿಮಾ ಯಶ್ (Yash) ವೃತ್ತಿಜೀವನದ ಅತಿ ದೊಡ್ಡ ಬಜೆಟ್‌ನ ಚಿತ್ರ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ನೋಡಿದರೆ ಸಿನಿಮಾದಲ್ಲಿ ರಕ್ತಸಿಕ್ತ ದೃಶ್ಯಗಳು ಹೇರಳವಾಗಿವೆ ಎಂಬ ಸುಳಿವು ಸಿಕ್ಕಿದೆ. ಅದರಿಂದ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಆದರೆ, ಸಿನಿಮಾದ ಬಿಡುಗಡೆ ವಿಚಾರದಲ್ಲಿ ಈಗ ಹೊಸದೊಂದು ಚರ್ಚೆ ಶುರುವಾಗಿದೆ. ಇಂಗ್ಲಿಷ್ ವರ್ಷನ್ ಬಿಡುಗಡೆ ಆಗುತ್ತಾ ಇಲ್ಲವಾ ಎಂಬ ಅನುಮಾನ ಕಾಡಿದೆ.

‘ಟಾಕ್ಸಿಕ್’ ಚಿತ್ರವನ್ನು ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲೂ ಏಕಕಾಲಕ್ಕೆ ಚಿತ್ರೀಕರಿಸಲಾಗಿತ್ತು. ಮೊದಮೊದಲು ಚಿತ್ರತಂಡ ಇಂಗ್ಲಿಷ್ ಆವೃತ್ತಿಯ ಬಗ್ಗೆ ಸಾಕಷ್ಟು ಸುಳಿವುಗಳನ್ನು ನೀಡಿತ್ತಾದರೂ, ಇತ್ತೀಚಿನ ಬೆಳವಣಿಗೆಗಳು ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿವೆ. ಇತ್ತೀಚೆಗೆ ಬಿಡುಗಡೆಯಾದ ನಟ ಅಕ್ಷಯ್ ಓಬೆರಾಯ್, ಬಾಲಾಜಿ ಮನೋಹರ್ ಅವರ ಕ್ಯಾರೆಕ್ಟರ್ ಪೋಸ್ಟರ್‌ನಲ್ಲಿ ಇಂಗ್ಲಿಷ್ ಆವೃತ್ತಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಅದರಿಂದ ಈ ಅನುಮಾನ ಮೂಡುವಂತಾಗಿದೆ.

ಸಿನಿಮಾವನ್ನು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಿದ ಮೇಲೆ, ಬಿಡುಗಡೆಯ ಸಮಯದಲ್ಲಿ ಅದರ ಬಗ್ಗೆ ಮೌನ ವಹಿಸಿರುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ನಿರ್ಮಾಣ ಸಂಸ್ಥೆಯನ್ನು ಪ್ರಶ್ನಿಸುತ್ತಿದ್ದಾರೆ. ಇಂಗ್ಲಿಷ್ ಆವೃತ್ತಿಯ ಪ್ರತ್ಯೇಕ ಟೀಸರ್ ಆಗಲಿ ಅಥವಾ ಬಿಡುಗಡೆಯ ದಿನಾಂಕವಾಗಲಿ ಪ್ರಕಟವಾಗದಿರುವುದು ಕುತೂಹಲದ ಜೊತೆಗೆ ಬೇಸರವನ್ನೂ ಮೂಡಿಸಿದೆ.

ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಿದೆ. ಆದರೆ ಇಂಗ್ಲಿಷ್ ವರ್ಷನ್ ಟೀಸರ್ ರಿಲೀಸ್ ಆಗಿಲ್ಲ. ಅದಕ್ಕೆ ಕಾರಣ ಏನಿರಬಹುದು ಎಂದು ಫ್ಯಾನ್ಸ್ ತಲೆ ಕೆಡಿಸಿಕೊಂಡಿದ್ದಾರೆ. ಚಿತ್ರದ ಮೇಕಿಂಗ್ ಗುಣಮಟ್ಟ ಹಾಲಿವುಡ್ ಶೈಲಿಯಲ್ಲಿ ಇದೆ. ಹಾಗಾಗಿ ಇಂಗ್ಲಿಷ್ ವರ್ಷನ್ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ:  ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ

ಈ ಸಿನಿಮಾದ ಹಾಡುಗಳು ‘ಜೀ ಮ್ಯೂಸಿಕ್’ ಮೂಲಕ ಬಿಡುಗಡೆ ಆಗಲಿವೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ ಮುಂತಾದ ಸ್ಟಾರ್ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇದೆ. ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ಈ ಚಿತ್ರವನ್ನು ವಿತರಿಸುತ್ತಿದ್ದಾರೆ. ಚಿತ್ರತಂಡವು ಇಂಗ್ಲಿಷ್ ಆವೃತ್ತಿಯ ಬಗ್ಗೆ ಶೀಘ್ರದಲ್ಲೇ ಸ್ಪಷ್ಟನೆ ನೀಡಲಿದೆ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us