AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ
ಯಶ್
ರಾಜೇಶ್ ದುಗ್ಗುಮನೆ
|

Updated on: Aug 24, 2023 | 11:31 AM

Share

ನಟ ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಹುಟ್ಟಿಕೊಂಡಿರೋ ವದಂತಿಗಳು ಒಂದೆರಡಲ್ಲ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಅವರ ಸಿನಿಮಾ ಕುರಿತು ನಿತ್ಯ ಒಂದಿಲ್ಲೊಂದು ಹೊಸ ಸುದ್ದಿ ಹುಟ್ಟಿಕೊಳ್ಳುತ್ತಲೇ ಇವೆ. ಬಾಲಿವುಡ್​ನಲ್ಲಿ ಸಿದ್ಧವಾಗಲಿರೋ ‘ರಾಮಾಯಣ’ (Ramayana) ಸಿನಿಮಾದಲ್ಲಿ ನಟಿಸಲು ಯಶ್ ಅವರಿಗೆ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ಯಶ್ ಲುಕ್ ಟೆಸ್ಟ್​ಗೆ ಹೋಗಿದ್ದು ನಿಜ ಎನ್ನುತ್ತಿವೆ ಮೂಲಗಳು. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಒಂದೊಮ್ಮೆ ಪಾತ್ರಕ್ಕೆ ಹೊಂದಿಕೆ ಆದರೆ ಕಲಾವಿದನನ್ನು ಫೈನಲ್ ಮಾಡಲಾಗುತ್ತದೆ. ಇಲ್ಲವಾದರೆ ಬೇರೊಬ್ಬ ಕಲಾವಿದನ ಹುಡುಕಲಾಗುತ್ತದೆ. ಈಗ ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ‘ಬಾಲಿವುಡ್ ಹಂಗಾಮ’ ವರದಿ ಮಾಡಿದೆ.

ಈ ವರದಿಯ ಪ್ರಕಾರ ಯಶ್ ಅವರು ರಾವಣನ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಿಸಿದ್ದಾರಂತೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಅವರಿಗೆ ಆಫರ್ ನೀಡಿದ್ದು ನಿಜವಂತೆ. ಆದರೆ, ಸೀತೆಯ ಪಾತ್ರಕ್ಕೆ ಆಲಿಯಾ ಅವರನ್ನು ಸಂಪರ್ಕಿಸಿಲ್ಲ ಎಂದು ಬಾಲಿವುಡ್ ಹಂಗಾಮ ವರದಿ ಹೇಳಿದೆ. ಯಶ್ ಅವರ ಆಯ್ಕೆ ವಿಚಾರದಲ್ಲಿ ನಿರ್ದೇಶಕರು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರವನ್ನು ಮೂರು ಭಾಗಗಳಲ್ಲಿ ತೆರೆಗೆ ತರಲು ನಿರ್ಧರಿಸಿದ್ದಾರೆ. ಒಂದೇ ಭಾಗದಲ್ಲಿ ಎಲ್ಲವನ್ನೂ ಹೇಳಲು ಅಸಾಧ್ಯ. ಈ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಯಶ್ ಅವರು ಈ ಸಿನಿಮಾ ಒಪ್ಪಿಕೊಂಡರೆ ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಬೇಕಾಗುತ್ತದೆ. ಇದರ ಜೊತೆ ಅವರು ‘ಕೆಜಿಎಫ್ 3’ ಕೆಲಸಗಳಲ್ಲೂ ಭಾಗಿ ಆಗಬೇಕಿದೆ.

ಇದನ್ನೂ ಓದಿ: ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಯಶ್ ಮುಂದಿನ ಚಿತ್ರದ ಬಗ್ಗೆ ಹುಟ್ಟಿಕೊಂಡ ವದಂತಿಗಳು ಹಲವು. ಯಾವುದೂ ಅಧಿಕೃತ ಆಗಿಲ್ಲ. ಹೀಗಾಗಿ, ‘ರಾಮಾಯಣ’ ವಿಚಾರ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಯಶ್ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ