AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ರಾವಣನ ಪಾತ್ರವನ್ನು ಯಶ್​ ತಿರಸ್ಕರಿಸಿದ್ದು ಒಳ್ಳೆಯದೇ ಆಯ್ತು’: ಟ್ವಿಟರ್​ನಲ್ಲಿ ಅಭಿಪ್ರಾಯ ಹಂಚಿಕೊಂಡ ಫ್ಯಾನ್ಸ್​

Sandalwood News: ಯಶ್​ ಅವರ ಮುಂದಿನ ಸಿನಿಮಾ ಬಗ್ಗೆ ಅನೇಕ ಗಾಳಿಸುದ್ದಿಗಳು ಹರಡಿವೆ. ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಶ್ರೀಲಂಕಾದಲ್ಲಿ ಅನುಮತಿ ಪಡೆದಿದ್ದಾರೆ ಎಂದು ಕೂಡ ಹೇಳಲಾಗಿತ್ತು.

Yash: ‘ರಾವಣನ ಪಾತ್ರವನ್ನು ಯಶ್​ ತಿರಸ್ಕರಿಸಿದ್ದು ಒಳ್ಳೆಯದೇ ಆಯ್ತು’: ಟ್ವಿಟರ್​ನಲ್ಲಿ ಅಭಿಪ್ರಾಯ ಹಂಚಿಕೊಂಡ ಫ್ಯಾನ್ಸ್​
ಯಶ್​
ಮದನ್​ ಕುಮಾರ್​
|

Updated on: Jun 13, 2023 | 2:53 PM

Share

ಬಾಲಿವುಡ್​ನಲ್ಲಿ ಖ್ಯಾತ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ಆ್ಯಕ್ಷನ್​-ಕಟ್​ ಹೇಳಲಿರುವ ರಾಮಾಯಣ (Ramayana) ಆಧಾರಿತ ಸಿನಿಮಾ ಬಗ್ಗೆ ಹತ್ತಾರು ಗಾಸಿಪ್​ಗಳು ಹರಿದಾಡುತ್ತಿವೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಸೀತೆ ಪಾತ್ರದಲ್ಲಿ ಆಲಿಯಾ ಭಟ್​ ಹಾಗೂ ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎನ್ನಲಾಗುತ್ತಿದೆ. ಅದೇ ರೀತಿ ರಾವಣನ ಪಾತ್ರವನ್ನು ಯಶ್​ (Yash) ಅವರಿಗೆ ನೀಡಲಾಗುವುದು ಎಂಬ ಸುದ್ದಿ ಕೂಡ ಹರಿದಾಡಿತ್ತು. ಆದರೆ ಆ ಪಾತ್ರವನ್ನು ಮಾಡಲು ಯಶ್​ ಒಪ್ಪಿಕೊಂಡಿಲ್ಲ ಎಂದು ಈಗ ಹೊಸ ಮಾಹಿತಿ ಕೇಳಿಬಂದಿದೆ. ‘ರಾಕಿಂಗ್​ ಸ್ಟಾರ್​’ ಅವರು ರಾವಣನ ಪಾತ್ರವನ್ನು ತಿರಸ್ಕರಿಸಿದ್ದು ಒಳ್ಳೆಯದೇ ಆಯಿತು ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಯಶ್​ ಅವರು 19ನೇ ಸಿನಿಮಾ ಅನೌನ್ಸ್​ ಮಾಡುವುದು ಬಾಕಿ ಇದೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಅವರು ಹೊಸ ಸಿನಿಮಾ ಘೋಷಿಸಿಲ್ಲ. ಆದಷ್ಟು ಬೇಗ ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಈಗ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಇಂಥ ಸಂದರ್ಭದಲ್ಲಿ ಅವರು ನೆಗೆಟಿವ್​ ಪಾತ್ರ ಮಾಡುವುದು ಸರಿಯಲ್ಲ ಎಂಬುದು ಅಭಿಮಾನಿಗಳ ಅಭಿಪ್ರಾಯ. ಅದಕ್ಕೆ ಅನುಗುಣವಾಗಿಯೇ ಯಶ್​ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ನಿತೇಶ್​ ತಿವಾರಿ ಅವರ ರಾಮಾಯಣ ಆಧಾರಿತ ಸಿನಿಮಾ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಪಾತ್ರವರ್ಗದ ಆಯ್ಕೆ ಬಗ್ಗೆ ಕೇಳಿಬಂದ ಗಾಸಿಪ್​ ಕುರಿತು ಸೆಲೆಬ್ರಿಟಿಗಳು ಕೂಡ ಮಾತನಾಡುತ್ತಿದ್ದಾರೆ. ಯಶ್​ಗೆ ರಾವಣನ ಪಾತ್ರದ ಆಫರ್​ ನೀಡಲಾಗಿದೆ ಎಂಬ ಸುದ್ದಿ ಕೇಳಿ ಇತ್ತೀಚೆಗೆ ಕಂಗನಾ ರಣಾವತ್​ ಅವರು ಗರಂ ಆಗಿದ್ದರು. ಯಾವುದೇ ಹೆಸರನ್ನು ಪ್ರಾಸ್ತಪಿಸದೇ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು. ರಣಬೀರ್​ ಕಪೂರ್​ಗೆ ರಾಮನ ಪಾತ್ರ ನೀಡಿ, ಯಶ್​ಗೆ ರಾವಣನ ಪಾತ್ರ ನೀಡುವುದು ಕಿಂಚಿತ್ತೂ ಸರಿಯಲ್ಲ ಎಂಬ ಅರ್ಥಬರುವ ಹಾಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

‘ದಕ್ಷಿಣದ ಯುವ ಸೂಪರ್​ ಸ್ಟಾರ್​ ಒಬ್ಬರು ಫ್ಯಾಮಿಲಿ ಮ್ಯಾನ್​ ರೀತಿ ಗುರುತಿಸಿಕೊಂಡಿದ್ದಾರೆ. ಎಲ್ಲ ರೀತಿಯಿಂದಲೂ ಅವರು ರಾಮನ ರೀತಿ ಕಾಣುತ್ತಾರೆ. ಅಂಥವರಿಗೆ ಹೋಗಿ ರಾವಣನ ಪಾತ್ರ ನೀಡುತ್ತಾರಂತೆ. ಇದು ಎಂಥ ಕಲಿಯುಗ? ಬಡಕಲು ದೇಹ ಇರುವ, ಡ್ರಗ್​ ಅಡಿಕ್ಟ್ ಆಗಿರುವಂತವನು ರಾಮನ ಪಾತ್ರ ಮಾಡಬಾರದು. ಜೈ ಶ್ರೀರಾಮ್​’ ಎಂದು ಕಂಗನಾ ರಣಾವತ್​ ಅವರು ಇನ್​ಸ್ಟಾಗ್ರಾಮ್​​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಯಶ್​ ಅವರು ಯಾವ ನಿರ್ದೇಶಕರ ಜೊತೆ ಕೈ ಜೋಡಿಸುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅವರ ಹೊಸ ಸಿನಿಮಾಗೆ ಬಂಡವಾಳ ಹೂಡಲಿರುವ ನಿರ್ಮಾಣ ಸಂಸ್ಥೆ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿಲ್ಲ. ಆದರೆ ಅನೇಕ ಗಾಳಿ ಸುದ್ದಿಗಳು ಹರಡಿರುವುದಂತೂ ನಿಜ. ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಶ್ರೀಲಂಕಾದಲ್ಲಿ ಅನುಮತಿ ಪಡೆದಿದ್ದಾರೆ ಎಂಬ ಸುದ್ದಿ ಕೆಲವು ದಿಗಳ ಹಿಂದೆ ಕೇಳಿಬಂದಿತ್ತು.

FAQ

ನಟ ಯಶ್​ ಅವರ ಮೂಲ ಹೆಸರು ಏನು?

ಉತ್ತರ: ನವೀನ್​ ಕುಮಾರ್​ ಗೌಡ

‘ಕೆಜಿಎಫ್​’ ಹೀರೋ ಯಶ್​ ಜನ್ಮ ದಿನಾಂಕ ಯಾವುದು?

ಉತ್ತರ: ಜನವರಿ 8

ನಟ ಯಶ್​ ಅವರ ಮಕ್ಕಳ ಹೆಸರು ಏನು?

ಉತ್ತರ: ಆಯ್ರಾ ಯಶ್​ ಹಾಗೂ ಯಥರ್ವ್​ ಯಶ್​

ಯಶ್​ ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ಯಾವುದು?

ಉತ್ತರ: ಮೊಗ್ಗಿನ ಮನಸು

‘Yash 19’ ಎಂದರೆ ಏನು?

ಉತ್ತರ: ಯಶ್​ ಅಭಿನಯಿಸಲಿರುವ 19ನೇ ಸಿನಿಮಾ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ