AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು.

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​
ಕೃಷಿ ಭೂಮಿಯಲ್ಲಿ ಯಶ್​
ರಾಜೇಶ್ ದುಗ್ಗುಮನೆ
|

Updated on: Apr 12, 2021 | 4:42 PM

Share

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆದರೆ, ಈ ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್​​ಗಳು ಬೆಂಬಲವನ್ನೇ ನೀಡಿಲ್ಲ ಎನ್ನುವ ಮಾತು ಬಲವಾಗಿ ಕೇಳಿಬಂದಿತ್ತು. ಸ್ಟಾರ್​ಗಳು ಸಿನಿಮಾ ಮಾಡುತ್ತಾರೆ. ರೈತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳುತ್ತಾರೆ. ಆದರೆ ಅವರ ಬೆಂಬಲಕ್ಕೆ ಮಾತ್ರ ನಿಲ್ಲುವುದಿಲ್ಲ ಎನ್ನುವ ಆರೋಪವನ್ನು ಮಾಡಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಈಗ ಯಶ್​ ಸ್ವತಃ ರೈತನಾಗೋಕೆ ಹೊರಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಭಿಮಾನಿಗಳ ಮನ ಗೆದ್ದಿದೆ. ಯಶ್​ಗೆ ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಇದೆ. ಅನೇಕ ಸಂದರ್ಶನಗಳಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಿದೆ. ನಟನೆಯ ಜತೆ ಜತೆಗೆ ಕೃಷಿಗೂ ಒತ್ತು ಕೊಡುವುದಾಗಿ ಅವರು ಈ ಮೊದಲು ಹೇಳಿದ್ದರು. ಅಂತೆಯೇ, ಯಶ್​ ಹಾಸನದ ತಿಮ್ಲಾಪುರ ಬಳಿಯ ತಮ್ಮ ಜಮೀನಿನಲ್ಲಿ ಕೃಷಿ ಮಾಡೋಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮಳೆಗಾಲ ಆರಂಭವಾಗೋಕೆ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಮಳೆಗಾಲ ಬಂತೆಂದರೆ ಬಿತ್ತನೆಕಾರ್ಯ ಆರಂಭವಾಗುತ್ತದೆ. ಈಗಲೇ ಭೂಮಿ ಹದ ಮಾಡಿದರೆ ಮಳೆಗಾಲದಲ್ಲಿ ಕೃಷಿ ಆರಂಭಿಸಬಹುದು ಎಂಬುದು ಯಶ್​ ಆಲೋಚನೆ. ಇನ್ನು, ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಒಂದೊಮ್ಮೆ ಲಾಕ್​ಡೌನ್​ ಘೋಷಣೆ ಆದರೆ, ಯಶ್​ ಹಾಸನಕ್ಕೆ ತೆರಳಿ ಅಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಯಶ್​ ಮುಂದಾಳತ್ವದಲ್ಲಿ ಜಮೀನನ್ನು ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದೆ. ಈ ಫೋಟೋಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಈ ಜಮೀನಿನಲ್ಲಿ ಮಾದರಿ ಕೃಷಿ ಮಾಡಬೇಕು ಎಂಬುದು ಯಶ್​ ಉದ್ದೇಶವಂತೆ. ಇಲ್ಲಿ ನೀರು ಮರುಪೂರ್ಣ ಮಾಡೋಕೆ ವ್ಯವಸ್ಥೆ, ಇಂಗು ಗುಂಡಿ ನಿರ್ಮಾಣ ಮತ್ತಿತ್ಯಾದಿ ಕೆಲಸ ಮಾಡೋ ಆಲೋಚನೆ ಅವರದ್ದು. ಇದರಿಂದ ಅಂತರ್ಜಲ ಹೆಚ್ಚೋಕೆ ಸಹಕಾರಿಯಾಗಲಿದೆ ಎಂಬುದು ಅವರ ಆಶಯ.

ಜಮೀನು ವಿವಾದದಲ್ಲಿ ಇತ್ತೀಚೆಗೆ ಯಶ್ ಹೆಸರು ಕೇಳಿ ಬಂದಿತ್ತು. ದೇವಸ್ಥಾನದ ಜಾಗವನ್ನು ಅವರು ಅತಿಕ್ರಮಿಸಿದ್ದಾರೆ ಎನ್ನುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು. ನಂತರ ಗ್ರಾಮಸ್ಥರು ಹಾಗೂ ಯಶ್ ತಂಡ ಮಾತುಕತೆ ನಡೆಸಿ ವಿವಾದವನ್ನು ಬಗೆಹರಿಸಿಕೊಂಡಿತ್ತು.

ಇದನ್ನೂ ಓದಿ: KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ