AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Yash19’ ಸಿನಿಮಾ ಸೆಟ್​ ಫೋಟೋ ಲೀಕ್​? ಇದರ ಅಸಲಿಯತ್ತೇನು? ಇಲ್ಲಿದೆ ವಿವರ

Yash: ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋ ಯಶ್ 19 ಸಿನಿಮಾದ್ದು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

‘Yash19’ ಸಿನಿಮಾ ಸೆಟ್​ ಫೋಟೋ ಲೀಕ್​? ಇದರ ಅಸಲಿಯತ್ತೇನು? ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on:May 23, 2023 | 6:46 AM

Share

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ವರ್ಷವೇ ಕಳೆದಿದೆ. ಹೀಗಿದ್ದರೂ ಅವರ ಮುಂದಿನ ಸಿನಿಮಾ ಬಗ್ಗೆ ಒಂದೇ ಒಂದು ಅಪ್​​ಡೇಟ್​ ಕೂಡ ಸಿಕ್ಕಿಲ್ಲ. ಸಾಮಾನ್ಯವಾಗಿ ಹಿರೋಗಳ ಮುಂದಿನ ಚಿತ್ರದ ಡೈರೆಕ್ಟರ್ ಯಾರು ಎನ್ನುವ ವಿಚಾರ ಲೀಕ್ ಆಗಿ ಬಿಡುತ್ತದೆ. ಆದರೆ, ‘Yash19’ ವಿಚಾರದಲ್ಲಿ ಅಂತೆಕಂತೆಗಳು ಹುಟ್ಟಿಕೊಳ್ಳುತ್ತಿವೆ. ಈಗ Yash19 ಸಿನಿಮಾ ಸೆಟ್​​ನದ್ದು ಎನ್ನಲಾದ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋನ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಯಶ್ 19ನೇ ಚಿತ್ರಕ್ಕೆ ಯಾರು ನಿರ್ದೇಶನ ಮಾಡುತ್ತಾರೆ ಎಂಬುದು ಇನ್ನೂ ರಿವೀಲ್ ಆಗಿಲ್ಲ. ಇತ್ತೀಚೆಗೆ ಶ್ರೀಲಂಕಾದಲ್ಲಿ ಶೂಟಿಂಗ್​ ಸ್ಪಾಟ್ ಹುಡುಕೋಕೆ ಯಶ್ ತೆರಳಿದ್ದರು ಎನ್ನುವುದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋ ಯಶ್ 19 ಸಿನಿಮಾದ್ದು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಆದರೆ, ಈ ಫೋಟೋ ಬಗ್ಗೆ ಒಂದಷ್ಟು ಅನುಮಾನಗಳು ಕೂಡ ಹಟ್ಟಿಕೊಳ್ಳುತ್ತವೆ. ತಮ್ಮ 19ನೇ ಸಿನಿಮಾ ಬಗ್ಗೆ ಯಶ್ ಸಾಕಷ್ಟು ಗುಟ್ಟು ಕಾಯ್ದುಕೊಂಡಿದ್ದಾರೆ. ಸಿನಿಮಾ ಬಗ್ಗೆ ಒಂದೇ ಒಂದು ವಿಚಾರ ಕೂಡ ಲೀಕ್ ಆಗದಂತೆ ನೋಡಿಕೊಂಡಿದ್ದಾರೆ. ಹೀಗಿರುವಾಗ ಸಿನಿಮಾ ಶೂಟಿಂಗ್ ಸ್ಥಳದ ಫೋಟೋ ಲೀಕ್ ಆಗೋಕೆ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ವೈರಲ್ ಆದ ಫೋಟೋದಲ್ಲಿ ಯಶ್ ತಲೆ ಕೂದಲು ನೋಡಿದರೆ ಅನೇಕರಿಗೆ ಅನುಮಾನ ಬರೋದು ಸಹಜ. ಏಕೆಂದರೆ ಯಶ್ ಕೂದಲ ಈಗ ಮತ್ತೂ ಉದ್ದಕ್ಕೆ ಬೆಳೆದಿದೆ. ಇನ್ನು ಫೋಟೋದ ಶೇಡ್ ನೋಡಿದರೆ ಅದು ‘ಕೆಜಿಎಫ್​’ ಸರಣಿಯನ್ನು ನೆನಪಿಸುತ್ತದೆ. ಇದು ಎಡಿಟೆಡ್ ಫೋಟೋ ಎಂದು ಕೂಡ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿ ನಿರ್ಮಿಸಿರೋದು ಯಶ್​​ಗೆ ಆ್ಯಕ್ಷನ್ ಕಟ್ ಹೇಳಿದ್ದ ಡೈರೆಕ್ಟರ್

‘Yash19’ ಸಿನಿಮಾ ಅಪ್​ಡೇಟ್​​ಗಾಗಿ ಕಾದು ಕಾದು ಅಭಿಮಾನಿಗಳು ಸುಸ್ತಾಗಿದ್ದಾರೆ. ಹೀಗಾಗಿ, ಈ ಫೋಟೋನ ಅಭಿಮಾನಿಗಳಲ್ಲೇ ಯಾರೋ ವೈರಲ್ ಮಾಡಿರಬೇಕು ಎನ್ನುವ ಅನುಮಾನ ಮೂಡಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಯಶ್ ಅವರೇ ಸ್ಪಷ್ಟನೆ ನೀಡಲಿ ಎಂದು ಕಾದಿದ್ದಾರೆ. ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಶೀಘ್ರವೇ ಮಾಹಿತಿ ಸಿಗಲಿ ಅನ್ನೋದು ಅಭಿಮಾನಿಗಳ ಆಸೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:46 am, Tue, 23 May 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ