AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಣದ ಬಳಿಕ ಚಿತ್ರರಂಗದಲ್ಲಿ ಹೊಸ ಹೆಜ್ಜೆ ಇಟ್ಟ ಯಶ್ ತಾಯಿ ಪುಷ್ಪಾ

ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ತೆಲುಗು ಚಿತ್ರ ‘ಘಾಟಿ’ಯ ಕರ್ನಾಟಕ ವಿತರಣೆ ಹಕ್ಕು ಇವರ ಕೈ ಸೇರಿದೆ. ಮಹಿಳಾ ಪ್ರಧಾನ ಚಿತ್ರವಾಗಿರುವುದು ವಿಶೇಷ. ಭವಿಷ್ಯದಲ್ಲಿ ಇನ್ನೂ ಹಲವು ಭಾಷೆಯ ಚಿತ್ರಗಳನ್ನು ವಿತರಿಸುವ ಯೋಜನೆ ಅವರಿಗೆ ಇದೆ.

ನಿರ್ಮಾಣದ ಬಳಿಕ ಚಿತ್ರರಂಗದಲ್ಲಿ ಹೊಸ ಹೆಜ್ಜೆ ಇಟ್ಟ ಯಶ್ ತಾಯಿ ಪುಷ್ಪಾ
ಪುಷ್ಪಾ
ರಾಜೇಶ್ ದುಗ್ಗುಮನೆ
|

Updated on:Aug 26, 2025 | 1:23 PM

Share

ನಟ ಯಶ್ ತಾಯಿ ಪುಷ್ಪಾ (Pushpa) ಅರುಣ್ ಕುಮಾರ್ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರದ ಮೂಲಕ ಅವರು ನಿರ್ಮಾಪಕಿ ಆಗಿದ್ದಾರೆ. ಈಗ ಪುಷ್ಪಾ ಅರುಣ್​ ಕುಮಾರ್ ಅವರು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಮೂಲಕ ಅವರು ಸಿನಿಮಾ ಹಂಚಿಕೆ ಕೂಡ ಆರಂಭಿಸಿದ್ದಾರೆ. ಅದು ಮಹಿಳಾ ಪ್ರಧಾನ ಸಿನಿಮಾ ಮೂಲಕ ಅನ್ನೋದು ಮತ್ತೊಂದು ವಿಶೇಷ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಚಿತ್ರವನ್ನು ಪುಷ್ಪಾ ಅವರು ಕನ್ನಡದಲ್ಲಿ ಹಂಚಿಕೆ ಮಾಡಲಿದ್ದಾರೆ.

ಪುಷ್ಪಾ ಅರುಣ್ ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಸಂದರ್ಶನಗಳನ್ನು ನೀಡಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಸಿನಿಮಾ ಹಂಚಿಕೆ ಕೂಡ ಮಾಡುತ್ತಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇಡೀ ರಾಜ್ಯಾದ್ಯಂತ ‘ಘಾಟಿ’ ಸಿನಿಮಾ ಹಂಚಿಕೆ ಮಾಡುತ್ತಿದ್ದಾರೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಇದನ್ನು ರಿಲೀಸ್ ಮಾಡುವ ಆಲೋಚನೆ ಅವರಿಗೆ ಇದೆ.

ಈ ಬಗ್ಗೆ ಪುಷ್ಪಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಫಾಟಿ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ಪಿಎ ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ’ ಎಂದು ಪುಷ್ಪಾ ಹೇಳಿದ್ದಾರೆ. ಅವರು ಹೊಸ ಹೆಜ್ಜೆ ಇಟ್ಟಿದ್ದಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ.

ಇದನ್ನೂ ಓದಿ
Image
2015ರ ಹಾಡಿನ ಟ್ಯೂನ್ ಹೋಲುತ್ತಿದೆ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್
Image
‘ಸು ಫ್ರಮ್ ಸೋ’ OTT ರಿಲೀಸ್ ದಿನಾಂಕ ರಿವೀಲ್ ಆದರೂ ನಿಂತಿಲ್ಲ ಕಲೆಕ್ಷನ್
Image
VIDEO: ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
Image
ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ

‘ಸಿನಿಮಾ ನಿರ್ಮಾಣಕ್ಕೆ ಬಂದಾಗ ಅನೇಕರು ಸಾಕಷ್ಟು ಪ್ರೀತಿ ತೋರಿಸಿದ್ದೀರಿ. ಅದೇ ಪ್ರೀತಿ ವಿತರಿಕಿಯಾದಾಗಲೂ ಇರಲಿ. ನಿಮ್ಮಲ್ಲೆ ಪ್ರೋತ್ಸಾಹ ಬೇಕು’ ಎಂದು ಪುಷ್ಪಾ ಅವರು ಹೇಳಿದ್ದಾರೆ. ಅವರು ಮೊದಲ ಹಂಚಿಕೆಯಲ್ಲಿ ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಅವಳಿನ್ನೂ ಸಣ್ಣವಳು’; ನನ್ನ ಬಗ್ಗೆ ಮಾತನಾಡಬೇಡಿ ಎಂದ ದೀಪಿಕಾ ದಾಸ್​ಗೆ ಪುಷ್ಪಾ ಪ್ರತಿಕ್ರಿಯೆ

‘ಘಾಟಿ’ ಸಿನಿಮಾ ತೆಲುಗು ಚಿತ್ರ. ಇದನ್ನು ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡುತ್ತಿದ್ದಾರೆ. ಅನುಷ್ಕಾ ಶೆಟ್ಟಿ, ವಿಕ್ರಮ್ ಪ್ರಭು ನಟಿಸುತ್ತಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 5ರಂದು ವಿಶ್ವಾದ್ಯಂತ ಬಿಡುಗಡೆ ಕಾಣಲಿದೆ. ಈ ಚಿತ್ರದ ಬಗ್ಗೆ ಅನುಷ್ಕಾ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Tue, 26 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ