Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ರಾಕಿಂಗ್​ ಸ್ಟಾರ್​.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?

ಸಾರಿಗೆ ನೌಕರರ ಪತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಯಶ್ ಅಂಥವರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದೇ ಆದಲ್ಲಿ ಸಾರಿಗೆ ನೌಕರರಿಗೆ ಆನೆ ಬಲ ಬಂದಂತಾಗಲಿದೆ.

ಸಾರಿಗೆ ನೌಕರರ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ರಾಕಿಂಗ್​ ಸ್ಟಾರ್​.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?
ನಟ ಯಶ್​ ಮತ್ತು ಅವರಿಗೆ ಬರೆದಿರುವ ಪತ್ರ
Follow us
Skanda
|

Updated on:Apr 15, 2021 | 11:43 AM

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ತಾರ್ಕಿಕ ಅಂತ್ಯ ಕಾಣದೇ ಮುಷ್ಕರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರವನ್ನು ಬಿಗಿಗೊಳಿಸಲು ಪ್ರಯತ್ನಿಸುತ್ತಿರುವ ಸಾರಿಗೆ ನೌಕರರು ಬೇರೆ ಬೇರೆ ವಲಯದವರನ್ನು ತಲುಪುವ ಮೂಲಕ ಬೆಂಬಲ ಪಡೆಯುತ್ತಿದ್ದಾರೆ. ನಿನ್ನೆ ಸ್ಯಾಂಡಲ್​ವುಡ್​ನ ಬಹುಬೇಡಿಕೆ ನಟ, ರಾಕಿಂಗ್​ ಸ್ಟಾರ್ ಯಶ್ ಅವರಿಗೆ ಸಾರಿಗೆ ನೌಕರರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಹರಿದಾಡಿತ್ತು. ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದ ಆ ಪತ್ರದಲ್ಲಿ ನಿಮ್ಮ ತಂದೆಯವರೂ ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿತ್ತು. ಇದೀಗ ಸ್ವತಃ ಯಶ್ ಈ ಪತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಹೆಸರಿನಲ್ಲಿ ಪತ್ರ ಬರೆಯಲಾಗಿರುವ ಪತ್ರವು ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯಿಂದ ಆರಂಭವಾಗಿದೆ. ಅಲ್ಲದೇ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ರವಾನೆ ಮಾಡಿದ್ದಾರೋ, ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ. ಆದರೆ, ಇದೀಗ ಯಶ್​ ಎರಡೂ ಕೈ ಜೋಡಿಸುವ ಇಮೋಜಿಯೊಂದಿಗೆ ಪತ್ರದ ಚಿತ್ರವನ್ನು ಟ್ವೀಟ್ ಮಾಡಿರುವುದು ಹಲವು ಕುತೂಹಲಗಳಿಗೆ ದಾರಿ ಮಾಡಿಕೊಟ್ಟಿದೆ.

ಯಶ್ ಅವರ ತಂದೆ ಸಾರಿಗೆ ನೌಕರರಾಗಿದ್ದರು ಎಂಬ ವಿಷಯವನ್ನಿಟ್ಟುಕೊಂಡು, ನಿಮ್ಮ ತಂದೆಯವರು ಅವರ ಅನುಭವ, ನೋವನ್ನು ನಿಮ್ಮ ಜತೆ ಹಂಚಿಕೊಂಡಿರಬಹುದು. ನೀವು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದೀರಿ. ಈಗ ನಮಗೆ ಬೆಂಬಲಿಸಿ ಎಂಬ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಸದ್ಯ ಈ ಪತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆದರೆ, ಪತ್ರಕ್ಕೆ ಸಂಬಂಧಿಸಿದಂತೆ ಇಮೋಜಿಯ ಹೊರತಾಗಿ ಯಾವುದೇ ಸಾಲುಗಳನ್ನು ಬರೆದುಕೊಂಡಿಲ್ಲವಾದ್ದರಿಂದ ಅವರ ನಿಲುವು ಏನು? ಮುಷ್ಕರಕ್ಕೆ ಬೆಂಬಲ ಸೂಚಿಸುತ್ತಾರಾ? ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಆರನೇ ವೇತನ ಆಯೋಗದ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಎಷ್ಟೇ ಬಿಗಿಪಟ್ಟು ಹಿಡಿದರೂ ಸರ್ಕಾರ ಮಾತ್ರ ಕಟ್ಟುನಿಟ್ಟಾಗಿ ಅದು ಸಾಧ್ಯವೇ ಇಲ್ಲ ಎಂದು ತಿಳಿಸಿದೆ. ಆದರೆ, ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯಲು ಒಪ್ಪದ ನೌಕರರು ಬೇಡಿಕೆ ಈಡೇರುವ ತನಕವೂ ಮುಷ್ಕರ ಮಾಡುವುದಾಗಿ ಎಚ್ಚರಿಸಿದ್ದಾರೆ. ಏತನ್ಮಧ್ಯೆ ಯಶ್ ಅಂಥವರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದೇ ಆದಲ್ಲಿ ಸಾರಿಗೆ ನೌಕರರಿಗೆ ಆನೆ ಬಲ ಬಂದಂತಾಗಲಿದೆ.

ಇದನ್ನೂ ಓದಿ: ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು 

KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

Published On - 11:41 am, Thu, 15 April 21

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು