ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ.

ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 05, 2022 | 1:40 PM

ಯಶ್ ಅವರು ಸದ್ಯ ‘ಕೆಜಿಎಫ್ 2’ (KGF: Chapter 2) ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಅವರು ಆದಷ್ಟು ಬೇಗ ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಘೋಷಣೆ ಆಗುವ ಸೂಚನೆ ಸಿಕ್ಕಿಲ್ಲ. ಈ ಮಧ್ಯೆ ಹೊಸ ವದಂತಿ ಒಂದು ಹುಟ್ಟಿಕೊಂಡಿದೆ. ಯಶ್ (Yash) ಅವರು ‘ಬ್ರಹ್ಮಾಸ್ತ್ರ ಪಾರ್ಟ್​ 2: ದೇವ್​’ ಚಿತ್ರದ ಆಫರ್ ಅನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಸದ್ಯದ ಮಟ್ಟಿಗೆ ಇದು ವದಂತಿ. ಈ ವಿಚಾರದಲ್ಲಿ ಯಾರಾದರೂ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಬಾಲಿವುಡ್​ಗೆ ಗ್ರಹಣ ಹಿಡಿದಿದೆ. ರಿಲೀಸ್ ಆದ ಯಾವ ಚಿತ್ರಗಳೂ ಯಶಸ್ಸು ಕಾಣುತ್ತಿಲ್ಲ. ಈ ವರ್ಷ ಹಿಟ್ ಆದ ಕೆಲವೇ ಕೆಲವು ಸಿನಿಮಾಗಳ ಸಾಲಿನಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರಕ್ಕೆ ಕರಣ್​ ಜೋಹರ್ ಮೊದಲಾದವರು ಬಂಡವಾಳ ಹೂಡಿದ್ದರು. ರಣಬೀರ್ ಕಪೂರ್-ಆಲಿಯಾ ಭಟ್ ಜತೆ ದಕ್ಷಿಣದ ನಟರು ನಟಿಸಿದ್ದರು. ಈಗ ‘ಬ್ರಹ್ಮಾಸ್ತ್ರ 2’ ಕೆಲಸಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ದೇವ್ ಪಾತ್ರ ಮಾಡಲು ಯಶ್​​ಗೆ ಆಫರ್ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಯಶ್ ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಕೆಜಿಎಫ್ 2’ ತೆರೆಗೆ ಬಂದ ನಂತರದಲ್ಲಿ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿತು. ಅವರು ದೊಡ್ಡ ದೊಡ್ಡ ಚಿತ್ರಗಳನ್ನು ಮಾಡುವತ್ತ ಆಸಕ್ತಿ ತೋರುತ್ತಿದ್ದಾರೆ. ಈ ಕಾರಣಕ್ಕೆ ಹೊಸ ಸಿನಿಮಾ ಘೋಷಣೆ ವಿಳಂಬ ಆಗುತ್ತಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅಯಾನ್ ಮುಖರ್ಜಿ ಹಾಗೂ ಕರಣ್ ಅವರು ‘ಬ್ರಹ್ಮಾಸ್ತ್ರ 2’ ಬಗ್ಗೆ ಯಶ್ ಜತೆ ಚರ್ಚೆ ಮಾಡಿದ್ದರು. ಆದರೆ, ಯಶ್ ಈ ಚಿತ್ರದಲ್ಲಿ ನಟಿಸಲು ನೋ ಎಂದಿದ್ದಾರೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಹೇಳಿದ ಮಾತನ್ನು ನಿಜ ಮಾಡಲು ಹೊರಟ ಅಪ್ಪುವಿನ ‘ಗಂಧದ ಗುಡಿ’

ಯಶ್ ಅವರು ‘ಕೆಜಿಎಫ್ 2’ ಚಿತ್ರಕ್ಕಿಂತ ದೊಡ್ಡದನ್ನು ಏನಾದರೂ ಮಾಡಲು ನೋಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ 2’ ಆ ಮಟ್ಟಕ್ಕೆ ನಿಲ್ಲಲು ಸಾಧ್ಯವಿಲ್ಲ ಅನ್ನೋದು ಯಶ್ ಅಭಿಪ್ರಾಯ ಎನ್ನಲಾಗಿದೆ. ಅಲ್ಲದೆ, ಈಗ ಗುರುತಿಸಿಕೊಂಡಿರುವ ಫ್ರಾಂಚೈಸಿಯಲ್ಲಿ ನಟಿಸೋಕೆ  ಅವರಿಗೆ ಇಷ್ಟ ಇಲ್ಲ. ಹೀಗಾಗಿ ಅವರು ಆಫರ್ ರಿಜೆಕ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

Published On - 1:29 pm, Sat, 5 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ