ಕಾಡಿನಲ್ಲಿ ಸಿಕ್ಕಿಹಾಕಿಕೊಂಡ ಹುಡುಗ-ಹುಡುಗಿ ಕಥೆ; ‘ಜಂಗಲ್‌ ಮಂಗಲ್‌’ ಈ ವಾರ ರಿಲೀಸ್

ಕಾಡಿಗೆ ಹೋದ ಹುಡುಗ-ಹುಡುಗಿ ಊರಿನವರ ಕೈಗೆ ಸಿಕ್ಕಿಬೀಳುತ್ತಾರೆ. ಬಳಿಕ ಏನಾಗುತ್ತದೆ ಎಂಬುದೇ ಈ ಚಿತ್ರದ ಕಥೆ. ರಕ್ಷಿತ್ ಕುಮಾರ್ ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಯಶ್‌ ಶೆಟ್ಟಿ ಮತ್ತು ಹರ್ಷಿತಾ ರಾಮಚಂದ್ರ ಜೋಡಿ ಆಗಿದ್ದಾರೆ. ಕೆಲವು ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾದ ಕಥೆ ಸಿದ್ಧಪಡಿಸಲಾಗಿದೆ.

ಕಾಡಿನಲ್ಲಿ ಸಿಕ್ಕಿಹಾಕಿಕೊಂಡ ಹುಡುಗ-ಹುಡುಗಿ ಕಥೆ; ‘ಜಂಗಲ್‌ ಮಂಗಲ್‌’ ಈ ವಾರ ರಿಲೀಸ್
Yash Shetty, Harshitha Ramachandra

Updated on: Jul 01, 2025 | 9:17 PM

ಒಂದು ಡಿಫರೆಂಟ್ ಕಥಾಹಂದರ ಇರುವ ‘ಜಂಗಲ್‌ ಮಂಗಲ್‌’ (Jungle Mangal) ಸಿನಿಮಾ ಜುಲೈ 4ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರವು ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿದೆ. ರಕ್ಷಿತ್‌ ಕುಮಾರ್‌ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಿನಿಮಾ, ಧಾರಾವಾಹಿ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವ ಪಡೆದಿರುವ ಅವರು ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕನಾಗಿ ‘ಜಂಗಲ್‌ ಮಂಗಲ್‌’ ಸಿನಿಮಾ ಮಾಡಿದ್ದಾರೆ. ಯಶ್ ಶೆಟ್ಟಿ (Yash Shetty), ಹರ್ಷಿತಾ ರಾಮಚಂದ್ರ ಅವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

‘ಜಂಗಲ್‌ ಮಂಗಲ್‌’ ಎಂಬ ಟೈಟಲ್ ಗಮನ ಸೆಳೆಯುತ್ತಿದೆ. ಯಾವುದೋ ಒಂದು ಕಾರಣಕ್ಕೆ ಕಾಡಿಗೆ ಹೋಗುವ ಹುಡುಗ-ಹುಡುಗಿಗೆ ಎದುರಾಗುವ ಸಮಸ್ಯೆಗಳೇ ಈ ಸಿನಿಮಾದ ಹೈಲೈಟ್‌. ಒಂದೇ ದಿನದಲ್ಲಿ ನಡೆಯುವ ಕಥೆ ಇದು. ನೈಜ ಪಾತ್ರಗಳನ್ನು ಆಧರಿಸಿ, ಕಾಲ್ಪನಿಕ ಅಂಶಗಳನ್ನು ಸೇರಿಸಿ ಈ ಸಿನಿಮಾ ಮಾಡಲಾಗಿದೆ. ಕಾಡಿನಲ್ಲಿ ನಡೆಯುವ ಕಥೆ ಆದ್ದರಿಂದ ಜಂಗಲ್ ಮಂಗಲ್ ಎಂದು ಶೀರ್ಷಿಕೆ ಇಡಲಾಗಿದೆ.

‘ಈ ಸಿನಿಮಾದಲ್ಲಿ ಕಾಣುವ ಪಾತ್ರಗಳು ಕರಾವಳಿ ಭಾಗಕ್ಕೆ ಹತ್ತಿರವಾದವು. ಅನೇಕ ಯುವ ಜೋಡಿಗಳು ಕಾಡಿನಲ್ಲಿ ಹಳ್ಳಿಗರ ಕೈಗೆ ಸಿಕ್ಕಿಬಿದ್ದ ಉದಾಹರಣೆಗಳು ಇವೆ. ಉತ್ತರ ಭಾರತದ ಕಡೆಗೆ ಹೀಗೆ ಸಿಕ್ಕವರನ್ನು ಜಂಗಲ್‌ ಮೇ ಮಂಗಲ್‌ ಎಂದು ಕರೆಯುತ್ತಾರೆ’ ಎಂದಿದ್ದಾರೆ ನಿರ್ದೇಶಕ ರಕ್ಷಿತ್‌ ಕುಮಾರ್‌. ಒಂದಷ್ಟು ತುಳು, ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ, ಸಹ-ನಿರ್ದೇಶಕನಾಗಿ ಕೆಲಸ ಮಾಡಿದ ಅವರು ಈಗ ಆ ಅನುಭವಗಳ ಆಧಾರದಲ್ಲಿ ಮೊದಲ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ನಿರ್ದೇಶಕ ರಕ್ಷಿತ್ ಕುಮಾರ್ ಅವರಿಗೆ ನಟ ಯಶ್‌ ಶೆಟ್ಟಿ ಅವರು ಕಳೆದ ನನಗೆ 10 ವರ್ಷಗಳಿಂದ ಪರಿಚಯ. ‘ನಾಯಕನ ಪಾತ್ರಕ್ಕೆ ಅವರೇ ನನ್ನ ಮೊದಲ ಆಯ್ಕೆ ಆಗಿದ್ದರು. ಬಾಬು ಪಾತ್ರಕ್ಕೆ ಉಗ್ರಂ ಮಂಜು ಅವರೇ ಸೂಕ್ತ ಅನಿಸಿತು’ ಎಂದು ಪಾತ್ರವರ್ಗದ ಆಯ್ಕೆ ಬಗ್ಗೆ ನಿರ್ದೇಶಕರು ಹೇಳಿದ್ದಾರೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಈ ಚಿತ್ರದ ಶೂಟಿಂಗ್ ಮಾಡಲಾಗಿದೆ.

ಇದನ್ನೂ ಓದಿ: ಯಶ್ ಶೆಟ್ಟಿ ನಟನೆಯ ‘ಜಂಗಲ್ ಮಂಗಲ್’ ಸಿನಿಮಾಗೆ ಶೀರ್ಷಿಕೆ ಕೊಟ್ಟ ಯೋಗರಾಜ್ ಭಟ್

ಈ ಸಿನಿಮಾವನ್ನು ಸಿಂಪಲ್ ಸುನಿ ಅರ್ಪಿಸುತ್ತಿದ್ದಾರೆ. ‘ನಮ್ಮ ಚಿತ್ರಕ್ಕೆ ಸಿಂಪಲ್‌ ಸುನಿ ಅವರ ಸಹಕಾರ ದೊಡ್ಡದು. ನಮ್ಮ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಷ್ಟೇ ಅಲ್ಲದೇ, ಅವರ ಬ್ಯಾನರ್​ನಿಂದಲೇ ಸಿನಿಮಾವನ್ನು ಪ್ರಸೆಂಟ್ ಮಾಡುತ್ತಿದ್ದಾರೆ’ ಎಂದು ನಿರ್ದೇಶಕ ರಕ್ಷಿತ್ ಕುಮಾರ್ ಮಾಹಿತಿ ನೀಡಿದ್ದಾರೆ. ಚಿತ್ರದ ಟ್ರೇಲರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 pm, Tue, 1 July 25