2022 ಸ್ಯಾಂಡಲ್ವುಡ್ (Sandalwood) ಪಾಲಿಗೆ ವಿಶೇಷವಾಗಿದೆ. ಕೊವಿಡ್ ಕಾರಣದಿಂದ ಮಂಕಾಗಿದ್ದ ಚಿತ್ರರಂಗ ಖದರ್ ಪಡೆದುಕೊಂಡು ಮುಂದೆ ಸಾಗುತ್ತಿದೆ. ಕೇವಲ 8 ತಿಂಗಳಲ್ಲಿ ಕನ್ನಡದ ಹಲವು ಚಿತ್ರಗಳು ತೆರೆಗೆ ಬಂದು ಬಾಲಿವುಡ್, ಟಾಲಿವುಡ್ ಹಾಗೂ ಇತರ ಚಿತ್ರರಂಗದಲ್ಲಿ ಸದ್ದು ಮಾಡಿವೆ. ಈ ಪೈಕಿ ಯಶ್ (Yash), ಪುನೀತ್, ಸುದೀಪ್ ಹಾಗೂ ರಕ್ಷಿತ್ ಸಿನಿಮಾಗಳು 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿವೆ. ಈ ನಾಲ್ಕು ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿವೆ ಅನ್ನೋದು ವಿಶೇಷ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಅಂದೊಂದು ಕಾಲವಿತ್ತು. ಬಾಲಿವುಡ್ ಚಿತ್ರರಂಗ ಎಂದರೆ ಭಾರತ ಚಿತ್ರರಂಗ, ಭಾರತ ಚಿತ್ರರಂಗ ಎಂದರೆ ಬಾಲಿವುಡ್ ಎಂದು ಕರೆಯಲಾಗುತ್ತಿತ್ತು. ಆದರೆ, ಇತ್ತೀಚೆಗೆ ಬಾಲಿವುಡ್ ಸಿನಿಮಾಗಳು ಬಿಸ್ನೆಸ್ ಮಾಡಲು ಆಗದೆ ಒದ್ದಾಡುತ್ತಿವೆ. ಈ ಸಮಯದಲ್ಲಿ ದಕ್ಷಿಣ ಭಾರತದ ಚಿತ್ರಗಳು ಮಿಂಚಿವೆ. ಅದರಲ್ಲೂ ಕನ್ನಡ ಸಿನಿಮಾಗಳು ಶೈನ್ ಆಗುತ್ತಿವೆ.
‘ಜೇಮ್ಸ್’
ಪುನೀತ್ ರಾಜ್ಕುಮಾರ್ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಜೇಮ್ಸ್. ಅವರ ಬರ್ತ್ಡೇ ಅಂಗವಾಗಿ ಈ ವರ್ಷ ಮಾರ್ಚ್ 17ರಂದು ಸಿನಿಮಾ ತೆರೆಗೆ ಬಂತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆದ ‘ಜೇಮ್ಸ್’ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ಚೇತನ್ ಕುಮಾರ್ ನಿರ್ದೇಶನ ಇದೆ.
‘ಕೆಜಿಎಫ್ 2’
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅಪೂರಪದ ಚಿತ್ರ ಎಂಬ ಹೆಗ್ಗಳಿಕೆ ‘ಕೆಜಿಎಫ್ 2’ ಚಿತ್ರಕ್ಕೆ ಸಲ್ಲುತ್ತದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 1250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಯಶ್ ನಟನೆ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಹತ್ತು ಹಲವು ದಾಖಲೆ ಬರೆದಿದೆ. ಈ ಚಿತ್ರದಿಂದ ಕನ್ನಡ ಚಿತ್ರರಂಗದ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ.
‘777 ಚಾರ್ಲಿ’
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡಿಮೆ ಬಜೆಟ್ನಲ್ಲಿ ಸಿದ್ಧವಾದ ಚಿತ್ರ. ‘777 ಚಾರ್ಲಿ’ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರ ಪರಭಾಷಿಗರ ಮನ ಗೆಲ್ಲಲು ಯಶಸ್ವಿ ಆಗಿದೆ. ಈ ಚಿತ್ರದಿಂದ ನಿರ್ಮಾಪಕರಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.
‘ವಿಕ್ರಾಂತ್ ರೋಣ’
ಜುಲೈ 28ರಂದು ರಿಲೀಸ್ ಆದ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಕೇವಲ ನಾಲ್ಕು ದಿನಕ್ಕೆ ಈ ಸಿನಿಮಾ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ನಿರ್ದೇಶನ ಇದೆ. ಈ ಚಿತ್ರ ಒಟ್ಟಾರೆ ಎಷ್ಟು ಗಳಿಕೆ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
Published On - 3:49 pm, Tue, 2 August 22