AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಮ್ಯಾಗಜಿನ್ ಅಲ್ಲಿ ಯಶ್ ಫೋಟೋ; ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ

ಕೆಜಿಎಫ್ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಅವರ 'ಟಾಕ್ಸಿಕ್' ಸಿನಿಮಾ ಪ್ರಚಾರದ ಭಾಗವಾಗಿ ಪ್ರತಿಷ್ಠಿತ 'ವೆರೈಟಿ' ನಿಯತಕಾಲಿಕೆಯ ಕವರ್ ಪೇಜ್‌ನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ‘ದಿ ಯಶ್ ಎಫೆಕ್ಟ್’ ಶೀರ್ಷಿಕೆಯಡಿಯಲ್ಲಿ, ಒಬ್ಬ ನಟನಾಗಿ ಹಾಗೂ ನಿರ್ಮಾಪಕನಾಗಿ ಅವರ ಬೆಳವಣಿಗೆಯನ್ನು ವರದಿ ಮಾಡಲಾಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ವಿಷಯ.

ಅಂತಾರಾಷ್ಟ್ರೀಯ ಮ್ಯಾಗಜಿನ್ ಅಲ್ಲಿ ಯಶ್ ಫೋಟೋ; ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ
ಯಶ್
ರಾಜೇಶ್ ದುಗ್ಗುಮನೆ
|

Updated on: May 07, 2026 | 12:47 PM

Share

‘ಕೆಜಿಎಫ್’ ಮೂಲಕ ಇಡೀ ಭಾರತೀಯ ಚಿತ್ರರಂಗವನ್ನೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದಾರೆ. ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಹೀಗಿರುವಾಗಲೇ ಅಂತಾರಾಷ್ಟ್ರೀಯ ನಿಯತಕಾಲಿಕೆ ‘ವೆರೈಟಿ’ ತನ್ನ ಕವರ್ ಪೇಜ್ ಮೇಲೆ ಯಶ್ ಅವರ ಫೋಟೋವನ್ನು ಫೀಚರ್ ಮಾಡಿದೆ. ‘ಇದು ಯಶ್ ಎಫೆಕ್ಟ್’ ಎಂದು ಬರೆದಿದೆ.

1.ಪ್ರತಿಷ್ಠಿತ ‘ವೆರೈಟಿ’ ಮ್ಯಾಗಜೀನ್ ಕವರ್ ಪುಟದಲ್ಲಿ ಯಶ್

2. The Yash Effect’ ಹೆಸರಿನಲ್ಲಿ ರಾಕಿಂಗ್ ಸ್ಟಾರ್ ಅಬ್ಬರ

3. ಅಂತಾರಾಷ್ಟ್ರೀಯ ಮಟ್ಟದ ಮಾರ್ಕೆಟಿಂಗ್‌ನಿಂದ ಸಿನಿಪ್ರಿಯರು ಫಿದಾ

ಬಿಳಿ ಬಣ್ಣದ ಸೂಟ್ ಹಾಗೂ ಹ್ಯಾಟ್ ಧರಿಸಿ, ಐಷಾರಾಮಿ ಕಾರಿನ ಒಳಗೆ ಕುಳಿತಿರುವ ಯಶ್ ಅವರ ಸ್ಟೈಲಿಶ್ ಫೋಟೋ ಈಗ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಕವರ್ ಸ್ಟೋರಿಯು ಕೇವಲ ಒಬ್ಬ ನಟನಾಗಿ ಮಾತ್ರವಲ್ಲದೆ, ಒಬ್ಬ ಪ್ರಭಾವಿ ನಿರ್ಮಾಪಕನಾಗಿಯೂ ಯಶ್ ಹೇಗೆ ಬೆಳೆಯುತ್ತಿದ್ದಾರೆ ಎಂಬುದನ್ನು ವಿವರಿಸಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಚಿತ್ರದ ಪ್ರಚಾರದ ಭಾಗವಾಗಿ ಈ ವಿಶೇಷ ಫೀಚರ್ ಹೊರಬಂದಿದ್ದು, ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ದುಪ್ಪಟ್ಟು ಮಾಡಿದೆ. ಕನ್ನಡದ ನಟನ ಫೋಟೋ ಹಾಲಿವುಡ್ ಮ್ಯಾಗಜಿನ್​​ ಅಲ್ಲಿ ಫೀಚರ್ ಆಗಿರೋದು ನಿಜಕ್ಕೂ ಹೆಮ್ಮೆಯ ವಿಷಯ.

ಇದನ್ನೂ ಓದಿ: ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ

ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಟಾಕ್ಸಿಕ್’ ಸಿನಿಮಾ ಭಿನ್ನ ಅನುಭವ ನೀಡಲಿದೆ ಎಂದು ತಂಡ ಹೇಳಿದೆ. ಇದು ಮಾಮೂಲಿ ಮಾಸ್ ಎಂಟರ್‌ಟೈನರ್ ಸಿನಿಮಾ ಆಗಿರದೆ ಭಿನ್ನ ರೀತಿಯಲ್ಲಿ ಮೂಡಿ ಬರಲಿದೆಯಂತೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ಯಶ್ ಅವರ ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಕೂಡ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ವಿಶೇಷ.

ವೆರೈಟಿ ಕವರ್ ಪೇಜ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ #YashBOSS ಮತ್ತು #ToxicTheMovie ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿ ಬಂದಿವೆ. ಯಶ್ ತಮ್ಮ ಹಳೆಯ ‘ಲಾರ್ಜರ್ ದ್ಯಾನ್ ಲೈಫ್’ ಇಮೇಜ್‌ನಿಂದ ಹೊರಬಂದು, ಹೊಸ ರೀತಿಯ ಪ್ರಯೋಗಗಳಿಗೆ ಕೈ ಹಾಕುತ್ತಿರುವುದನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಲಾತ್ಮಕ ಸಿನಿಮಾಗಳಿಗೆ ಹೆಸರಾದ ಗೀತು ಮೋಹನ್ ದಾಸ್ ಮತ್ತು ಮಾಸ್ ಹೀರೋ ಯಶ್ ಅವರ ಈ ಅಪರೂಪದ ಸಮಾಗಮವು ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಮುನ್ಸೂಚನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು