ಯಶ್ ಬಗ್ಗೆ ರಕ್ಷಿತ್ ಶೆಟ್ಟಿಗೆ ಯಾವ ರೀತಿಯ ಅಭಿಪ್ರಾಯ ಇದೆ? ‘SSE’ ಸ್ಟಾರ್ ವಿವರಿಸಿದ್ದು ಹೀಗೆ

ರಕ್ಷಿತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಈ ತಿಂಗಳ ಆರಂಭದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿದೆ. ತೆಲುಗಿನಲ್ಲೂ ರಿಲೀಸ್ ಆಗುತ್ತಿದ್ದು ಅಲ್ಲಿಯೂ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಯಶ್ ಬಗ್ಗೆ ಮಾತನಾಡಿದ್ದಾರೆ.

ಯಶ್ ಬಗ್ಗೆ ರಕ್ಷಿತ್ ಶೆಟ್ಟಿಗೆ ಯಾವ ರೀತಿಯ ಅಭಿಪ್ರಾಯ ಇದೆ? ‘SSE’ ಸ್ಟಾರ್ ವಿವರಿಸಿದ್ದು ಹೀಗೆ
ಯಶ್-ರಕ್ಷಿತ್
Edited By:

Updated on: Sep 24, 2023 | 6:06 PM

‘ಕೆಜಿಎಫ್ 2’ ಸಿನಿಮಾ ಬಳಿಕ ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಪರಭಾಷೆಯವರು ಕೂಡ ಯಶ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಮಾಡಿರುವ ಸಾಧನೆ ಅನೇಕರಿಗೆ ಸ್ಫೂರ್ತಿ. ಈಗ ಅವರ ಬಗ್ಗೆ ರಕ್ಷಿತ್ ಶೆಟ್ಟಿ (Rakshit Shetty) ಮಾತನಾಡಿದ್ದಾರೆ. ಯಶ್ ಬಗ್ಗೆ ಅವರಿಗೆ ಯಾವ ರೀತಿಯ ಅಭಿಪ್ರಾಯ ಇದೆ ಎಂಬುದನ್ನು ಅವರು ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ರಕ್ಷಿತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಈ ತಿಂಗಳ ಆರಂಭದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರಕ್ಕೆ ಹೇಮಂತ್ ರಾವ್ ಅವರು ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರದ ನಾಯಕಿ. ಈ ಚಿತ್ರ ಕನ್ನಡದಲ್ಲಿ ರಿಲೀಸ್ ಆದ ಬೆನ್ನಲ್ಲೇ ತೆಲುಗಿನಲ್ಲೂ ರಿಲೀಸ್ ಆಗಿದೆ. ಅಲ್ಲಿಯೂ ತೆರಳಿ ರಕ್ಷಿತ್ ಶೆಟ್ಟಿ ಅವರು ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ರಕ್ಷಿತ್ ಹಾಗೂ ರುಕ್ಮಿಣಿ ಅವರು ಹಲವು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ರಕ್ಷಿತ್ ಶೆಟ್ಟಿಗೆ ಯಶ್ ಬಗ್ಗೆ ಪ್ರಶ್ನೆ ಕೇಳಲಾಗಿದೆ.

‘ಯಶ್ ಬಗ್ಗೆ ನಿಮಗೆ ಇರುವ ಅಭಿಪ್ರಾಯ ಏನು’ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಅವರು ದೊಡ್ಡ ಕನಸುಗಾರ. ಅವರು ಏನೇ ಮಾಡಿದರೂ ಅದು ದೊಡ್ಡದಾಗಿರುತ್ತದೆ. ಜೀವನಕ್ಕಿಂತಲೂ ಅದು ದೊಡ್ಡದಾಗಿರುತ್ತದೆ’ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ರುಕ್ಮಿಣಿ ವಸಂತ್ ಅವರು ಯಶ್ ಅವರನ್ನು ‘ಸ್ವಾಗ್’ ಎಂದು ಕರೆದಿದ್ದಾರೆ.

ರಕ್ಷಿತ್ ಶೆಟ್ಟಿ ಹೇಳಿದ ಮಾತು ಅಕ್ಷರಶಃ ಸತ್ಯ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಯಶ್ ಏನೇ ಮಾಡಿದರೂ ತುಂಬಾನೇ ದೊಡ್ಡ ಮಟ್ಟದಲ್ಲಿರುತ್ತದೆ. ‘ಕೆಜಿಎಫ್ 2’ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ ಯಶ್ ಯಾವುದೋ ದೊಡ್ಡ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಮಾತನಾಡಿದ್ದ ಯಶ್ ಅವರು ‘ನಾನು ಒಂದು ಕ್ಷಣವೂ ಸುಮ್ಮನೆ ಕೂತಿಲ್ಲ. ಶೀಘ್ರವೇ ಈ ಬಗ್ಗೆ ಘೋಷಣೆ ಮಾಡುತ್ತೇನೆ’ ಎಂದಿದ್ದರು. ಅವರು ಏನು ಮಾಡುತ್ತಿದ್ದಾರೆ ಎಂಬ ಯಾವುದೇ ಸುಳಿವನ್ನು ಯಾರಿಗೂ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಏನೆಲ್ಲ ಇದೆ? ಟ್ರೇಲರ್​ ರಿಲೀಸ್​ ವೇಳೆ ಮಾಹಿತಿ ಬಿಟ್ಟುಕೊಟ್ಟ ರಕ್ಷಿತ್​ ಶೆಟ್ಟಿ

ಇನ್ನು, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ವಿಚಾರಕ್ಕೆ ಬರೋದಾದರೆ ಈಗ ರಿಲೀಸ್ ಆಗಿರೋದು ‘ಸೈಡ್​ ಎ’. ಸೆಪ್ಟೆಂಬರ್ 1ರಂದು ರಿಲೀಸ್ ಆಗಿದೆ. ‘ಸೈಡ್ ಬಿ’ ಅಕ್ಟೋಬರ್ 20ರಂದು ಬಿಡುಗಡೆ ಆಗಲಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅನೇಕ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಭರ್ಜರಿ ಪೈಪೋಟಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:58 pm, Sun, 24 September 23